ಕೋಲಾರ | ಸಮಾನತೆಯಿಂದ ಜೀವಿಸುವ ಹಕ್ಕು ಸಂವಿಧಾನದ ಕೊಡುಗೆ : ಎಂ.ಎಲ್.ಸಿ ಅನಿಲ್ ಕುಮಾರ್

Date:

ನಮ್ಮ ದೇಶದ ಪ್ರತಿಯೊಬ್ಬರೂ ಸಮಾನತೆಯಿಂದ ಜೀವಿಸುವ ಹಕ್ಕನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ. ಪ್ರತಿಯೊಂದು ಧರ್ಮಕ್ಕೂ ಒಂದೊಂದು ಗ್ರಂಥ ಇದೆ. ಆದರೆ ಎಲ್ಲಾ ಧರ್ಮಗಳಿಗಿಂತಲೂ ಸಂವಿಧಾನವೇ ಪವಿತ್ರ ಗ್ರಂಥ ಎಂದು ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಹೇಳಿದರು.

ಕೋಲಾರ ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ಸೋಮವಾರ ಡಾ.ಬಿ.ಆರ್ ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರ ಹೆಜ್ಜೆ ಗುರುತುಗಳನ್ನು ಅರಿತು, ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯಬೇಕಾಗಿದೆ. ವಿಶ್ವದ ಅತೀ ದೊಡ್ಡ ಪ್ರಜ್ಞಾಪ್ರಭುತ್ವ ರಾಷ್ಟ್ರವಾಗಿ ಭಾರತವನ್ನು ರೂಪಿಸಿದ್ದಾರೆ. ದೇಶ ಪ್ರಸ್ತುತ ಶಾಂತಿ ಸೌಹಾರ್ಧತೆಯಿಂದ ಮುನ್ನೆಡೆಯಲು ಭದ್ರ ತಳಪಾಯ ಹಾಕಿಕೊಟ್ಟಿರುವ ಸಂವಿಧಾನವೇ ಕಾರಣ ಎಂದರು.

ಅನಿಲ್‌ 2

ಮೀಸಲಾತಿಯೇ ಇಲ್ಲದ ಸಂದರ್ಭದಲ್ಲಿ ಯಾರೂ ಓದದಷ್ಟು ಪದವಿಗಳನ್ನು ಅಂಬೇಡ್ಕರ್‌ ಓದಿದ್ದಾರೆ. ಆದರೆ ಪ್ರಸ್ತುತ ಮೀಸಲಾತಿಯಿದ್ದು, ಸಾಕಷ್ಟು ಅವಕಾಶಗಳಿವೆ. ಆದರೂ ಶಿಕ್ಷಣಕ್ಕೆ ಅಧ್ಯತೆ ನೀಡುತ್ತಿಲ್ಲ. ಸಾರ್ವಜನಿಕರು ಶಿಕ್ಷಣದ ಮಹತ್ವವನ್ನರಿತು ಶೈಕ್ಷಣಿಕ ಪ್ರಗತಿಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತಿ ಡಾ.ಕುಪ್ಪಹಳ್ಳಿ ಬೈರಪ್ಪ ಮಾತನಾಡಿ, ದೇಶದಲ್ಲಿ ಅಷ್ಟೇ ಅಲ್ಲದೇ ವಿದೇಶದಲ್ಲೂ ಸಹ ವರ್ಷದ 365 ದಿನವು ನೆನಪು ಮಾಡಿಕೊಳ್ಳುವ ಮಹಾನ್ ಚೇತನ ಅಂಬೇಡ್ಕರ್. ಎಲ್ಲಿ ಭ್ರಷ್ಟಾಚಾರ, ಅಸಮಾನತೆ, ಅನ್ಯಾಯ ಇದೆಯೋ, ಅಲ್ಲಿ ಸಂವಿಧಾನ ಪ್ರಸ್ತುತವೆನಿಸುತ್ತದೆ. ಅಂಬೇಡ್ಕರ್ ಆಶಯಗಳನ್ನು ಬಲಪಡಿಸಲು ಇಂತಹ ಪುತ್ಥಳಿಗಳ ಅನಾವರಣ ಹೆಚ್ಚಾಗಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಕಡಿವಾಣ ಯಾವಾಗ?

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಹೊನ್ನೇನಹಳ್ಳಿ ಗ್ರಾಪಂ ಅಧ್ಯಕ್ಷೆ ನಾಗವೇಣಿ, ಉಪಾಧ್ಯಕ್ಷ ಮಂಜುನಾಥ್, ಪಿಡಿಒ ಹರೀಶ್ ಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಜಿಪಂ ಸಿಎ ಗಂಗಾಧರಯ್ಯ, ಮಾಜಿ ಗ್ರಾಪಂ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ನಾಗೇಂದ್ರ, ವೆಂಕಟೇಶಪ್ಪ, ಮುಖಂಡರಾದ ಬೆಳಗಾನಹಳ್ಳಿ ಮುನಿವೆಂಕಟಪ್ಪ, ಖಾದ್ರಿಪುರ ಬಾಬು, ಹೊನ್ನೇನಹಳ್ಳಿ ಗ್ರಾಪಂ ಸದಸ್ಯರಾದ ಶ್ರೀನಾಥ್, ಗಣೇಶ್, ಜಯರಾಮ್, ಯಲ್ಲಮ್ಮ, ರೇಣುಕಮ್ಮ, ಶಿಲ್ಪಾ, ಸೌಂದರ್ಯ, ಅರುಣಾ, ಗೋವಿಂದರಾಜು, ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...