ಚಾಮರಾಜನಗರ | ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ : ಸಚಿವ ಕೆ ವೆಂಕಟೇಶ್

Date:

ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಶು ಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ‘ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ ‘ ಎಂದರು.

” ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಕುಡಿಯುವ ನೀರಿನ ತೊಂದರೆ ಕಂಡು ಬಂದಲ್ಲಿ ತಕ್ಷಣವೇ ಪರಿಹರಿಸಿ. ಎಲ್ಲಿಯೇ ಆಗಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗಬೇಕು. ನೀರಿನ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳಲ್ಲಿ ಪರ್ಯಾಯ ವ್ಯವಸ್ಥೆ ಮೂಲಕ ನೀರು ಸರಬರಾಜು ಮಾಡಬೇಕು. ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು ನೀರಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಕುಡಿಯುವ ನೀರು ವ್ಯವಸ್ಥೆಯ ಬಗ್ಗೆ ಸಂಪೂರ್ಣವಾಗಿ ನಿಗಾ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ” ನೀಡಿದರು.

” ಲಭ್ಯವಿರುವ ಅನುದಾನದಲ್ಲಿ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಿ. ಮುಂದಿನ ದಿನಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಿಗೆ ಸಮಸ್ಯೆಯಾಗದಂತೆ ನೀರು ಪೂರೈಸುವುದು ಅಧಿಕಾರಿಗಳ ಮುಖ್ಯ ಹೊಣೆಗಾರಿಕೆಯಾಗಿದೆ. ಹೆಚ್ಚು ಸಂಗ್ರಹ ಸಾಮಥ್ರ್ಯದ ಟ್ಯಾಂಕ್‍ಗಳಲ್ಲಿ ನೀರು ಶೇಖರಣೆ ಮಾಡಬೇಕಿದೆ. ನೀರಿನ ಸರಬರಾಜು ಮಾಡುವ ಸ್ಥಳಗಳಲ್ಲಿ ಯಾವುದೇ ಸೋರಿಕೆ ಆಗದಂತೆ ಎಚ್ಚರವಹಿಸಿ. ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿ ಯಾವುದೇ ಲೋಪವಿಲ್ಲದಂತೆ ನಡೆಯಬೇಕು. ಗ್ರಾಮ ಪಂಚಾಯಿತಿಗಳು ಯೋಜನೆ ಹಸ್ತಾಂತರಿಸಿಕೊಳ್ಳುವ ಮೊದಲು ಎಲ್ಲವೂ ಸರಿಯಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಈ ಸಂಬಂಧ ಸೂಕ್ತ ಸೂಚನೆ ನೀಡಬೇಕೆಂದು ” ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

” ಮಳೆಗಾಲದಲ್ಲಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಾಗಿರುವ ಬಿತ್ತನೆ ಬೀಜ, ರಸಗೊಬ್ಬರಗಳನ್ನು ಜಿಲ್ಲೆಗೆ ಅಗತ್ಯಕ್ಕನುಗುಣವಾಗಿ ದಾಸ್ತಾನು ಮಾಡಬೇಕು. ಎಲ್ಲಿಯೂ ಕೊರತೆಯಾಗಬಾರದು. ಜಾನುವಾರುಗಳಿಗೆ ಮೇವು ಸಹ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರಬೇಕು. ಹಾಲಿನ ದರ ಹೆಚ್ಚಳ ಸಂಬಂಧ ಪ್ರಸ್ತಾಪಿಸಿದ ಸಚಿವರು ಹಾಲು ದರ ಏರಿಕೆ ಮಾಡಿದ ಸಂಪೂರ್ಣ ಮೊತ್ತವನ್ನು ರೈತರಿಗೆ ವರ್ಗಾಯಿಸಲಾಗುತ್ತದೆ.

ಕೆಎಸ್ಆರ್ಟಿಸಿ ಬಸ್‍ಗಳ ಸೇವೆ ಸಮರ್ಪಕವಾಗಿ ಸಿಗಬೇಕು. ಲಾಭವನ್ನಷ್ಟೇ ನೋಡದೇ ಗ್ರಾಮೀಣ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚು ಬಸ್ಸುಗಳನ್ನು ನಿಯೋಜಿಸಬೇಕು. ಕಳೆದ ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದ ಕಳಪೆ ಬೇಳೆ ಪೂರೈಕೆ ಸಂಬಂಧ ವಿವರ ಪಡೆದ ಸಚಿವರು ಗುಣಮಟ್ಟವಿಲ್ಲದ ಬೇಳೆ ಸರಬರಾಜುದಾರರು ಹಾಗೂ ಬೇಳೆಯ ಗುಣಮಟ್ಟದ ಬಗ್ಗೆ ದೃಢೀಕರಿಸಿದವರಿಗೆ ನೋಟಿಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಶಾಸಕ ಎ ಆರ್ ಕೃಷ್ಣಮೂರ್ತಿ ಮಾತನಾಡಿ ‘ ಜೆಜೆಎಂ ಕಾಮಗಾರಿ ನಿರ್ವಹಿಸಿದ ಕೆಲವು ಕಡೆ ಪೈಪ್‍ಗಳು ಒಡೆದು ಹೋಗಿ ತೊಂದರೆಯಾಗಿದೆ. ನಿಗದಿತ ಆಳ ಮತ್ತು ನಿರ್ದಿಷ್ಟ ಪೈಪ್‍ಗಳ ಅಳವಡಿಕೆಯಲ್ಲಿ ಮಾರ್ಗಸೂಚಿ ಪ್ರಕಾರ ಕಾಮಗಾರಿ ನಡೆಯಬೇಕಿದೆ. ಶುದ್ದ ಕುಡಿಯುವ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಗುಂಬಳ್ಳಿಯಂತಹ ಪ್ರಕರಣಗಳು ಮರುಕಳಿಸದಂತೆ ನಿಗಾವಹಿಸಬೇಕು ‘ ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | ದರ್ಪದ ನೆರಳಲ್ಲಿ ‘ ಲೈನ್ ಮನೆ ‘ ಜೀತ

ಲೋಕಸಭಾ ಸದಸ್ಯ ಸುನೀಲ್ ಬೋಸ್, ಹೆಚ್ ಎಸ್ ಗಣೇಶ್ ಪ್ರಸಾದ್, ಡಾ ಡಿ ತಿಮ್ಮಯ್ಯ, ಕಾಡಾ ಅಧ್ಯಕ್ಷ ಪಿ ಮರಿಸ್ವಾಮಿ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷೆ ಡಾ ಪುಷ್ಪಾ ಅಮರನಾಥ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಹೆಚ್ ವಿ ಚಂದ್ರು, ಕೆಡಿಪಿ ನಾಮ ನಿರ್ದೇಶಿತ ಸದಸ್ಯ ಮಹದೇವಣ್ಣ, ಸಯ್ಯದ್ ಮುಸೈಯೀಬ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...