ಬೆಳಗಾವಿ | ಈ ದಿನ ಫಲಶೃತಿ: ಮಳೆಯಿಂದ ಹಾನಿಗೊಳಗಾಗಿದ್ದ ಮೆಕ್ಕೆಜೋಳ ಪ್ರದೇಶಕ್ಕೆ ಕೃಷಿ ಅಧಿಕಾರಿಗಳ ಭೇಟಿ

Date:

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಮತ್ತು ಮುಗಳಿಹಾಳ ಗ್ರಾಮದ ರೈತರು ಬೆಳೆದ ಮಕ್ಕೆ ಜೋಳವು ಹಲವು ದಿನಗಳಿಂದ ಸುರಿದ ಮಳೆಯಿಂದ ನಾಶವಾಗಿ ಮೊಳಕೆಯೊಡೆದಿತ್ತು. ಈ ಕುರಿತು ಈ ದಿನ.ಕಾಮ್ ರೈತರು ಮತ್ತು ಯರಗಟ್ಟಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಶಿವಪ್ರಕಾಶ ಪಾಟಿಲ್ ಅವರನ್ನು ಸಂಪರ್ಕಿಸಿ ಅಕ್ಟೋಬರ್ 20ರಂದು ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಅಧಿಕಾರಿಗಳು ಹಾನಿಗೊಳಗಾದ ರೈತರ ತೋಟಗಳಿಗೆ ಭೇಟಿ ನೀಡಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಗ್ರಾಮದ ರೈತರಾದ ರಾಮಪ್ಪ ಹಾರುಗೊಪ್ಪ ಎರಡು ಎಕರೆ ಭೂಮಿಯಲ್ಲಿ ಗೋವಿನ ಜೊಳ ಬೆಳೆದಿದ್ದು ತೆನೆ ಮುರಿದು ತೋಟದಲ್ಲಿ ರಾಶಿ ಮಾಡಲು ಹಾಕಲಾಗಿತ್ತು. ಆದರೆ ಅನಿರೀಕ್ಷಿತವಾಗಿ ಮಳೆ ಬಂದಿದ್ದರಿಂದ ತೆನೆಗಳು ಮಳೆಗೆ ಸಿಲುಕಿ ಮೊಳಕೆಯೊಡೆದು ನಾಶವಾಗಿತ್ತು.

ಈ ಕುರಿತು ಈ ದಿನ.ಕಾಮ್ ಯರಗಟ್ಟಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಶಿವಪ್ರಕಾಶ್ ಪಾಟೀಲ್ ಇವರನ್ನು ಸಂಪರ್ಕಿಸಿ ಮಳೆಯಿಂದ ಹಾನಿಗೊಳಗಾದ ಮೆಕ್ಕೆಜೋಳದ ಕುರಿತು ಮಾಹಿತಿ ನೀಡಿ ರೈತರನ್ನು ಸಂಪರ್ಕಿಸಿ ಸಮೀಕ್ಷೆ ಮಾಡಿ ಪರಿಹಾರ ನೀಡುವಂತೆ ವರದಿ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ದಿನ.ಕಾಮ್ ವರದಿಗೆ ಸ್ಪಂದಿಸಿರುವ ಅಧಿಕಾರಿಗಳು ವರದಿ ಮಾಡಿದ ನಂತರ ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು ಹಾಗೂ ಯರಗಟ್ಟಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಶಿವಪ್ರಕಾಶ ಪಾಟಿಲ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹಾನಿಗೊಳಗಾದ ರೈತರ ತೋಟಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡಿ ಸರ್ಕಾರಕ್ಕೆ ಈ ಕುರಿತು ವರದಿ ನೀಡಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಶಿಗ್ಗಾಂವಿ | ಬಂಡಾಯ ಸಾರಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಮನವೊಲಿಕೆ ಯಶಸ್ವಿ

ಈ ಕುರಿತು ಈ ದಿನ‌ ಕಾಮ್ ಜೊತೆ ಕರ್ನಾಟಕ ರಾಜ್ಯ ರೈತ ರ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಕಾರ್ಯಾಧ್ಯಕ್ಷ ರಾದ ಸಿಂಧೂರ ತೆಗ್ಗಿ ಮಾತನಾಡಿ, “ಈ ದಿನ.ಕಾಮ್ ವರದಿ ಮಾಡಿದ ನಂತರ ಕೃಷಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ರೈತರ ತೋಟಗಳಿಗೆ ಭೇಟಿ ನೀಡಿ ಸಮೀಕ್ಷೆ ಮಾಡಿದ್ದು, ಪರಿಹಾರ ನೀಡುವ ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ. ವರದಿ ಮಾಡಿ, ರೈತರ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದದ್ದಕ್ಕೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...