ಚುನಾವಣೆ 2023| ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ

Date:

  • ರಸ್ತೆಯ ಮಾರ್ಗವಾಗಿ ಜೇವರ್ಗಿಗೆ ತೆರಳಿದ ರಾಹುಲ್ ಗಾಂಧಿ
  • ಕರ್ನಾಟಕದಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ ಎಂದ ರಾಹುಲ್

ರಾಜ್ಯದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆ ಪ್ರಯುಕ್ತ ರಾಜ್ಯದ್ಯಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ತೀವ್ರಗೊಳಿಸಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದ ಸಮಾವೇಶಕ್ಕೆ ಮಳೆ ಅಡ್ಡಿಯುಂಟು ಮಾಡಿದ್ದು, ಸುರಿಯುವ ಮಳೆಯಲ್ಲೇ ಛತ್ರಿಯ ಆಸರೆಯೊಂದಿಗೆ ರಾಹುಲ್‌ ಗಾಂಧಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಹವಾಮಾನದ ವೈಪರಿತ್ಯದ ಕಾರಣ ಕಲಬುರಗಿ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ತೆರಳುವುದು ಸಾಧ್ಯವಾಗಲಿಲ್ಲ. ಹಾಗಾಗಿ, ರಸ್ತೆಯ ಮಾರ್ಗವಾಗಿ ರಾಹುಲ್ ಗಾಂಧಿ ಜೇವರ್ಗಿಗೆ ತೆರಳಿದ್ದಾರೆ.

ಸುರಿಯುವ ಮಳೆಯಲ್ಲೇ ಮತದಾರರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಮಳೆಯಿಂದ ಜನರಿಗೆ ತೊಂದರೆಯಾಗುತ್ತಿದೆ. ಇದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ಅತ್ಯಂತ ಭ್ರಷ್ಟ ಸರ್ಕಾರ ಕರ್ನಾಟಕದಲ್ಲಿದೆ. ಗುತ್ತಿಗೆದಾರರ ಸಂಘ ಕಮಿಷನ್ ವಿಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿತ್ತು. ಆದರೆ, ಭ್ರಷ್ಟಾಚಾರದ ವಿರುದ್ಧ ಅವರು ಕ್ರಮ ಕೈಗೊಳ್ಳಲಿಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದಲ್ಲಿ ನಾವು 150 ಸ್ಥಾನ ಗೆಲ್ಲುತ್ತೇವೆ. ಬಿಜೆಪಿ 40 ಸ್ಥಾನ ಗೆಲ್ಲುತ್ತದೆ. ಬಿಜೆಪಿ ಸರ್ಕಾರ ಸರಿಯಾಗಿ 371ಜೆ ಅನುಷ್ಠಾನಕ್ಕೆ ತರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಪ್ರತಿ ಗ್ರಾಪಂಗೆ ₹1 ಕೋಟಿ ಅನುದಾನ ನೀಡಲಿದ್ದೇವೆ. ಕಾಂಗ್ರೆಸ್‌ ಪಕ್ಷ ಘೋಷಿಸಿದ ಎಲ್ಲ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. 40% ಸರ್ಕಾರದಿಂದ ಇಂತಹ ಗ್ಯಾರಂಟಿ ಕೊಡಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? 2050ರ ವೇಳೆಗೆ ನೀರಿನ ಕೊರತೆ ಎದುರಿಸಲಿರುವ ಬೆಂಗಳೂರು

“ರಾಜ್ಯದ ಜನರಿಗೆ ನಾಲ್ಕು ಗ್ಯಾರೆಂಟಿಗಳನ್ನು ಕೊಟ್ಟಿದ್ದೇವೆ. ಆದರೆ, ಪ್ರಧಾನಿ ಮೋದಿ ಅವರು ಈ ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದೆನ್ನುತ್ತಾರೆ. ಬಿಜಿಪಿಯ ಶಾಸನದ ಪ್ರಕಾರ ಇಂತಹ ಯೋಜನೆಗಳು ಈಡೇರಿಸಲು ಸಾಧ್ಯವಿಲ್ಲ. ಏಕೆಂದರೆ ಅವರು 40 ಪರ್ಸೆಂಟ್ ಕಳ್ಳವು ಮಾಡುತ್ತಾರೆ. 40 ಪರ್ಸೆಂಟ್ ಕದಿಯುವುದರಿಂದ ಇಂತಹ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುವುದಿಲ್ಲ” ಎಂದು ವ್ಯಂಗ್ಯವಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...