ಅರ್ಹ ನಿವೇಶನ ಮನೆ ರಹಿತರಿಗೆ ವಿತರಿಸಬೇಕು

Date:

ಬಾಗೇಪಲ್ಲಿ:-ತಾಲ್ಲೂಕಿನ ಹೊರವಲಯದ ಪಾತ ಬಾಗೇಪಲ್ಲಿ ಬಳಿಯ ಖಾಲಿ ನಿವೇಶನವನ್ನು ಪಟ್ಟಣದ ಅರ್ಹ ನಿವೇಶನ, ಮನೆ ರಹಿತರಿಗೆ ವಿತರಿಸಬೇಕು ಎಂದು ಒತ್ತಾಯಿಸಿ ಭಾರತ ಮಾರ್ಕ್ಸ್‌ವಾದಿ, ಲೆನಿನ್‍ವಾದಿ ಪಕ್ಷ (ರೆಡ್ ಫ್ಲಾಗ್) ಅಖಿಲ ಭಾರತ ಕಿಸಾನ್ ಸಂಘಟನೆ ಅಂಬೇಡ್ಕರ್ ಹಮಾಲಿ, ಅಂಬೇಡ್ಕರ್ ಕಟ್ಟಡ ಕಾರ್ಮಿಕರ ಟ್ರೇಡ್ ಯುನಿಯನ್ ಸೆಂಟರ್ ಆಫ್ ಇಂಡಿಯಾದ ಮುಖಂಡರು ಮಹಿಳೆಯರು ನೇತೃತ್ವದಲ್ಲಿ ಪಾತ ಬಾಗೇಪಲ್ಲಿಯಲ್ಲಿ ಪ್ರತಿಭಟನೆ ಮಾಡಿದರು.

ಪಾತಬಾಗೇಪಲ್ಲಿಯಲ್ಲಿ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಲಿಲ್ಲ ಸಮಸ್ಯೆಗಳು ಏನೇ ಇದ್ದರೂ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ಮಾಡಿ ಈ ಜಾಗದಲ್ಲಿ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಅಜಯ್‍ಸಾರಥಿ ತಿಳಿಸಿದರು ಈ ಜಾಗದಲ್ಲಿ ಪ್ರತಿಭಟನೆ ಮಾಡಲು ಬಂದಿದ್ದೇವೆ ಇಲ್ಲಿಂದ ಹೋಗಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದಾಗ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ನಂತರ ಪ್ರತಿಭಟನಕಾರರು ಪಟ್ಟಣದ ಡಾ.ಎಚ್.ಎನ್.ವೃತ್ತದಿಂದ ಪುರಸಭೆವರೆಗೆ ಡಿವಿಜಿ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಿದರು ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡದ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಖಿಲ ಭಾರತ ಕಿಸಾನ್ ಸಂಘಟನೆ ರಾಜ್ಯ ಸಂಚಾಲಕ ಕೆ.ವಿ.ರಾಮಚಂದ್ರ ಮಾತನಾಡಿ ಪಟ್ಟಣದಲ್ಲಿ ಬಡತನ ರೇಖೆಗಿಂತ ಕಡಿಮೆ ಇರುವವರು ಕೃಷಿ ಕೂಲಿಕಾರ್ಮಿಕರಾಗಿ ಸಣ್ಣ ವ್ಯಾಪಾರ ಹಾಗೂ ಕಡು ಬಡವರು ಕೂಲಿ ಮಾಡಿಕೊಂಡಿದ್ದಾರೆ ಕೆಲವರು ನಿವೇಶನ ಪಡೆಯಲು ಕೈಬರಹದ ಅರ್ಜಿ ನೀಡಿ ವರ್ಷ ಕಳೆದಿದೆ ಎಂದರು.

ನಿವೇಶನ ರಹಿತರಿಗೆ ಪಟ್ಟಣದ ಹೊರವಲಯದ ಪಾತಬಾಗೇಪಲ್ಲಿಯಲ್ಲಿ 25 ಎಕರೆ ಮೀಸಲು ಇಡಲಾಗಿದೆ ಸ್ಥಳವನ್ನು ಕಾಯ್ದಿರಿಸಿ ಪುರಸಭೆ ವ್ಯಾಪ್ತಿಗೆ ನೀಡಿದ್ದಾರೆ ಇದುವರೆಗೂ ಪುರಸಭೆ ಅಧಿಕಾರಿ ಕಂದಾಯ ಇಲಾಖೆಯವರು ಫಲಾನುಭವಿಗಳಿಗೆ ಹಂಚಿಕೆ ಮಾಡಿಲ್ಲ ಜನರಿಗೆ ಸುಳ್ಳು ಹೇಳಿ ಕೆಲ ಅಧಿಕಾರಿ ದಲ್ಲಾಳಿಗಳು ಲಕ್ಷಾಂತರ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದರು.

ಕೂಡಲೇ ಜಿಲ್ಲಾಧಿಕಾರಿ ಮಧ್ಯಪ್ರವೇಶ ಮಾಡಿ ಅರ್ಹ ಫಲಾನುಭವಿಗಳಿಗೆ ನಿವೇಶನ ಮನೆ ಹಂಚಿಕೆ ಮಾಡಬೇಕು ಇಲ್ಲವಾದರೆ ಕಚೇರಿ ಮುಂದೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದರು.

ತಾಲ್ಲೂಕು ಸಮಿತಿ ಪ್ರಧಾನಕಾರ್ಯದರ್ಶಿ ಆರ್.ಎಂ.ಚಲಪತಿ ಮಾತನಾಡಿ ಜನರಿಗೆ ನಿವೇಶನ ಮನೆ ಹಂಚಿಕೆ ಮಾಡಲಾಗುವುದು ಎಂದು ಜನಪ್ರತಿನಿಧಿಗಳು, ಅಧಿಕಾರಿಗಳ ಮೂಲಕ ಹೇಳಿಸಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾರೆ. 40 ವರ್ಷಗಳಿಂದ ಸಾಗುವಳಿ ಮಾಡಿದವರು ಅರ್ಜಿ ನಮೂನೆ 50, 53, 57ರಲ್ಲಿ ಭರ್ತಿ ಮಾಡಿ ಸಲ್ಲಿಸಿದರೂ ಸಾಗುವಳಿ ಚೀಟಿ ವಿತರಿಸಿಲ್ಲ ಎಂದರು.
ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್ ಮಾತನಾಡಿ, ಪಾತಬಾಗೇಪಲ್ಲಿಯಲ್ಲಿ ನಿವೇಶನ ಹಂಚಿಕೆಗೆ ಜಾಗ ಮೀಸಲು ಇಡಲಾಗಿದೆ. ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಿ ಸರ್ಕಾರದ ಅನಮೋದನೆ ಪಡೆಯಬೇಕಾಗಿದೆ. ಅನುಮೋದನೆ ನೀಡಿದ ಬಳಿಕ ಅರ್ಹ ಫಲಾನುಭವಿಗಳಿಗೆ ನಿವೇಶನಗಳು ಹಂಚಿಕೆ ಮಾಡಲಾಗುವುದು ಎಂದರು.

ಇದನ್ನು ಓದಿದ್ದೀರಾ.? ಸವಿತಾ ಸಮಾಜದ ಬಂಧುಗಳಿಗೆ ನಿಗಮದ ಸೌಲಭ್ಯಗಳು ಕುರಿತಂತೆ ಅರಿವು ಕಾರ್ಯಕ್ರಮ

ಟ್ರೇಡ್ ಯುನಿಯನ್ ಸೆಂಟರ್ ಆಫ್ ಇಂಡಿಯಾ ಮುಖಂಡ ಮುಜಮುಲ್ಲ, ರಾಮರೆಡ್ಡಿ, ಆದಿಶೇಷು, ವೆಂಕಟರವಣಪ್ಪ, ಸಿ.ವೆಂಕಟರವಣಪ್ಪ, ಶಿವಪ್ಪ, ರಘುನಾಥರೆಡ್ಡಿ, ವೆಂಕಟರವಣಪ್ಪ, ಶಂಕರಪ್ಪ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...