ಪ್ರಜಾಪ್ರಭುತ್ವ ರಕ್ಷಣೆಗಾಗಿ ಮತ ಪತ್ರಗಳಲ್ಲೇ ಚುನಾವಣೆ ನಡೆಯಬೇಕು: ಮಮತಾ ಗಟ್ಟಿ

Date:

ಭಾರತ ದೇಶ ಪ್ರಜಾಪ್ರಭುತ್ವ ಒಪ್ಪಿಕೊಂಡಿದ್ದರೂ, ಸಾರ್ವತ್ರಿಕ ಚುನಾವಣೆಯಲ್ಲಿ ಮತಯಂತ್ರಗಳ ದುರ್ಬಳಕೆಯಿಂದ ಪ್ರಜಾಪ್ರಭುತ್ವದ ಘನತೆ ಮತ್ತು ಮೌಲ್ಯ ಕುಸಿತಕ್ಕೊಳಗಾಗಿತ್ತಿದೆ. ಆದ್ದರಿಂದ, ಮತದಾರರ ಮತದಾನದ ಹಕ್ಕಿನ ರಕ್ಷಣೆಗಾಗಿ ಮತಪತ್ರಗಳನ್ನೇ ಬಳಸಬೇಕೆಂದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಅಹಿಂದ ಜನಚಳುವಳಿ ನಡೆಸುತ್ತಿರುವ ಹಕ್ಕೊತ್ತಾಯ ಧರಣಿಯಲ್ಲಿ ಮಮತಾ ಗಟ್ಟಿ ಭಾಗವಹಿಸಿದ್ದರು.

ಧರಣಿಯಲ್ಲಿ ಮಾತನಾಡಿದ ಅಹಿಂದ ಜಿಲ್ಲಾಧ್ಯಕ್ಷ ಪದ್ಮನಾಭ ನರಿಂಗಾನ, “ಅಂಬೇಡ್ಕರ್‌ ಅವರು ನೀಡಿದ ದೇಶದ ಸಂವಿಧಾನ ರಕ್ಷಣೆಗಾಗಿ ನಾಗರಿಕರ ಮತದಾನದ ಹಕ್ಕನ್ನು ಸಂರಕ್ಷಿಸುವುದು ಅತ್ಯಗತ್ಯ. ಆ ದಿಸೆಯಲ್ಲಿ ಅಹಿಂದ ಜನಚಳುವಳಿ ಈ ಜನಜಾಗೃತಿ ಧರಣಿ ನಡೆಸುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾರಿ ಅಕಾಡೆಮಿ ಮಾಜಿ ಅಧ್ಯಕ್ಷ ಬಿ.ಎ ಮುಹಮ್ಮದ್ ಹನೀಫ್‌ ಮಾತನಾಡಿ, “ಮತದಾನ ಮಾಡಿದಾಗ ಮತದಾರನ ಓಟು ಯಾರಿಗೆ ಸಂದಾಯವಾಗಿದೆ ಎಂದು ಮತದಾರನಿಗೇ ತಿಳಿದುಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿಯಲ್ಲಿ ಇವಿಎಂನಿಂದ ಸೃಷ್ಟಿಯಾಗಿದೆ. ಚುನಾವಣೆಯು ಸಮುದ್ರಕ್ಕೆ ಕಲ್ಲುಹಾಕಿದಂತೆ ಭಾಸವಾಗುತ್ತದೆ. ಶಿಕ್ಷಿತರು ಕಡಿಮೆ ಪ್ರಮಾಣದಲ್ಲಿರುವ ಭಾರತ ದೇಶದಲ್ಲಿ, ವಿವಿಪ್ಯಾಟ್ ಮೂಲಕ ಕೂಡಾ ಮತದಾನ ಯಾರಿಗೆ ಮಾಡಲಾಗಿದೆ ಎಂಬುದನ್ನು ಅರಿತುಕೊಳ್ಳಲು ಸಾಧ್ಯವಿಲ್ಲದಾಗಿದೆ” ಎಂದರು.

“ಅಧಿಕಾರಿಗಳ ಒತ್ತಾಸೆಯಿಂದಾಗಿ ಚಲಾವಣೆಯಾದ ಮತಗಳಲ್ಲಿ ಕೇವಲ ಮೂರನೇ ಒಂದರಷ್ಟು ಓಟುಗಳನ್ನಾದರೂ ಮತಯಂತ್ರದ ಮೂಲಕ ದುರುಪಯೋಗ ಪಡಿಸಿಕೊಂಡರೆ ಅಥವಾ ಕೆಲವು ಮತಯಂತ್ರಗಳನ್ನೇ ಲಪಟಾಯಿಸಿ ಬೇರೆ ಮತಯಂತ್ರಗಳ ವ್ಯವಸ್ಥೆ ಮಾಡಿದರೆ ಅಥವಾ ಚಲಾವಣೆಯಾದ ಮತಗಳನ್ನು ತಿರುಚಿದರೆ ಮತಯಂತ್ರಗಳಿಂದ ಅಪಾಯ ಕಟ್ಟಿಟ್ಟ ಬುತ್ತಿ. ಆದ್ದರಿಂದ ಮತ ಪತ್ರಗಳ ಮೂಲಕವೇ ಚುನಾವಣೆ ನಡೆಸಬೇಕೆಂದು ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿರುವುದು ಪ್ರಶಂಸನೀಯ” ಎಂದರು.

ಮಾಜಿ ಉಪಮೇಯರ್ ಮೊಹಮ್ಮದ್ ಕುಂಜತ್ತಬೈಲ್‌ ಮಾತನಾಡಿ, “ಮತದಾರ ಬಂಧುಗಳು ಈ ದೇಶದ ಪ್ರಭುಗಳೇ ಹೊರತು ಜನಪ್ರತಿನಿಧಿಗಳು ಪ್ರಭುಗಳು ಅಲ್ಲ. ಅವರು ನಮ್ಮ ಸೇವಕರು. ಆದ್ದರಿಂದ ಚುನಾವಣಾ ವ್ಯವಸ್ಥೆಯ ರಕ್ಷಣೆಗಾಗಿ ಮತಪತ್ರಗಳು ಮರಳಿ ಬಳಕೆಯಾಗಬೇಕು” ಎಂದು ಆಗ್ರಹಿಸಿದರು.

ದಲಿತ ಚಳವಳಿ ಮುಖಂಡ ಅಚ್ಚುತ ಮೂಡಬಿದ್ರೆ, ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಖಾಲಿದ್ ಉಜಿರೆ, ಸಾಮಾಜಿಕ ದುರೀಣರಾದ ಪ್ರಕಾಶ್ ಬಿ. ಸಾಲ್ಯಾನ್, ಪರಮೇಶ್ವರ್, ರಾಖೇಶ್ ಕುಂದರ್, ಬಿ.ಎ. ಅಬೂಬಕ್ಕರ್, ಹಮೀದ್ ಕಿನ್ಯಾ, ಸಾಮುವೆಲ್ ಸದಾನಂದ ಅಮ್ಮಣ್ಣ, ಅಬ್ದುಲ್ ಖಾದರ್ ಇಡ್ಮಾ ಮತ್ತಿತರರು ಮಾತನಾಡಿದರು.

ಅಹಿಂದ ಪ್ರಧಾನ ಕಾರ‍್ಯದರ್ಶಿ ಯೂಸುಫ್ ವಕ್ತಾರ್ ಸ್ವಾಗತಿಸಿದರು ಮತ್ತು ಅಹಿಂದ ಉಪಾಧ್ಯಕ್ಷ ಇಬ್ರಾಹಿಮ್ ನಡುಪದವು ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...