ಅನಾರೋಗ್ಯ | ಫೇಸ್‌ಬುಕ್‌ ಪೋಸ್ಟ್ ಹಾಕಿ ಸಾವಿಗೆ ಶರಣಾದ ಸಾಹಿತಿ, ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ

Date:

ಅನಾರೋಗ್ಯದಿಂದ ಬಳಲುತ್ತಿದ್ದ ಸಾಹಿತಿ ಹಾಗೂ ಪರಿಸರವಾದಿಯಾಗಿ ಗುರುತಿಸಿಕೊಂಡಿದ್ದ ಭೂಹಳ್ಳಿ ಪುಟ್ಟಸ್ವಾಮಿ (76) ಅವರು ಫೇಸ್‌ಬುಕ್‌ ಪೋಸ್ಟ್ ಹಾಕಿ ಭಾನುವಾರ ತಡರಾತ್ರಿ ಚನ್ನಪಟ್ಟಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಪುಟ್ಟಸ್ವಾಮಿ ಅವರ ಕುಟುಂಬ ಮೈಸೂರಿನಲ್ಲಿ ನೆಲೆಸಿತ್ತು. ಆದರೆ, ಪುಟ್ಟಸ್ವಾಮಿ ಅವರು ಮಾತ್ರ ಚನ್ನಪಟ್ಟಣದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ಆಗಾಗ ಮೈಸೂರಿಗೆ ಹೋಗಿ ಬರುತ್ತಿದ್ದರು ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.

ಭೂಹಳ್ಳಿ ಪುಟ್ಟಸ್ವಾಮಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಾಮಾಜಿಕ ಹೋರಾಟಗಾರ ವಡ್ಡಗೆರೆ ನಾಗರಾಜಯ್ಯ, “ನನ್ನ ಬಹುಕಾಲದ ಆತ್ಮೀಯ ಕವಿ ಗೆಳೆಯ ‘ಕವಿವನ’ ‘ಜೀವೇಶ್ವರ’ ‘ಬುದ್ದೇಶ್ವರ’ ಸ್ಥಾಪಕ, ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಅವರು ಅನಾರೋಗ್ಯ ಸಮಸ್ಯೆಯನ್ನು ಎದುರಿಸಲಾಗದೆ ನಿನ್ನೆ ರಾತ್ರಿ 2:40 ರಲ್ಲಿ ತನ್ನ ಸಾವಿಗೆ ತಾನೇ ಕಾರಣವೆಂದು ಫೇಸ್‌ಬುಕ್‌ ಪೋಸ್ಟ್ ಬರೆದು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ಪಾರ್ಥೀವ ಶರೀರ ಈಗ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿದೆ. ಅಂತಿಮ ಸಂಸ್ಕಾರವು ಸೋಮವಾರ ಸಂಜೆ 4 ರ ನಂತರ ಮಾಡಲಾಗುವುದೆಂದು ಅವರ ಅಣ್ಣನ ಮಗ ಮಹೇಶ್ ಮಾಹಿತಿ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ನೇಣಿಗೆ ಶರಣಾಗಿದ್ದು, ಸ್ವಗ್ರಾಮದಲ್ಲಿ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಆಪ್ತರು ತಿಳಿಸಿದ್ದಾರೆ.

ವೃತ್ತಿಯಲ್ಲಿ ಇತಿಹಾಸ ಉಪನ್ಯಾಸಕರಾಗಿದ್ದ ಪುಟ್ಟಸ್ವಾಮಿ ಅವರು ಪ್ರವೃತ್ತಿಯಲ್ಲಿ ಸಾಹಿತಿಯಾಗಿದ್ದರು. ಸುಮಾರು 25ಕ್ಕೂ ಹೆಚ್ಚು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಹಳ್ಳಿ ಮನೆ ಲುಂಬಿನಿ, ನೂರು ಸ್ವರ, ಎಲ್ಲರ ಹೆಜ್ಜೆ, ಭಾವ ಮಂಜರಿ, ನೆಲದ ಕಂಬನಿ, ಸ್ವಾತಂತ್ರ್ಯಕ್ಕೆ ಜೀವವಿದೆ, ಗೋಜಲು, ಬೆಳದಿಂಗಳ ಕುಡಿ, ಲಾವಣಿ ಹಾಡು, ಅಕ್ಷರ ಗುಡಿ ನಾಟಕ, ಅಗ್ರಹಾರ ಬೀದಿಗಳಲ್ಲಿ…ಹೀಗೆ ಹಲವಾರು ಪುಸ್ತಕಗಳನ್ನು ಪ್ರಕಟಿಸಿ ಸಾಹಿತ್ಯ ಆಸಕ್ತರ ಮೆಚ್ಚುಗೆ ಗಳಿಸಿದ್ದರು.

ಗೊರೂರು ಸಾಹಿತ್ಯ ಪ್ರಶಸ್ತಿ, ಚುಟುಕು ಸಾಹಿತ್ಯ ಪ್ರಶಸ್ತಿ, ಕೆಎಸ್‌ಆರ್‌ಟಿಸಿ ಕನ್ನಡ ಕ್ರಿಯಾ ಸಮಿತಿಯಿಂದ ಸಾಹಿತ್ಯ ಕೌಸ್ತುಭ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಪುಟ್ಟಸ್ವಾಮಿ ಭಾಜನರಾಗಿದ್ದರು.

ಕವಿ, ಪರಿಸರವಾದಿ, ಸಮಾಜಮುಖಿ ಚಿಂತಕ, ನಿವೃತ್ತ ಪ್ರಾಧ್ಯಾಪಕರಾಗಿದ್ದ ಪುಟ್ಟಸ್ವಾಮಿ ಅವರು, ಸ್ವಂತ ಹಣದಲ್ಲಿ ಚನ್ನಪಟ್ಟಣ ತಾಲೂಕಿನ ವಿವಿಧೆಡೆ ಸರ್ಕಾರಿ ಜಾಗಗಳಲ್ಲಿ ಗಿಡನೆಟ್ಟು ಬೋಳು ಜಾಗ ಮತ್ತು ಭೂಮಿಯನ್ನೆಲ್ಲಾ ವನವನ್ನಾಗಿಸುತ್ತಾ ಬಂದಿದ್ದರು . ಇವರಿಂದಾಗಿ ಸುಮಾರು 40 ಎಕರೆ ಜಾಗವು ಹಸಿರು ಹೊದ್ದು ನಿಂತಿದೆ.

ಬುದ್ಧವನ, ಬುದ್ದೇಶ್ವರ ವನ (ಕವಿವನ), ಜೀವೇಶ್ವರ ವನ, ಪುಲಕೇಶಿ ವನ, ನೃಪತುಂಗ ವನ, ಕದಂಬವನ, ಗಾಂಧಿ ವನ, ಅಂಬೇಡ್ಕರ್ ವನ ಹೀಗೆಲ್ಲಾ ವನಗಳಿಗೆ ಹೆಸರುಗಳನ್ನು ನಾಮಕರಣ ಮಾಡಿದ್ದಾರೆ. ಬುದ್ದೇಶ್ವರ ವನದಲ್ಲಿ ಮಕ್ಕಳ ಸಾಂಸ್ಕೃತಿಕ ಚಟುವಟಿಕೆಗಳಿಗಾಗಿಯೇ ಸ್ವಂತ ಹಣದಲ್ಲಿ ವೇದಿಕೆ ನಿರ್ಮಿಸಿ ಕೊಟ್ಟಿದ್ದಾರೆ. ಗ್ರಂಥಾಲಯಕ್ಕಾಗಿ ಕೊಠಡಿ ಕಟ್ಟಿಸಿದ್ದಾರೆ. ನೂರು ಜನ ಕುಳಿತುಕೊಳ್ಳಬಹುದಾದಷ್ಟು ಸಿಮೆಂಟಿನ ಬೆಂಚುಗಳ ವ್ಯವಸ್ಥೆ ಮಾಡಿದ್ದಾರೆ. ಭೂಹಳ್ಳಿ ಪುಟ್ಟಸ್ವಾಮಿ ಟ್ರಸ್ಟ್‌ ಸ್ಥಾಪನೆ ಮಾಡಿಕೊಂಡು ನಿರಂತರವಾಗಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.

ಭೂಹಳ್ಳಿ ಪುಟ್ಟಸ್ವಾಮಿಯವರು ಈ ರೀತಿ ನಿರ್ಧಾರ ತೆಗೆದುಕೊಂಡು, ಆತ್ಮಹತ್ಯೆ ಮಾಡಿಕೊಂಡಿರುವುದು ಅವರ ಆಪ್ತ ವಲಯಕ್ಕೆ ಆಘಾತ ಉಂಟು ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...