ಕನಕಪುರ | ಭ್ರೂಣ ಪತ್ತೆ ಪ್ರಕರಣ: ಆರೋಪಿ ಡಾ. ದಾಕ್ಷಾಯಿಣಿ ಮತ್ತೆ ನಿಯೋಜನೆಗೆ ಪ್ರಗತಿಪರ ಸಂಘಟನೆಗಳ ವಿರೋಧ

Date:

ಭ್ರೂಣ ಪತ್ತೆ ಮತ್ತು ಹತ್ಯೆಯ ರೂವಾರಿ ಡಾ. ದಾಕ್ಷಾಯಿಣಿ ಅವರನ್ನು ಮತ್ತೆ ಕನಕಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ನಿಯೋಜನೆ ಮಾಡಿರುವುದು ಕುರಿ ಕಾವಲಿಗೆ ತೋಳ ನಿಯೋಜಿಸಿದಂತೆ ಎಂದು ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಕೆಲವು ತಿಂಗಳ ಹಿಂದೆ ಕೆಲವೆಡೆ ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಕನಕಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಸ್ತ್ರೀ ರೋಗ ಹಾಗೂ ಹೆರಿಗೆ ತಜ್ಞೆ ಕೆಲಸ ಮಾಡುತ್ತಿದ್ದ ಡಾ. ದಾಕ್ಷಾಯಿಣಿ ಪಿಸಿಪಿಎನ್‌ಡಿಟಿ ಕಾಯ್ದೆ ಉಲ್ಲಂಘಿಸಿ ಭ್ರೂಣ ಪತ್ತೆ ಯಂತ್ರವನ್ನು ಸ್ಥಳಾಂತರಿಸಿ ನೂರಾರು ಭ್ರೂಣಗಳ ಪತ್ತೆ ಮಾಡಿ ಅಬಾರ್ಷನ್ ಮಾಡಿಸುತ್ತಿದ್ದ ಅಮಾನವೀಯ ಪ್ರಕರಣವನ್ನು ಪ್ರಗತಿಪರ ಸಂಘಟನೆಗಳು ಸಾಕ್ಷಿ ಸಮೇತ ಬಯಲಿಗೆಳೆದಿತ್ತು.

ಮೇಲ್ನೋಟಕ್ಕೆ ಆರೋಪ ಸಾಬೀತಾದ ಪರಿಣಾಮ ಅವರನ್ನು ಶಿಕ್ಷೆಯ ಭಾಗವಾಗಿ ಚಿಕ್ಕಬಳ್ಳಾಪುರದ ಭಟ್ಟರಹಳ್ಳಿ ಎಂಬಲ್ಲಿಗೆ ವರ್ಗ ಮಾಡಲಾಗಿತ್ತು. ಆದರೆ ಅಲ್ಲಿಗೆ ಹೋಗದೆ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಆದರೆ ಮತ್ತೆ ಅವರ ಪ್ರಭಾವಕ್ಕೆ ಮಣಿದು ಇಲಾಖೆಯು ಅವರನ್ನು ಮರಳಿ ಅದೇ ಸ್ಥಳಕ್ಕೆ ನಿಯೋಜನೆ ಮಾಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು ಭ್ರೂಣ ಪತ್ತೆಯ ಯಂತ್ರದ ದಾಖಲೆಗಳನ್ನು ಕೋರ್ಟ್‌ನ ಮುಂದಿರಿಸಬೇಕಾದ ಆರೋಗ್ಯ ಇಲಾಖೆ ದಾಕ್ಷಾಯಣಿ ಬಗ್ಗೆ ಮೃದು ಧೋರಣೆ ತಳೆದಿರುವುದು ಕಂಡು ಬಂದಿದೆ. ಈಗಾಗಲೇ ಆ ಯಂತ್ರದಲ್ಲಿನ MTP (ಅಬಾರ್ಷನ್)ದಾಖಲೆಗಳನ್ನು ಪಡೆದು ಪ್ರಗತಿಪರ ಸಂಘಟನೆಗಳ ಪರವಾಗಿ ನಾನೇ ನ್ಯಾಯಾಲಯದಲ್ಲಿ ದಾಖಲೆ ಮಂಡಿಸಲು ಅನುಮತಿ ಕೋರಿ ವಕೀಲರ ಮೂಲಕ ಅರ್ಜಿ ಸಲ್ಲಿಸಲಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

IMG 20241118 WA0035

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೂ ಪತ್ರ ಬರೆಯಲಿದ್ದು, ಸಾಕ್ಷಿ ನಾಶದ ಸಂಭವ ಇರುವ ಕಾರಣ ತಕ್ಷಣವೇ ಅವರನ್ನು ವರ್ಗಾವಣೆ ಮಾಡಲು ಆಗ್ರಹಿಸಲಿದ್ದೇನೆ ಎಂದರು.

ನೂರಾರು ಭ್ರೂಣಗಳ‌ ಕಣ್ಣು ಬಿಡುವ ಮೊದಲೇ ಕೊಂದವರಿಗೆ ಖಂಡಿತ ಶಿಕ್ಷೆಯಾಗಲಿದೆ. ನಮಗೆ ನ್ಯಾಯಲಯದ ಮೇಲೆ ಅಪರಿಮಿತ ವಿಶ್ವಾಸವಿದೆ ಎಂದು ಹೇಳಿದರು.

ರಾಜ್ಯ ರೈತ ಸಂಘದ ಸಂಚಾಲಕರಾದ ಚೀಲೂರು ಮುನಿರಾಜು ಮಾತನಾಡಿ, ಡಾ. ದಾಕ್ಷಾಯಣಿ ಪ್ರಾಮಾಣಿಕತೆಯ ಸಚ್ಚಾರಿತ್ರ್ಯವನ್ನು ಒಳಗೊಂಡ ವೈದ್ಯೆಯಲ್ಲ. ಈ ಹಿಂದೆ ಬಡವರೊಬ್ಬರಿಗೆ ಹೆರಿಗೆ ಮಾಡಿಸಲು 5000 ರೂ ಲಂಚ ಕೇಳಿದ ಪ್ರಕರಣವನ್ನು ಆಡಿಯೋ ದಾಖಲೆಯೊಂದಿಗೆ ಮುಂದಿರಿಸಿ ಹೋರಾಟ ಮಾಡಲಾಗಿತ್ತು ಎಂದರು.

ಇದನ್ನು ಓದಿದ್ದೀರಾ? ಮಂಡ್ಯ | ಒಂದು ಟ್ವೀಟ್‌ನಿಂದ ಏನಾಗುತ್ತದೆ ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ!

ಲಂಚ ಕೊಡದವರ ಬಗ್ಗೆ ನಿರ್ಲಕ್ಷ್ಯವಾಗಿ ವರ್ತಿಸುವ ಹಲವಾರು ಆರೋಪ ಅವರ ಮೇಲಿವೆ. ಆದ್ದರಿಂದ ಅವರನ್ನು ಇಲ್ಲಿಂದ ವರ್ಗಾವಣೆ ಮಾಡಿ ವೈದ್ಯೋ ನಾರಾಯಣ ಹರಿ ಎಂಬ ಜನರ ನಂಬಿಕೆಗೆ ಅನುಗುಣವಾಗಿ ಸೇವೆ ಸಲ್ಲಿಸುವ ವೈದ್ಯರನ್ನು ನಿಯೋಜನೆ ಮಾಡಬೇಕು ಎಂದು ರಾಜ್ಯ ರೈತ ಸಂಘ ಆಗ್ರಹಿಸುತ್ತದೆ ಎಂದರು.

ಪತ್ರಿಕಾಗೋಷ್ಡಿಯಲ್ಲಿ ನಗರಸಭೆ ಸದಸ್ಯರಾದ ಸ್ಟುಡಿಯೋ ಚಂದ್ರು, ನೇಗಿಲಯೋಗಿ ಸಂಘಟನೆಯ ಕಾಡೇಗೌಡ, ಜೀವನ ಟ್ರಸ್ಟ್‌ನ ಅಧ್ಯಕ್ಷ ಪ್ರಶಾಂತ್ ಹೊಸದುರ್ಗ, ವೈಭವ ಕರ್ನಾಟಕ ಜಿಲ್ಲಾಧ್ಯಕ್ಷ ಪುಟ್ಟಲಿಂಗಯ್ಯ, ರೇಷ್ಮೆ ಉತ್ಪದಾಕರ ಸಂಘದ ಅಧ್ಯಕ್ಷ ರಾಮಕೃಷ್ಣ, ಕನ್ನಡ ಭಾಸ್ಕರ್, ಜಯಕರ್ನಾಟಕ ಜನಪರ ವೇದಿಕೆ ಗಿರೀಶ್, ಆರ್‌ಟಿಐ ಕಾರ್ಯಕರ್ತ ಕಿಶೋರ್, ರೈತ ಸಂಘದ ಕನಕಪುರ ತಾಲೂಕು ಅಧ್ಯಕ್ಷ ಕುಮಾರ್, ಹಾರೋಹಳ್ಳಿ ತಾಲೂಕು ಅಧ್ಯಕ್ಷ ಬಸವರಾಜು, ಮುಖಂಡರಾದ ಮುನಿಶಿವಣ್ಣ, ರವಿ, ಸಿದ್ದರಾಜು, ರವಿಕುಮಾರ್, ಕೆಂಪಣ್ಣ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...