ವಿಜಯಪುರ | ಅಗ್ನಿ ಅವಘಡ; ಸುಟ್ಟು ಕರಕಲಾದ ಚಪ್ಪಲಿ ಅಂಗಡಿ

Date:

ಆಕಸ್ಮಿಕ ಅಗ್ನಿ ಅವಘಡದಿಂದ ಚಪ್ಪಲಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ನಗರದ ಸರಾಫ್‌ ಬಜಾರ್ ಬಳಿ ಮಂಗಳವಾರ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ನವ ಕರ್ನಾಟಕ ಫುಟ್ ವೇರ್ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಮಂಗಳವಾರ ಮುಜಾನೆ ಅಂಗಡಿಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿ ಬೆಂಕಿ‌ ನಂದಿಸುವಲ್ಲಿ ಸಫಲರಾಗಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಅಂಗಡಿಯಲ್ಲಿಟ್ಟ ಚಪ್ಪಲಿಗಳು, ಪೀಠೋಪಕರಣಗಳು ಸೇರಿ ಇತರೆ ವಸ್ತುಗಳು ಭಸ್ಮವಾಗಿವೆ. ಗಾಂಧಿ ಚೌಕ‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ನವ ಕರ್ನಾಟಕ ಫುಟ್ ವೇರ್ ಅಂಗಡಿಯ ಮಾಲೀಕ ರಾಘವೇಂದ್ರ ಗಂಗಾಧರ್‌ ಶಹಪುರ್‌, ಸುದ್ದಿಗಾರರೊಂದಿಗೆ ಮಾತನಾಡಿ, ಮಧ್ಯರಾತ್ರಿ 1 ಅಥವಾ 2 ಗಂಟೆ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅವಘಡ ಹೇಗೆ ಆಗಿದೆ ಎಂಬುದು ಗೊತ್ತಿಲ್ಲ. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಲಾಯಿತು. ಅವರು ಬಂದು ಬೆಂಕಿ ನಂದಿಸಿದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಆಗಿರಬಹುದು ಎಂದು ಹೇಳಿದ್ದಾರೆ. ಗಾಂಧಿ ಚೌಕ ಠಾಣೆ ಪೋಲಿಸರು ಸ್ಥಳಕ್ಕೆ ಬಂದು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂದಾಜು 30 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌-ವೇ ಟೋಲ್‌ ದರ ಮತ್ತೆ ಹೆಚ್ಚಳ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...