‘ಈ ದಿನ’ ಫಲಶೃತಿ | ಅನೈತಿಕ ಚಟುವಟಿಕೆಗಳ ತಾಣವಾಗಿದ್ದ ರೋಣ ‘ಇಂದಿರಾ ಕ್ಯಾಂಟೀನ್’ ಸ್ವಚ್ಫಗೊಳಿಸಿದ ಪುರಸಭೆ

Date:

ಗದಗ ಜಿಲ್ಲೆಯ ರೋಣ ಪುರಸಭಾ ವ್ಯಾಪ್ತಿಯಲ್ಲಿದ್ದ ಇಂದಿರಾ ಕ್ಯಾಂಟೀನ್ ಕಟ್ಟಡವು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿತ್ತು. ಈ ಬಗ್ಗೆ ಗಮನಿಸಿದ್ದ ಈ ದಿನ.ಕಾಮ್, ಕಳೆದ ಸೆ. 17ರಂದು “ಗದಗ | ಅನೈತಿಕ ಚಟುವಟಿಕೆ ತಾಣವಾದ ‘ಇಂದಿರಾ ಕ್ಯಾಂಟೀನ್’; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ” ಎಂ ಶೀರ್ಷಿಕೆಯಡಿಯಲ್ಲಿ ವಿಸ್ತೃತವಾದ ವರದಿ ಪ್ರಕಟಿಸಿತ್ತು.

ಅಲ್ಲದೇ, ಈ ಬಗ್ಗೆ ಸಿಎಂ ಕಚೇರಿಯಲ್ಲಿರುವ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ. ವೈಷ್ಣವಿ ಅವರ ಗಮನಕ್ಕೂ ತಂದಿತ್ತು. ಈ ದಿನ.ಕಾಮ್ ವರದಿಯ ಬೆನ್ನಲ್ಲೇ ಎಚ್ಚೆತ್ತ ರೋಣ ಪುರಸಭೆಯ ಅಧಿಕಾರಿಗಳು, ಪಟ್ಟಣದ ಇಂದಿರಾ ಕ್ಯಾಂಟೀನ್ ಕಟ್ಟಡ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದ್ದಾರೆ.

ಈ ಬಗ್ಗೆ ಈ ದಿನ.ಕಾಮ್‌ಗೆ ಮಾಹಿತಿ ನೀಡಿರುವ ಸಿಎಂ ಕಚೇರಿ, ರೋಣ ಪುರಸಭೆಯ ಮುಖ್ಯಾಧಿಕಾರಿ ರಮೇಶ್ ಹೊಸಮನಿ ಬರೆದಿರುವ ಪತ್ರವನ್ನೂ ಕೂಡ ಹಂಚಿಕೊಂಡಿದೆ. ಈ ಪತ್ರದಲ್ಲಿ ಮುಂದಿನ ದಿನಗಳಲ್ಲಿ ಈ ರೀತಿಯ ನಿರ್ಲಕ್ಷ್ಯ ಆಗದಂತೆ ಎಚ್ಚರಿಕೆ ವಹಿಸುವುದಾಗಿ ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಈದಿನ.ಕಾಮ್‌ಗೆ ಪ್ರತಿಕ್ರಿಯೆ ನೀಡಿರುವ ಪುರಸಭೆ ಮುಖ್ಯಾಧಿಕಾರಿ ರಮೇಶ್ ಹೊಸಮನಿ, “ಈ ದಿನ.ಕಾಮ್ ಇಂದಿರಾ ಕ್ಯಾಂಟೀನ್ ಕಟ್ಟಡದಲ್ಲಿನ ಅವ್ಯವಸ್ಥೆ ಕುರಿತು ಸುದ್ದಿ ಪ್ರಸಾರ ಮಾಡಿತ್ತು. ಇದಕ್ಕೆ ಸಿಎಂ ಕಚೇರಿಯಿಂದಲೂ ನಮಗೆ ಮಾಹಿತಿ ಬಂದಿದ್ದರಿಂದ ಸ್ಪಂದಿಸಿದ್ದು, ಎಲ್ಲನ್ನೂ ಸ್ವಚ್ಛತೆ ಮಾಡಲಾಗಿದೆ. ಕೂಡಲೇ ಕಾಮಗಾರಿ ಆರಂಭಿಸಿ, ಕ್ಯಾಂಟೀನ್ ಸುತ್ತಲು ಕಾಂಪೌಂಡ್ ಕಟ್ಟಿಸಿ, ತಿಂಗಳಲ್ಲಿಯೇ ಇಂದಿರಾ ಕ್ಯಾಂಟೀನ್ ಆರಂಭಿಸಲು ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಅನೈತಿಕ ಚಟುವಟಿಕೆಗಳ ತಾಣವಾಗಿದ್ದ ‘ಇಂದಿರಾ ಕ್ಯಾಂಟೀನ್’ ಕಟ್ಟಡ

ಗದಗ ಜಿಲ್ಲೆಯ ರೋಣ ಪಟ್ಟಣದ ಇಂದಿರಾ ಕ್ಯಾಂಟೀನ್ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿತ್ತು. ಆರ್ಥಿಕವಾಗಿ ಹಿಂದುಳಿದ ಜನರ ಹಸಿವನ್ನು ನೀಗಿಸಬೇಕಿತ್ತು. ಆದರೆ ಈ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು, ಉದ್ಘಾಟನೆಗೊಳ್ಳದೆ ಸುಮಾರು ಏಳೆಂಟು ತಿಂಗಳಿಂದ ನೆನೆಗುದಿಗೆ ಬಿದ್ದಿತ್ತು. ಇದರಿಂದ ಅನೈತಿಕ ಚಟುವಟಿಕೆಗಳ ಅಡ್ಡವಾಗಿ ಮಾರ್ಪಟ್ಟಿತ್ತು.

ಕೂಲಿ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ, ರೈತರಿಗೆ, ಆಟೋ ಚಾಲಕರಿಗೆ ಸೇರಿದಂತೆ ಆರ್ಥಿಕವಾಗಿ ಹಿಂದುಳಿದ ಬಡವರ ಹಸಿವನ್ನು ನೀಗಿಸುವ ಸಲುವಾಗಿ ಕಡಿಮೆ ಹಣದಲ್ಲಿ ಹೊಟ್ಟೆತುಂಬಾ ಊಟ ಮಾಡಬೇಕೆಂಬ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇಂದಿರಾ ಕ್ಯಾಂಟೀನ್ ಆರಂಭಿಸಿತ್ತು. ಆದರೆ ರೋಣದ ಇಂದಿರಾ ಕ್ಯಾಂಟೀನ್ ಅನೈತಿಕ ಚಟುವಟಿಕೆಗಳಿಂದ ಕೂಡಿ, ಕುಡುಕರ ಅಡ್ಡವಾಗಿತ್ತು. ಇದನ್ನು ಗಮನಿಸಿದ್ದ ಈ ದಿನ.ಕಾಮ್ ವಿಶೇಷ ಸುದ್ದಿ ಮಾಡಿತ್ತು.

ಇದನ್ನು ಓದಿದ್ದೀರಾ? ಗದಗ | ಅನೈತಿಕ ಚಟುವಟಿಕೆ ತಾಣವಾದ ‘ಇಂದಿರಾ ಕ್ಯಾಂಟೀನ್’; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ

ಈ ವರದಿಗೆ ಸಿಎಂ ಕಚೇರಿಯಿಂದ ಸ್ಪಂದನೆಯ ಕರೆ ಬಂದಿದ್ದು, ಈ ಕೂಡಲೇ ಇಂದಿರಾ ಕ್ಯಾಂಟೀನ್ ಸ್ವಚ್ಛತೆಗೊಳಿಸಬೇಕೆಂದು ಸೂಚನೆ ಮಾಡಲಾಗಿದೆ ಎಂದು ತಿಳಿಸಿದ್ದರು. ಅದರಂತೆ ರೋಣ ಪುರಸಭೆ ಅಧಿಕಾರಿಗಳು ಎಚ್ಚೆತ್ತು, ಇಂದಿರಾ ಕ್ಯಾಂಟೀನ್ ಮುಂದೆ ಬೆಳೆದಿದ್ದ ಗಿಡಗಂಟಿ, ಕ್ಯಾಂಟೀನ್ ಒಳಗಡೆ ಇದ್ದ ಮದ್ಯದ ಬಾಟಲಿ, ಪ್ಲಾಸ್ಟಿಕ್ ಪ್ಯಾಕೆಟ್ ಸೇರಿದಂತೆ ಎಲ್ಲವನ್ನೂ ಸ್ವಚ್ಛಗೊಳಿಸಿದ್ದಾರೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...