ಮೈಸೂರು | ಸಾಲು ಮರದ ತಿಮ್ಮಕ್ಕನವರಿಗೆ ಸಂತಾಪ ಸಲ್ಲಿಸಿದ ಪರಿಸರ ಪ್ರೇಮಿಗಳು

Date:

ಮೈಸೂರಿನ ಜಯನಗರದಲ್ಲಿರುವ ಸಾಲುಮರದ ತಿಮ್ಮಕ್ಕ ಉದ್ಯಾನವನ ಮುಂಭಾಗದಲ್ಲಿ ಪರಿಸರ ಪ್ರೇಮಿಗಳಿಂದ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕನವರು ವಿಧಿವಶರಾದ ಹಿನ್ನೆಲೆಯಲ್ಲಿ, ಅವರ ಭಾವಚಿತ್ರ ಹಿಡಿದು ಸಂತಾಪ ಸಲ್ಲಿಸಿದರು.

ವೈದ್ಯರಾದ ಡಾ. ಎಸ್.ಪಿ. ಯೋಗಣ್ಣ ಮಾತನಾಡಿ, “ಮರಗಳನ್ನು ತನ್ನ ಹೆತ್ತ ಮಕ್ಕಳಂತೆ ಸಲುಹಿದ ಮಹಾತಾಯಿಯ ಪರಿಸರ ಪ್ರೇಮ, ಕಾಳಜಿ, ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದರೆ ಅದೇ ನಾವು ಅವರಿಗೆ ಸಲ್ಲಿಸಬಹುದಾದ ನಿಜವಾದ ಶ್ರದ್ಧಾಂಜಲಿ” ಎಂದು ಹೇಳಿದರು

ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಕೆ.ಬಿ. ಲಿಂಗರಾಜು ಮಾತನಾಡಿ, ಇದುವರೆಗೂ 8000ಕ್ಕೂ ಹೆಚ್ಚು ಮರಗಿಡಗಳನ್ನು ನೆಟ್ಟು ಪೋಷಿಸಿದ ಕೀರ್ತಿ ತಿಮ್ಮಕ್ಕ ಅವರಿಗೆ ಸಲ್ಲುತ್ತದೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ಕನ್ನಡ ವಿಶ್ವ ವಿದ್ಯಾಲಯದ ನಾಡೋಜ ಪ್ರಶಸ್ತಿ, ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಸಂಘ-ಸಂಸ್ಥೆಗಳ ಪ್ರಶಸ್ತಿಗೆ ಭಾಜನರಾಗಿದ್ದ ಸಾಲುಮರದ ತಿಮ್ಮಕ್ಕ ಅವರ ಸಾಧನೆ ಇಂದಿನ ಯುವ ಪೀಳಿಗೆಗೆ ಪ್ರೇರಣೆ ನೀಡಲಿ. ಅವರ ನಿಧನ ಕನ್ನಡ ನಾಡಿಗೆ ತುಂಬಲಾರದ ನಷ್ಟ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೆ ಆರ್ ನಗರ | ಮಕ್ಕಳ ದಿನಾಚರಣೆಯಂದು ಮಕ್ಕಳ ಹಕ್ಕುಗಳ ಅರಿವಿನ ಕಾರ್ಯಕ್ರಮ

ಸಂತಾಪ ಸಭೆಯಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಜೆಡಿಎಸ್ ಕಾರ್ಯಧ್ಯಕ್ಷ ಎಸ್. ಪ್ರಕಾಶ್, ಪ್ರಿಯದರ್ಶನ್, ಜಿ. ರಾಘವೇಂದ್ರ, ವರದೇಗೌಡ, ಜೀವದಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕಡಕೋಳ ಜಗದೀಶ್, ಅಪೂರ್ವ, ಸುರೇಶ್, ಲೋಕೇಶ್, ಜತ್ತಿ ಪ್ರಸಾದ್, ಸುಚೇಂದ್ರ ಸೇರಿದಂತೆ ಇನ್ನಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...