ಮಡಿಕೇರಿ | ಯುವ ಬರಹಗಾರರಿಗೆ ಸಾಹಿತ್ಯ ರಚನೆಯತ್ತ ಹಿರಿಯರು ಪ್ರೇರಣೆ ನೀಡುವಂತಾಗಬೇಕು: ಕವಿ ಕಾಜೂರು ಸತೀಶ್

Date:

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಹಿರಿಯರ ಕವಿಗೋಷ್ಠಿಯನ್ನು ಮಡಿಕೇರಿ ಪತ್ರಿಕಾಭವನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದ ಕವಿ ಕಾಜೂರು ಸತೀಶ್ ‘ಯುವ ಬರಹಗಾರರಿಗೆ ಸಾಹಿತ್ಯ ರಚನೆಯತ್ತ ಹಿರಿಯರು ಪ್ರೇರಣೆ ನೀಡುವಂತಾಗಬೇಕು’ ಎಂದರು.

ಆಧುನಿಕತೆಯ ಸ್ಪರ್ಶವಿರದೆ, ಸಾಮಾಜಿಕ ಜಾಲತಾಣವಿರದ ಯುಗದಲ್ಲಿ ಬದುಕಿನ ಅನುಭವಗಳನ್ನು ಸಾಹಿತ್ಯದ ಮೂಲಕ ಹೊರ ಹೊಮ್ಮಿಸುತ್ತಿದ್ದ ಹಿರಿಯ ಸಾಹಿತಿಗಳು ಪ್ರೇರಣೆ ನೀಡುವ ಮೂಲಕ ಎರಡು ಪೀಳಿಗೆಗಳ ಕೊಂಡಿ ಬೆಸೆದಿದ್ದಾರೆ. ಮೊಬೈಲ್, ಇಂಟರ್ನೆಟ್, ಫೇಸ್ಬುಕ್ ಇವುಗಳ ಕಲ್ಪನೆಯೇ ಇಲ್ಲದ ದಿನಗಳಲ್ಲಿ ಕುಟುಂಬದ ಸದಸ್ಯರೊಡನೆ ಬೆರೆತು ಯಾವುದೇ ಅಡೆತಡೆಗಳಿಲ್ಲದೆ ನಮ್ಮ ಹಿರಿಯರು ತಮ್ಮ ಅನುಭವವನ್ನು ಬರಹದ ರೂಪದಲ್ಲಿ ತಿಳಿಸುತಿದ್ದರು. ಆದರೆ, ಅಂತಹ ಪರಿಸ್ಥಿತಿಗಳಿಗೆ ತದ್ವಿರುದ್ಧವಾಗಿರುವ ಪರಿಸ್ಥಿತಿಯನ್ನು ನಾವಿಂದು ಕಾಣುತ್ತಿದ್ದೇವೆ ಎಂದು ವಿಶಾಧಿಸಿದರು.

ಕಸಾಪ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಕೊಡಗಿನಲ್ಲಿ ಸಾಹಿತ್ಯ ಕ್ಷೇತ್ರವನ್ನು ಬೆಳೆಸಿಕೊಂಡು ಬಂದಂತಹ ಹಿರಿಯ ಸಾಹಿತಿಗಳಿಗೆ ಯಾವುದೇ ಕವಿಗೋಷ್ಠಿ ಅಥವಾ ಸಾಹಿತ್ಯ ಗೋಷ್ಠಿಯಲ್ಲಿ ಅವಕಾಶ ಸಿಗದೇ ಹಿರಿಯರನ್ನು ನಿರ್ಲಕ್ಷಿಸಲಾಗುತ್ತಿತ್ತು. ಅದನ್ನು ಮನಗೊಂಡು ಕನ್ನಡ ಸಾಹಿತ್ಯ ಪರಿಷತ್ತು ಹಿರಿಯರ ಕವಿಗೋಷ್ಠಿ ಏರ್ಪಡಿಸಿ ಅವರ ಹಿರಿತನಕ್ಕೆ ಗೌರವ ನೀಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವ ಸಾಹಿತಿ ಕೃಪಾ ದೇವರಾಜ್ ಮಾತನಾಡಿ, “ಹಿರಿಯರ ಅನುಭವದ ಕವನಗಳು ಯುವ ಪೀಳಿಗೆಗೆ ಮಾರ್ಗದರ್ಶಕವಾಗಬೇಕು. ವಯಸ್ಸು ಕೇವಲ ಎಣಿಕೆಯ ಸಂಖ್ಯೆ. ದೇಹಕ್ಕೆ ವಯಸ್ಸಾಗಬಹುದು ಮನಸ್ಸಿಗೆ ಅಲ್ಲ. ನಮ್ಮ ಮನಸ್ಸಿನಲ್ಲಿರುವ ಮುಗ್ಧತೆಯನ್ನು ಸದಾ ಲವಲವಿಕೆಯಿಂದ ಇಟ್ಟುಕೊಳ್ಳುವವರೇ ನಿಜವಾದ ಸಾಹಿತಿಗಳು. ಹಿರಿತನ ಎಂಬುದು ಅರಳು ಮರಳಲ್ಲ, ಮರಳಿ ಅರಳುವ ಕಾಲ” ಎಂದರು.

ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡಿ, ಸಾಹಿತ್ಯ ಪರಿಷತ್ತು ಎಲ್ಲಾ ಪ್ರಕಾರದ, ಎಲ್ಲಾ ವಯಸ್ಸಿನ ಸಾಹಿತಿ ಮತ್ತು ಕವಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಈ ವರ್ಷ ಕವಿಗೋಷ್ಠಿಯನ್ನು ಏರ್ಪಾಡು ಮಾಡಲಾಗಿದೆ ಎಂದರು. ಹಿರಿಯ ಸಾಹಿತಿ ಬಿ.ಎ. ಷಂಶುದ್ದೀನ್ ಮಾತನಾಡಿ, ಹಿರಿಯ ಕವಿಗಳ ಕವನ ವಾಚನ ನಿಜಕ್ಕೂ ಸಂತಸ ತಂದಿದೆ. ಹಿರಿಯ ಕವಿಗಳ ಅನುಭವದ ಕವಿತ್ವ, ಕಾವ್ಯದ ಹಿನ್ನೆಲೆ, ಕಾವ್ಯದಿಂದ ಸಮಾಜದಲ್ಲಿ ಬದಲಾವಣೆ ಆಗಬೇಕಿದೆ. ಮನಸ್ಸಿನೊಳದಿಂದ ಮೂಡಿ ಬರುವ ಭಾವನೆಗಳೇ ಕವಿತ್ವ ಎಂದರು. ತಾವು ಬಾಲ್ಯದಿಂದಲೇ ಕವಿತ್ವ ಮತ್ತು ಸಾಹಿತ್ಯಗಳಿಗೆ ಆಕರ್ಷಿತಗೊಂಡದ್ದು ವಿದ್ಯಾರ್ಥಿ ಜೀವನದಲ್ಲಿ ರಚಿಸಿದ ಕವನಗಳನ್ನು ವಾಚಿಸಿದರು. ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು ಎಂದರು.

ಹಿರಿಯರ ಕವಿಗೋಷ್ಠಿಯಲ್ಲಿ ಕಿಗ್ಗಾಲು ಎಸ್ ಗಿರೀಶ್, ಮೂಟೆರ ಕೆ. ಗೋಪಾಲಕೃಷ್ಣ, ಕೆ. ಶೋಭಾ ರಕ್ಷಿತ್, ಕಟ್ರತನ ಲಲಿತಾ ಅಯ್ಯಣ್ಣ, ಅಂಬೆಕಲ್ಲು ಸುಶೀಲ ಕುಶಾಲಪ್ಪ , ಬಿ.ಜಿ. ಅನಂತಶಯನ, ವಿದ್ವಾನ್ ಶಂಕರಯ್ಯ ಮಾಸ್ಟರ್, ಭಾಗೀರಥಿ ಹುಲಿತಾಳ, ರೇವತಿ ರಮೇಶ್ ಮಡಿಕೇರಿ, ಬಿ.ಬಿ. ನಾಗರಾಜ ಆಚಾರ್ ಶನಿವಾರಸಂತೆ, ಕೆ. ಎಸ್. ನಳಿನಿ, ಸತ್ಯನಾರಾಯಣ ಕುಶಾಲನಗರ, ಶಿವದೇವಿ ಅವನೀಶ್ಚಂದ್ರ, ಹರೀಶ್ ಸರಳಾಯ ಮಡಿಕೇರಿ, ಹಾ.ತಿ. ಜಯಪ್ರಕಾಶ್, ಪಿ.ಎಸ್. ವೈಲೇಶ್, ಪಿ.ಎ. ಸುಶೀಲ ಕವನ ವಾಚಿಸಿದರು.

ಕವಿ ಅನಂತಶಯನ ಕವನ ವಾಚನ ಮಾಡುತ್ತಾ, “ಕುಡಿದಿರುವೆ ನಾನು ಕಂಠಪೂರ್ತಿ ಕುಡಿದಿರುವೆ, ಜಗವ ಮರೆಯಲು ಕುಡಿದಿರುವೆ, ನನ್ನ ನಾ ಮರೆಯಲು ಕುಡಿದಿರುವೆ, ಎಲ್ಲರನ್ನೂ ಎಲ್ಲವನ್ನೂ ಮರೆಯಲು ಕುಡಿದಿರುವೆ, ಕುಡಿದಿರುವೆ ಗುರುವಿನ ಬೊಗಸೆಯಿಂದ ತೀರ್ಥ ಕುಡಿದಿರುವೆ, ದೈವೀಸ್ಪರ್ಶಿತ ಅಮೃತ ಬಿಂದುವನ್ನು ಕುಡಿದಿರುವೆ. ನಾನು ಲೋಕದ ನೋಟಕ್ಕೆ ಕುಡುಕನಾಗಿ ಕಾಣುವೆ. ಹೌದು ನಾನು ಕುಡಿದಿರುವೆ ತಾತ್ಕಾಲಿಕ ಇರುವಿಕೆಯನ್ನು ಕಳಚಲು ಕುಡಿದಿರುವೆ, ನಿಶೆ ಏರಿ ಅಹಂ ಜಾರಿ ಮಹಾಪ್ರಜ್ಞೆಯೊಂದಿಗೆ ಒಂದಾಗಿ ಮರೆಯಾಗಲು ಅಮೃತ ಪಾನವ ಮಾಡಿರುವೆ” ಎಂದು ಮಾರ್ಮಿಕವಾಗಿ ನುಡಿದರು.

ಈ ಸುದ್ದಿ ಓದಿದ್ದೀರಾ? ಪೊನ್ನಂಪೇಟೆ | ಕೊಲೆ ಆರೋಪಿಗೆ ಗಲ್ಲು ಶಿಕ್ಷೆ

ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಬೈತಡ್ಕ ಜಾನಕಿ, ಬಿ.ಆರ್. ಜೋಯಪ್ಪ, ಸರ್ವೋದಯ ಸಮಿತಿಯ ಅಧ್ಯಕ್ಷ ಅಂಬೇಕಲ್ ಕುಶಾಲಪ್ಪ, ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಾಸು ರೈ, ಕುಶಾಲನಗರದ ಸತ್ಯನಾರಾಯಣ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...