ಈ ದಿನ ಫಲಶೃತಿ | ಬೆಳಗಾವಿ: ಶಾಲಾ ಶೌಚಾಲಯ ಸಮಸ್ಯೆ; ತಾತ್ಕಾಲಿಕ ಪರಿಹಾರ ಕಲ್ಪಿಸಿದ ಅಧಿಕಾರಿಗಳು

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೌಚಾಲಯವಿಲ್ಲ ಹಾಗೂ ಪ್ರೌಢ ಶಾಲೆಯ ವಿಧ್ಯಾರ್ಥಿನಿಯರ ಶೌಚಾಲಯಕ್ಕೆ ಬಾಗಿಲುಗಳು ಇಲ್ಲದಿರುವ ಕುರಿತು ಸೆ.28ರಂದು ಈ ದಿನ.ಕಾಮ್ ವರದಿ ಮಾಡಿತ್ತು. ಈ ವರದಿಗೆ ಅಧಿಕಾರಿಗಳು ಸ್ಪಂದಿಸಿದ್ದು, ತಾತ್ಕಾಲಿಕವಾಗಿ ಎರಡು ಶೌಚಾಲಯ ನಿರ್ಮಾಣ ಮಾಡಿಸಿದ್ದಾರೆ.

ಸಾಲಾಪೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 207 ವಿದ್ಯಾರ್ಥಿನಿಯರು ಹಾಗೂ 156 ವಿದ್ಯಾರ್ಥಿಗಳು ಹಾಗೂ ಪಕ್ಕದ ಪ್ರೌಢ ಶಾಲೆಯಲ್ಲಿ 99 ವಿದ್ಯಾರ್ಥಿನಿಯರು ಹಾಗೂ 126 ವಿದ್ಯಾರ್ಥಿಗಳು ಇದ್ದು, ಶೌಚಾಲಯ ಇಲ್ಲದ್ದರಿಂದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕಷ್ಟಪಡುತ್ತಿದ್ದರು. ಈ ಬಗ್ಗೆ ವಿದ್ಯಾರ್ಥಿನಿಯರು ಈ ದಿನ.ಕಾಮ್ ಜೊತೆ ಶಾಲಾ ಶೌಚಾಲಯ ಸಮಸ್ಯೆ ಕುರಿತು ಮಾತನಾಡಿ, ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿಕೊಂಡಿದ್ದರು.

WhatsApp Image 2024 10 30 at 11.13.41 AM

ಈ ದಿನ.ಕಾಮ್ ಈ ಸಮಸ್ಯೆ ಕುರಿತು ತಾಲುಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ರಾಮದುರ್ಗ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದು, ಸಾಲಾಪೂರ ಗ್ರಾಮದ ಶೌಚಾಲಯ ಸಮಸ್ಯೆಗೆ ಪರಿಹಾರ ನೀಡುವಂತೆ ತಿಳಿಸಿತ್ತು. ಈ ದಿನ.ಕಾಮ್ ವರದಿಗೆ ಸ್ಪಂದಿಸಿದ ಅಧಿಕಾರಿಗಳು, ಶಾಲೆಯಲ್ಲಿ ಎರಡು ತಾತ್ಕಾಲಿಕ ಶೌಚಾಲಯ ನಿರ್ಮಾಣ ಮಾಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಈ ದಿನ.ಕಾಮ್ ಜೊತೆ ಮಾತನಾಡಿ, ಸಾಲಾಪೂರ ಗ್ರಾಮದ ಶಾಲೆಗೆ ಈ ವಾರದಲ್ಲಿ ಭೇಟಿ ನೀಡಿ, ಸದ್ಯ ನಿರ್ಮಾಣವಾಗಿರುವ ತಾತ್ಕಾಲಿಕ ಶೌಚಾಲಯ ಪರಿಶೀಲನೆ ಮಾಡುತ್ತೇವೆ. ಆ ಬಳಿಕ ಉತ್ತಮ ಸೌಲಭ್ಯಗಳುಳ್ಳ ಶೌಚಾಲಯ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಈ ಕುರಿತು ಈ ದಿನ.ಕಾಮ್ ಜೊತೆ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಾದ ಲಕ್ಷೀ ಬರಿಗಾಲ, ಸ್ನೇಹಾ ಬರಿಗಾಲ, ಸೌಜನ್ಯ ಬೆಳವಲದ ಮಾತನಾಡಿ, ಈ ದಿನ.ಕಾಮ್ ವರದಿ ಮಾಡಿದ ಮೇಲೆ ನಮ್ಮ ಶಾಲೆಯಲ್ಲಿ ತಾತ್ಕಾಲಿಕವಾಗಿ ಶೌಚಾಲಯ ನಿರ್ಮಾಣ ಮಾಡಿದ್ದು ಸಂತೋಷವಾಗಿದೆ. ವರದಿ ಮಾಡಿದ್ದಕ್ಕೆ ಈ ದಿನ.ಕಾಮ್‌ಗೆ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...