ತುಮಕೂರು ವಿಶ್ವವಿದ್ಯಾನಿಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆ : ಡಾ. ಜಿ. ಪರಮೇಶ್ವರ್ ಭರವಸೆ

Date:

ತುಮಕೂರು ವಿಶ್ವ ವಿದ್ಯಾನಿಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಮಹಾ ನಗರ ಪಾಲಿಕೆ ಸಹಯೋಗದಲ್ಲಿ ನಗರದ ಬಾಲ ಭವನ ಸಭಾಂಗಣದಲ್ಲಿ ಗುರುವಾರ ನಡೆದ ಮಹಾರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಕ್ಕೆ ಚಾಲನೆನೀಡಿ ಮಾತನಾಡಿದ ಅವರು, ಮಹಾರ್ಷಿ ವಾಲ್ಮೀಕಿಯವರು ಸೂರ‍್ಯ-ಚಂದ್ರರಿರುವವರೆಗೆ ಮನುಕುಲದ ಜೊತೆ ಇರುತ್ತಾರೆ. ಸಾಮಾನ್ಯ ವ್ಯಕ್ತಿಯಾಗಿದ್ದ ರತ್ನಾಕರ ಪರಿವರರ್ತನೆ ಹೊಂದಿ ವಾಲ್ಮೀಕಿಯಾಗಿ 24000 ಶ್ಲೋಕಗಳುಳ್ಳ ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ನಮ್ಮೆಲ್ಲರಿಗೂ ಆದರ್ಶ ಪ್ರಾಯರಾಗಿದ್ದಾರೆ. ರಾಮಾಯಣ ಕೃತಿ ಮೂಲಕ ಮನುಷ್ಯ ಜೀವನವು ಸತ್ಯ ಮತ್ತು ಧರ್ಮದ ಆಧಾರದ ಮೇಲೆ ನಿಂತಿದೆ ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ ಮಹಾ ಋಷಿಯಾಗಿದ್ದಾರೆ. ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರಲ್ಲಿಯೂ ದುಷ್ಟ ಗುಣಗಳಿರುತ್ತವೆ. ನಮ್ಮಲ್ಲಿರುವ ದುಷ್ಟ ಗುಣಗಳನ್ನು ಸಂಹಾರ ಮಾಡಿ ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂಬುದೇ ಮಹಾ ಗ್ರಂಥ ರಾಮಾಯಣದ ಸಾರವೆಂದು ಅಭಿಪ್ರಾಯಪಟ್ಟರು.

1000554078

ಸುಮಾರು 5000 ವರ್ಷಗಳ ಹಿಂದೆ ಹುಟ್ಟಿದ ವರ್ಣಾಶ್ರಮ ಪದ್ಧತಿಯಿಂದ ಶ್ರಮಿಕ ವರ್ಗದವರನ್ನು ಕೆಳಸ್ತರದವರೆಂದು ಗುರುತಿಸಿರುವುದು ನಮ್ಮ ದುರ್ಭಾಗ್ಯ. ಶ್ರಮಿಕ ವರ್ಗದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಮ್ಮ ದೇಶದಲ್ಲಿ ಕೆಳಸ್ತರದವರನ್ನು ಮೇಲ್ಪಂಕ್ತಿಗೆ ತರಲು ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಸಮಾನತೆ ಹಕ್ಕನ್ನು ನೀಡಲಾಗಿದೆ. ಆದರೂ ಸಮಾಜದಲ್ಲಿ ಮೇಲು,ಕೀಳುಗಳವೆಂಬ ಬೇಧ-ಭಾವ, ದಲಿತರ ಶೋಷಣೆ ಇನ್ನೂ ನಿಂತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಾವುದೇ ವ್ಯಕ್ತಿಯ ವ್ಯಕ್ತಿತ್ವವನ್ನು ಜಾತಿಯಿಂದ ಗುರುತಿಸುವುದು ನಿಂತಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲರೂ ಸಮಾನತೆಯಿಂದ ಬದುಕಬೇಕೆಂಬ ದೃಷ್ಟಿಯಿಂದ ಮಹಾರ್ಷಿ ವಾಲ್ಮೀಕಿಯಂತಹ ಮಹನೀಯರ ಜಯಂತಿಯನ್ನು ಆಚರಿಸಲಾಗುತ್ತಿದೆ. ಸಮಾಜದಲ್ಲಿ ಮೇಲು-ಕೀಳು ಭಾವನೆಗಳನ್ನು ತೊರೆದು ಎಲ್ಲರೂ ಸಮಾನರೆಂಬ ಭಾವ ಮೂಡಿದಾಗ ಮಾತ್ರ ಇಂತಹ ಕರ‍್ಯಕ್ರಮಗಳ ಆಚರಣೆ ಅರ್ಥಪೂರ್ಣವಾಗುತ್ತದೆ ಎಂದು ತಿಳಿಸಿದರು. ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದ್ದು, ಜಾತಿ ಗಣತಿ ಆಧಾರದ ಮೇಲೆ ಶೇಕಡಾ 3ರಷ್ಟಿದ್ದ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸಲಾಗಿದೆ. ಉದ್ಯೋಗ ಮತ್ತು ಶಿಕ್ಷಣಕ್ಕೆ ಮಾತ್ರ ಈ ಮೀಸಲಾತಿ ಅನ್ವಯವಾಗಲಿದೆ.ರಾಜ್ಯ ಸರ್ಕಾರವು ತನ್ನ ಆಯವ್ಯಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ 11,447 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದರು.

1000554088

ಸ್ವಾವಲಂಬಿ ಬದುಕು ನಡೆಸಲು ಪರಿಶಿಷ್ಟ ಪಂಗಡದ ಸುಮಾರು 5000 ಯುವಕ/ಯುವತಿಯರಿಗೆ ವಿವಿಧ ತರಬೇತಿ ನೀಡಲಾಗಿದೆಯಲ್ಲದೆ 74367 ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹ ಧನ ನೀಡಲಾಗಿದೆ. ರಾಜ್ಯದಲ್ಲಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ 12 ಬುಡಕಟ್ಟು ಸಮುದಾಯದ 48000 ಕುಟುಂಬಗಳಿಗೆ ಪೌಷ್ಟಿಕ ಆಹಾರ ಒದಗಿಸಲು ಸುಮಾರು 140 ಕೋಟಿ ರೂ. ಹಣವನ್ನು ವೆಚ್ಚ ಮಾಡಲಾಗಿದೆ. ಪರಿಶಿಷ್ಟ ಪಂಗಡದ ವಿದ್ಯಿರ್ಥಿಗಳ ವಿದೇಶಿ ವ್ಯಾಸಂಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಬುದ್ಧ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳೀಸಿದರು

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಮಹಾರ್ಷಿ ವಾಲ್ಮೀಕಿಯವರು ರಾಮಾಯಣ ಎಂಬ ಮಹಾ ಗ್ರಂಥವನ್ನು ರಚಿಸುವ ಮೂಲಕ ಆದಿ ಕವಿ ಮತ್ತು ಮಹಾ ಋಷಿ ಎನಿಸಿಕೊಂಡಿದ್ದಾರೆ. ಅವರ ತತ್ವಾದರ್ಶ ಗಳನ್ನು ಪಾಲಿಸಿಸುವ ಮೂಲಕ ಧ್ವನಿ ಇಲ್ಲದವರಿಗೆ ದ ನಿಯಾಗಬೇಕು ಎಂದು ತಿಳಿಸಿದರು.

1000554084

ಶಾಸಕ ಜ್ಯೋತಿ ಗಣೇಶ್ ಮಾತನಾಡಿ, ಸಮಾಜದಲ್ಲಿನ ದ್ವೇಷ, ಅಸೂಯೆ, ಕರುಣೆ, ಪ್ರೀತಿಯ ಪಾತ್ರಗಳನ್ನು ರಾಮಾಯಣದಲ್ಲಿ ತೋರಿಸುವ ಮೂಲಕ ಜೀವನದ ಪ್ರತಿ ಹಂತವನ್ನು ಮಹಾರ್ಷಿ ವಾಲ್ಮೀಕಿಯವರು ವಿಸ್ತೃತವಾಗಿ ತಿಳಿಸಿದ್ದಾರೆ. ಇಂಥಹ ಆದರ್ಶಪ್ರಾಯ ವ್ಯಕ್ತಿಗಳನ್ನು ಕೇವಲ ಆಚರಣೆಗಳಿಗೆ ಸೀಮಿತಗೊಳಿಸದೆ ಅವರು ತಿಳಿಸಿದ ಜೀವನ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

1000554085

ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಮತ್ತು ಜಿಲ್ಲಾ ನಾಯಕ ಮಹಿಳಾ ಸಮಾಜದ ಅಧ್ಯಕ್ಷೆ ಶಾಂತಲಾ ರಾಜಣ್ಣ ಮಾತನಾಡಿ, ಮಹಾರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮನುಷ್ಯ ಜೀವನದ ಪರಿಕಲ್ಪನೆಯನ್ನು ತಿಳಿಸಿದ್ದು, ಜೀವನ ರೂಪಿಸಿಕೊಳ್ಳಲು ರಾಮಾಯಣ ಒಳ್ಳೆಯ ನಿದರ್ಶನವಾಗಿದೆ. ಹಿಂದುಳಿದ ಸಮುದಾಯಗಳ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು. ಅಧಿಕಾರಿಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ಸಮಾರಂಭದಲ್ಲಿ ದಲ್ಲಿ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎನ್.ಎಸ್.ಧನುಷ್, ವೈ.ಕಾವ್ಯ, ಕೆ.ಎಸ್. ಚರಣ್‌ರಾಜ್, ಸಾನ್ವಿ, ಬಿಂದು, ಡಿ.ಎ.ಪುನೀತ್, ಓ. ಭರ‍್ಗವಿ, ಸಿ.ಎಲ್. ಚೇತನ, ಭಾನುಪ್ರಕಾಶ್, ಪುಷ್ಪಲತಾ, ಎಂ.ಸೃಷ್ಟಿ, ದೀಪ್ತಿಶ್ರೀ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಹಲಗಲಿ ಬೇಡರ ದಂಗೆಯಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಅವರ ಸ್ಮರಣರ್ದ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಪಂಗಡದ ತುಮಕೂರು ಶೈಕ್ಷಣಿಕ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಮೇಲನಹಳ್ಳಿ ಮೂರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಹೆಚ್.ವಿ.ಸ್ಫೂರ್ತಿ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಿರಾ ತಾಲ್ಲೂಕು ಭುವನಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಡಿ.ಜೆ. ನವ್ಯಶ್ರೀ ಅವರಿಗೆ 1ಲಕ್ಷ ರೂ.ಗಳ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.

1000554087

ಅಂತರ್ ಜಾತಿ ವಿವಾಹವಾದ ತುಮಕೂರಿನ ಎಂ. ಪುಷ್ಪಲತಾ ಹಾಗೂ ಸಂಜಯ್ ದಂಪತಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೆಶಕ ಎಂ. ಕೃಷ್ಣಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು, ಪಾಲಿಕೆ ಮಾಜಿ ಮಹಾಪೌರ ಬಿ.ಜಿ. ಕೃಷ್ಣಪ್ಪ, ಚಂದ್ರಶೇಖರ ಗೌಡ, ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೆಚ್. ಜಿ. ಪುರುಷೋತ್ತಮ, ಜಿಲ್ಲಾ ನಾಯಕ ಸಮುದಾಯದ ಮುಖಂಡರಾದ ವಿಜಯ ಕುಮಾರ, ಕೆಂಪಹನುಮಯ್ಯ, ಕೃಷ್ಣಮೂರ್ತಿ, ಸಿ.ದಾಸಪ್ಪ, ಮಹದೇವಯ್ಯ, ಶ್ರೀರಾಮಚಂದ್ರ ನಾಯಕ, ಡಿಸಿಸಿ ಬ್ಯಾಂಕಿನ ನಿರ್ದೇಶಕ ಲಕ್ಷ್ಮೀ ನಾರಾಯಣ, ಸೇರಿದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸಮುದಾಯದ ಮುಖಂಡರು, ವಿವಿಧ ಸಂಘಟನೆ ಪದಾಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...