ಬೀದರ್‌ | ಸ್ವಚ್ಚ ಸುಂದರ ನಗರ ನಿರ್ಮಾಣಕ್ಕೆ ಒತ್ತು ಕೊಡಿ : ಸಚಿವ ಈಶ್ವರ ಖಂಡ್ರೆ

Date:

ಗ್ರಾಮೀಣ ಭಾಗದ ಜನರು ಉದ್ಯೋಗ ಹಾಗೂ ಶಿಕ್ಷಣಕ್ಕಾಗಿ ನಗರಗಳತ್ತ ಮುಖ ಮಾಡುತ್ತಿರುವುದರಿಂದ ನಗರಗಳು ಬೆಳೆದು ಮೂಲಭೂತ ಸೌಕರ್ಯದ ಕೊರತೆ ಮತ್ತು ಪರಿಸರ ಮಾಲಿನ್ಯದ ಸಮಸ್ಯೆ ಉಂಟಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ.ಬಿ ಖಂಡ್ರೆ ಕಳವಳ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿಯವರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ  50 ಲಕ್ಷ ಅನುದಾನನದಲ್ಲಿ ಪಾದಚಾರಿ ಮಾರ್ಗ ಹಾಗೂ ಬೀದಿ ದೀಪ ಉದ್ಘಾಟಿಸಿ ಮಾತನಾಡಿದ ಅವರು, “ನಗರ ಸಭೆಯ ಅಧ್ಯಕ್ಷರು ಮತ್ತು ಸದಸ್ಯರು ಪರಿಸರ ರಕ್ಷಣೆಯ ಜೊತೆಗೆ ಮೂಲಭೂತ ಸೌಕರ್ಯ ಒದಗಿಸುವ ಮೂಲಕ ಸ್ವಚ್ಚ, ಸುಂದರ ಬೀದರ ನಿರ್ಮಾಣಕ್ಕೆ ಒತ್ತು ನೀಡಬೇಕು” ಹೇಳಿದರು.
“ಈ ಹಿಂದೆ ನಾನು ಪೌರಾಡಳಿ ಖಾತೆ ಸಚಿವನಾಗಿದ್ದ ಸಂದರ್ಭದಲ್ಲಿ ಬೀದರ ನಗರದ ಅಭಿವೃದ್ದಿಗೆ ನೂರಾರು ಕೋಟಿ ರೂ.ಗಳ ಅನುದಾನ ನೀಡಿದೇನೆ. ಅದೇ ಅನುದಾನದ ಕಾಮಗಾರಿಗಳು ಇಂದಿಗೂ ನಡೆಯುತ್ತಿವೆ. ಈಗ ಮತ್ತೆ ನಾನು ರಹೀಮ್ ಖಾನ್ ಸೇರಿ ಯೋಜನೆ ಹಾಕಿಕೊಂಡಿದ್ದೇವೆ. ಈ ಯೋಜನೆಯಡಿ ಬೀದರಗೆ 10 ಕೋಟಿ ರೂ. ಹಾಗೂ ಭಾಲ್ಕಿಗೆ 10 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಅಮೃತ ಯೋಜನೆಯಡಿ ಉಳಿತಾಯವಾದ 60 ಕೋಟಿ ರೂ.ಗಳ ಅನುದಾನ ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ ಬೀದರಗೆ ಮಂಜುರಾಗಿದೆ ಎಂದು ಪೌರಾಡಳಿತ ರಹೀಮ್ ಖಾನ್ ಹೇಳಿದ್ದಾರೆ” ಎಂದರು.
ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಮಾತನಾಡಿ, “ಈ ಬಡಾವಣೆಯ ನಗರಸಭೆ ಸದಸ್ಯ ಹಾಗೂ ನಿವಾಸಿಗಳ ಮನವಿಯ ಮೇರೆಗೆ ಕೆಕೆಆರ್ ಡಿಬಿಯಲ್ಲಿ ನನಗೆ ಬರುವ 50 ಲಕ್ಷ ರೂ. ಅನುದಾನದಲ್ಲಿ ಪಾದಚಾರಿ ಮಾರ್ಗ ಹಾಗೂ ಬೀದಿ ದೀಪ ಅಳವಡಿಸಿದ್ದೇನೆ. ಮುಂದಿನ ದಿನಗಳಲ್ಲಿ ಈ ಬಡಾವಣೆ ಹೆಚ್ಚಿನ ಅಭಿವೃದ್ದಿಗೆ ಅನುದಾನ ಅಗತ್ಯವಿದ್ದು ಸಚಿವರು ಸಹಕಾರ ನೀಡಬೇಕು” ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೀದರ ನಗರಸಭೆ ಅಧ್ಯಕ್ಷ ಮೊಹಮ್ಮದ ಗೌಸ್, ನಗರಸಭೆ ಸದಸ್ಯ ಪ್ರಶಾಂತ ದೊಡ್ಡಿ, ಜಿಲ್ಲಾ ಕಾಂಗ್ರೇಸ್‌ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಸೇರಿದಂತೆ ಬಡಾವಣೆಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...