‘ಈ ದಿನ’ ವರದಿಯ ಬಳಿಕ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಿದ ಸಮಾಜ ಕಲ್ಯಾಣ ಇಲಾಖೆ

Date:

ಒಂದೂವರೆ ತಿಂಗಳಿನಿಂದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ಸರ್ವರ್ ಸಮಸ್ಯೆಯಿಂದ ಹಲವಾರು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲಾಗದೆ ಅತಂತ್ರ ಸ್ಥಿತಿಯಲ್ಲಿದ್ದರು. ಈ ಬಗ್ಗೆ ಗಮನಿಸಿದ್ದ ಈ ದಿನ.ಕಾಮ್ ಸಂತ್ರಸ್ತ ವಿದ್ಯಾರ್ಥಿಗಳನ್ನು ಮಾತನಾಡಿಸಿ, ವರದಿ ಪ್ರಕಟಿಸಿತ್ತು.

ಈ ದಿನ.ಕಾಮ್ ವರದಿಯ ಬಳಿಕ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಮತ್ತೊಮ್ಮೆ ಅವಕಾಶ ನೀಡಿದ್ದು, ಅ.30ರವರೆಗೂ ಅವಧಿ ವಿಸ್ತರಿಸಿ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗಿದೆ.

ಹಾಸ್ಟೆಲ್‌ಗಳಲ್ಲಿ ಪ್ರವೇಶ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿತ್ತು. ಆದರೆ, ಸರ್ವರ್ ಸಮಸ್ಯೆಯಿಂದ ಅರ್ಜಿ ಸಲ್ಲಿಸಲಾಗದೆ, ಕೊನೆಯ ದಿನಾಂಕವು ಮುಗಿದ್ದರಿಂದ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಈದಿನ.ಕಾಮ್‌ನಲ್ಲಿ ಅಕ್ಟೋಬರ್ 4ರಂದು “ಸರ್ವರ್ ಸಮಸ್ಯೆ : ಹಾಸ್ಟೆಲ್ ಪ್ರವೇಶದಿಂದ ವಂಚಿತರಾದ ವಿದ್ಯಾರ್ಥಿಗಳು” ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು. ಈ ವರದಿಯ ಲಿಂಕ್ ಅನ್ನು ಓದುಗರೋರ್ವರು ಎಕ್ಸ್(ಟ್ವಿಟ್ಟರ್) ಖಾತೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಸಿಎಂ ಕಚೇರಿಗೆ ಟ್ಯಾಗ್ ಮಾಡಿ, ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡುವಂತೆ ವಿನಂತಿ ಮಾಡಿಕೊಂಡಿದ್ದರು.

ಈ ಪೋಸ್ಟ್‌ಗೆ ಸಕರಾತ್ಮಕವಾಗಿ ಸ್ಪಂದಿಸಿದ್ದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, “ಸರ್ವರ್ ಸಮಸ್ಯೆ ಇಲ್ಲ, ಆದರೂ ಯಾವೊಬ್ಬ ವಿದ್ಯಾರ್ಥಿಯೂ ಹಾಸ್ಟೆಲ್‌ನಿಂದ ಹೊರಗುಳಿಯಬಾರದು ಎನ್ನುವುದೇ ಇಲಾಖೆಯ ಉದ್ದೇಶ” ಎಂದಿದ್ದರಲ್ಲದೇ, ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ವಿಸ್ತರಣೆ ಮಾಡುವ ಭರವಸೆ ನೀಡಿದ್ದರು.

ಅದರಂತೆ, ಪ್ರಸ್ತುತ ಇಲಾಖೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. ಅ.30ರವರೆಗೂ ಅವಧಿ ವಿಸ್ತರಿಸಿದ್ದು, ಅರ್ಜಿ ಹಾಕಲು ಅರ್ಹ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ.

ಅರ್ಜಿ ಹಾಕಲಾಗದೇ, ಕಷ್ಟಪಡುತ್ತಿದ್ದ ವಿದ್ಯಾರ್ಥಿಗಳು ಈಗ ಅರ್ಜಿ ಹಾಕಲು ಆರಂಭಿಸಿದ್ದು, ಅವಧಿ ವಿಸ್ತರಿಸಿದ ಇಲಾಖೆಗೆ ಹಾಗೂ ವರದಿ ಮಾಡುವ ಮೂಲಕ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಕ್ಕೆ ಈ ದಿನ.ಕಾಮ್‌ಗೆ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ.

ಇನ್ನೂ ಯಾರಾದರೂ ಅರ್ಜಿ ಸಲ್ಲಿಸದೆ ಇರುವವರು ಈ ಕೆಳಗಿನ ಲಿಂಕ್ ಬಳಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಅರ್ಜಿಯ ಕೊನೆಯ ದಿನಾಂಕವನ್ನು 31.10.2024 ರವರೆಗೆ ವಿಸ್ತರಿಸಲಾಗಿದೆ. ಕೆಳಗೆ ನೀಡಿರುವ ಲಿಂಕ್‌ನೊಂದಿಗೆ ಹಾಸ್ಟೆಲ್ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಬಹುದು.

https://swdhmis.karnataka.gov.in/#/registration

ಅಗತ್ಯ ಮಾಹಿತಿಗಾಗಿ ನಮ್ಮ 24‍X7 ಸಹಾಯವಾಣಿ 9482300400 ಸಂಖ್ಯೆಗೆ ಕರೆ ಮಾಡಬಹುದು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...