ಈ ದಿನ ಇಂಪ್ಯಾಕ್ಟ್ l ಕಾಲು ಸಂಕ ಹೋಗಿ ಸೇತುವೆ ನಿರ್ಮಾಣ; ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು

Date:

ಹಳ್ಳ ದಾಟಲು ಸೇತುವೆ ಇಲ್ಲ. ಜನರು ಒಂದೂರಿಂದ ಮತ್ತೊಂದು ಊರಿಗೆ ತೆರಳಲು ದಿನನಿತ್ಯ ಮರದ ದಿಮ್ಮಿ ಅಳವಡಿಸಿದ್ದ, ಕಾಲು ಸಂಕದಲ್ಲಿಯೇ ಓಡಾಡಬೇಕಾಗಿತ್ತು. ಹಾಗೆಯೇ, ಮಳೆಗಾಲದಲ್ಲಂತೂ ಪರಿಸ್ಥಿತಿ ಇನ್ನೂ ಹದಗೆಟ್ಟಿತ್ತು. ಆದರೆ ಆ ಗ್ರಾಮಕ್ಕೆ ಈಗ ಸೇತುವೆ ಭಾಗ್ಯ ಲಭಿಸಿದೆ. ಹೌದು ಇದಕ್ಕೆ ಕಾರಣವಾದದ್ದು ಈ ದಿನ.ಕಾಮ್ ವರದಿ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೊರಲೇ ಗ್ರಾಮವು ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿದೆ. ಈ ಗ್ರಾಮದಲ್ಲಿ ಹೆಚ್ಚಾಗಿ ಆದಿವಾಸಿ ಮತ್ತು ಬುಡಕಟ್ಟು ಸಮುದಾಯದ ಜನರು ವಾಸುತ್ತಿದ್ದಾರೆ.

Screenshot 2025 09 01 17 05 34 22 7352322957d4404136654ef4adb64504
ಮೊದಲ ಹಂತದ ಸೇತುವೆ ಅಭಿವೃದ್ಧಿ ಕಾಮಗಾರಿ

ಬೇಸಿಗೆಯಲ್ಲಿ ಹಳ್ಳದಲ್ಲಿ ನೀರು ಕಡಿಮೆ ಇರುವುದರಿಂದ ಜೀವನ ಹೇಗೂ ಸಾಗುತ್ತದೆ. ಆದರೆ, ಮಳೆಗಾಲದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತವೆ. ಆಗ, ಪಕ್ಕದೂರಿಗೆ ಹೋಗಲೂ ಕಷ್ಟ ಪಡಬೇಕಾಗಿತ್ತು. ಸೇತುವೆ ಇಲ್ಲದೆ ದಿನಸಿ ಹಾಗೂ ಹಲವು ಸಾಮಗ್ರಿಗಳನ್ನು, ಕೃಷಿ ಯಂತ್ರೋಪಕರಣಗಳನ್ನು ಸಹ ಹೊತ್ತೊಯ್ಯಲು ಹರಸಾಹಸ ಪುಡುವಂತಾಗಿತ್ತು. ಈ ಕುರಿತು 12 ಸೆಪ್ಟಂಬರ್ 2023ರಲ್ಲಿ ಈ ದಿನ.ಕಾಮ್ ವರದಿ ಮತ್ತು ವಿಡಿಯೋ ವರದಿ ಪ್ರಕಟಿಸಿತ್ತು. ಈ ದಿನ ವರದಿಯಿಂದ  ಕ್ಷೇತ್ರದ ಶಾಸಕರಿಗೆ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಿಗೆ ಗಮನಕ್ಕೆ ತಂದಿದ್ದ ಬೆನ್ನಲ್ಲೇ ಈಗ ಸೇತುವೆ ನಿರ್ಮಾಣವಾಗಿರುವುದರಿಂದ ಆ ಸಮಸ್ಯೆ ಬಗೆಹರಿದಿದೆ ಎಂದು ಗ್ರಾಮಸ್ಥರು ಈ ದಿನ. ಕಾಮ್ ಗೆ ಧನ್ಯವಾದ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2025 09 01 17 05 58 21 7352322957d4404136654ef4adb64504
ಎರಡನೇ ಹಂತದ ಸೇತುವೆ ಅಭಿವೃದ್ಧಿ ಕಾಮಗಾರಿ

ಪುಟ್ಟ ಮಕ್ಕಳನ್ನು ಅಂಗನವಾಡಿಗೆ ಕಳಿಸಲು ಪೋಷಕರು ಭಯ ಪಡುವಂತಾಗಿತ್ತು. ಗರ್ಭಿಣಿಯರು, ಬಾಣಂತಿಯರು ಹಳ್ಳ ದಾಟಲಾಗದೆ ಸಂಕಷ್ಟ ಎದುರಿಸಬೇಕಾಗಿತ್ತು. ವಿದ್ಯಾರ್ಥಿಗಳು ಹಾಗೂ ಗ್ರಾಮದ ಜನರು ಹಳ್ಳ ದಾಟುವಾಗ ಬಿದ್ದು, ಗಾಯಗಳಾಗಿವೆ. ಆದರೂ, ಅಧಿಕಾರಿಗಳು ನಮ್ಮ ಗೋಳು ಕೇಳುತ್ತಿಲ್ಲ ಎಂದು ಈ ದಿನ.ಕಾಮ್ ವರದಿ ಪ್ರಕಟಿಸಿದ ನಂತರ ಸಂಬಂಧಪಟ್ಟ ಶಾಸಕರು ಹಾಗೂ ಪಂಚಾಯಿತಿಗೆ ಸೇರಿದ ಸದಸ್ಯರು ಗಮನವಹಿಸಿ ಸೇತುವೆ ಮಾಡಿಕೊಟ್ಟಿದ್ದಾರೆ ಎಂದು ಸುರೇಶ್ ಈ ದಿನ.ಕಾಮ್ ಜೊತೆ ಮಾತಾಡಿದ್ದಾರೆ.

ಹೊರಲೇ ಗ್ರಾಮದ ಸಮಸ್ಯೆ ಬಗ್ಗೆ ಸೆಪ್ಟಂಬರ್ 2023ರಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ವಾಸು ಅವರು ಈದಿನ.ಕಾಮ್ ಜೊತೆ ಮಾತನಾಡಿಸಿದಾಗ “ ಅನುದಾನ ಬಿಡುಗಡೆ ಮಾಡುತ್ತೇವೆಂದು ಕ್ಷೇತ್ರದ ಶಾಸಕರು ತಿಳಿಸಿದ್ದಾರೆ. ಹಣ ಬಿಡುಗಡೆಯಾದ ತಕ್ಷಣ ಕೆಲಸ ಆರಂಭಿಸುತ್ತೇವೆ” ಎಂದು ಹೇಳಿದ್ದರು. ಈಗ ಹಂತ ಹಂತವಾಗಿ ಒಂದುವರೆ ವರ್ಷದಲ್ಲಿ ಮಳೆಗಾಲದ ಬಿಡುವು ನೋಡಿಕೊಂಡು  ಸೇತುವೆ ನಿರ್ಮಾಣ ಮಾಡಿ 2025 ಏಪ್ರಿಲ್ ತಿಂಗಳಲ್ಲಿ ಸಂಪೂರ್ಣ ಕೆಲಸ ಮುಗಿಸಿ, ಅದೇ ತಿಂಗಳಲ್ಲಿ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ.ಡಿ ರಾಜೇಗೌಡರನ್ನು ಆಹ್ವಾನಿಸಿ ಸೇತುವೆ ಉದ್ಘಾಟನೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಹಳ್ಳಕ್ಕಿಲ್ಲ ಸೇತುವೆ; ಗ್ರಾಮಸ್ಥರ ಸಂಕಷ್ಟಕ್ಕಿಲ್ಲ ಪರಿಹಾರ

ಹಾಗೆಯೇ ಸೇತುವೆ ನಿರ್ಮಿಸಲು ಅನುದಾನ ಬಿಡುಗಡೆ ಮಾಡಿದ ಈ ಕ್ಷೇತ್ರದ ಶಾಸಕರಿಗೂ ಹಾಗೂ ಈ ಸಮಸ್ಯೆ ಬಗ್ಗೆ ವರದಿ ಪ್ರಕಟಿಸಿದ್ದ ಈ ದಿನ. ಕಾಮ್ ಗೆ ಗ್ರಾಮ ಪಂಚಾಯಿತಿ ಸದಸ್ಯರಾದ ವಾಸು ಅಭಿನಂದನೆ ತಿಳಿಸಿದ್ದಾರೆ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...