ಈ ದಿನ ವರದಿ ಫಲಶೃತಿ | ಕಲಬುರಗಿ : ನಾವದಗಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಅಧಿಕಾರಿಗಳು

Date:

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದುಸ್ಥಿತಿಯಲ್ಲಿತ್ತು. ಈ ಶಾಲೆಯಲ್ಲಿ ಒಟ್ಟು 6 ಕೊಠಡಿಗಳಿದ್ದು, ಇಂದು ನಾಳೆಯೋ ಬೀಳುವ ಹಂತದಲ್ಲಿವೆ. ಮಳೆ ಜೋರಾಗಿ ಸುರಿಯತೊಡಗಿದರೆ ಕೂಡಲೇ ಮಕ್ಕಳನ್ನು ಶಾಲೆಯ ಹೊರಗಡೆ ತಂದು ಕೂರಿಸುತ್ತಾರೆ. ಈ ಶಾಲೆಯ ಸಮಸ್ಯೆಯ ಬಗ್ಗೆ ಈ ದಿನ.ಕಾಮ್ ಆಗಸ್ಟ್ 1ರಂದು ವರದಿ ಪ್ರಕಟಿಸಿತ್ತು.

ಈ ವಿಡಿಯೋ ವರದಿಯನ್ನು ಗಮನಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಗೆ ಇಂದು (ಆ.2) ಭೇಟಿ ನೀಡಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವ ಬಗ್ಗೆ ಭರವಸೆ ನೀಡಿದ್ದಾರೆ.

ಶಾಲೆಗೆ ಭೇಟಿ ನೀಡಿದ ಡಿಡಿಪಿಐ ಸೂರ್ಯಕಾಂತ ಮದನೆ, ಕಮಲಾಪುರ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಅಂಬರೀಷ್ ಭೇಟಿ ನೀಡಿದ್ದು, ಶಾಲೆಯ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೇಟಿಯ ವೇಳೆ ಉಪಸ್ಥಿತರಿದ್ದ ನವದಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಪರಶುರಾಮ್ ಅವರೊಂದಿಗೂ ಕೂಡ ಮಾಹಿತಿ ಕಲೆ ಹಾಕಿದರು.

“ನಾಲ್ಕು ಹೊಸ ಕೋಣೆಗಳು ನಿರ್ಮಾಣ ಮಾಡಿಕೊಡುವುದಾಗಿ ಭೇಟಿ ನೀಡಿ ಭರವಸೆ ನೀಡಿದ್ದಾರೆ. ಉಳಿದ ಕೋಣೆಗಳು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(KKRDB)ಯ ನೆರವಿನೊಂದಿಗೆ ಮಂಜೂರು ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ” ಎಂದು ಎಸ್.ಡಿ.ಎಂ.ಸಿ ಅಧ್ಯಕ್ಷ ಪರಶುರಾಮ್ ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಯನ್ನು ವರದಿ ಪ್ರಕಟಿಸುವ ಮೂಲಕ ಅಧಿಕಾರಿಗಳ ಗಮನ ಸೆಳೆದಿದ್ದಕ್ಕಾಗಿ ಎಸ್.ಡಿ.ಎಂ.ಸಿ ಅಧ್ಯಕ್ಷ ಪರಶುರಾಮ್ ಮತ್ತು ಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ ಅವರು ಈ ದಿನ. ಕಾಮ್ ಗೆ ಧನ್ಯವಾದ ಸಲ್ಲಿಸಿದ್ದಾರೆ.

WhatsApp Image 2024 08 02 at 3.25.35 PM
WhatsApp Image 2024 08 02 at 3.25.14 PM
WhatsApp Image 2024 08 02 at 2.28.33 PM
ಗೀತಾ ಹೊಸಮನಿ
ಗೀತಾ ಹೊಸಮನಿ
+ posts

ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...