ಎತ್ತಿನಹೊಳೆ ಯೋಜನೆ: ಭೂಮಿ ಕಳೆದುಕೊಂಡ ರೈತರ ಪರಿಹಾರಕ್ಕೆ ಆಗ್ರಹಿಸಿ ಕೆಪಿಆರ್‌ಎಸ್ ಪ್ರತಿಭಟನೆ

Date:

ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿ ಮತ್ತು ಅರಣ್ಯ ಇಲಾಖೆಯ ಕಿರುಕುಳ ತಡೆಗಟ್ಟಲು ಒತ್ತಾಯಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಶುಕ್ರವಾರ ‌ಪ್ರತಿಭಟನೆ ನಡೆಸಿತು.

Screenshot 2025 02 21 19 30 00 42 7352322957d4404136654ef4adb64504

“ಬಯಲು ಸೀಮೆಗೆ ಕುಡಿಯುವ ನೀರು ಪೂರೈಸುವ ಎತ್ತಿನಹೊಳೆ ಯೋಜನೆ ಕಾಮಗಾರಿ ಹಲವು ವರ್ಷಗಳಿಂದ ನಡೆಯುತ್ತಿದೆ. ಈ ಯೋಜನೆಯ ದಿಸೆಯಿಂದ ಜಿಲ್ಲೆಯ ಸಾವಿರಾರು ಜನ ರೈತರು ತಮ್ಮ ಭೂಮಿಯನ್ನು ಕಳೆದುಕೊಂಡಿದ್ದಾರೆ. ಬೇಲೂರು ತಾಲೂಕಿನ ಶಿವಪುರ ಕಾವಲು, ಹಾಸನ ತಾಲೂಕಿನ ಉದಳ್ಳ ಕಾವಲು, ಅರಸೀಕರೆ ತಾಲೂಕಿನ ನಾಯಕನಕೆರೆ ಕಾವಲಿನ ಸುತ್ತಮುತ್ತಲಿನ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು 2022ರಲ್ಲೇ ಆವಾಡ್ ನೋಟಿಸ್ ನೀಡಿದ್ದರೂ ಇದುವರೆಗೂ ಇವರುಗಳಿಗೆ ಸೂಕ್ತ ಪರಿಹಾರವನ್ನು ನೀಡಿಲ್ಲ” ಎಂದು ಸಂಘದ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

Screenshot 2025 02 21 19 30 14 27 7352322957d4404136654ef4adb64504

ಹಲವು ವರ್ಷಗಳಿಂದ ಸಾಗುವಳಿ ಮಾಡಿ ಮಂಜೂರಾತಿ ಚೀಟಿ ಪಡೆದು, ಪಹಣಿಯಲ್ಲಿ ಹೆಸರು ಬರುತ್ತಿದ್ದ ಭೂಮಿಗೆ ವಿಶೇಷ ಭೂಸ್ವಾಧೀನಾಧಿಕಾರಿಯವರ ಕಾರ್ಯಾಲಯ ಆವಾಡ್ ನೋಟಿಸ್ ನೀಡಿದ ಮೇಲೆ, ಅರಣ್ಯ ಇಲಾಖೆಯವರು ಬೇಲೂರು ತಾಲೂಕಿನ ಶಿವಪುರ ಕಾವಲು ಗ್ರಾಮಗಳ ಸುತ್ತಮುತ್ತಲಿನ ಸುಮಾರು 30ಕ್ಕೂ ಹೆಚ್ಚು ಜನರಿಗೆ ಭೂ ಪರಿಹಾರ ನೀಡುವುದನ್ನು ತಡೆಹಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2025 02 21 19 30 58 21 7352322957d4404136654ef4adb64504

ಶಿವಪುರ ಕಾವಲಿನ ಸರ್ವೆ ನಂಬರ್ 80/2 ರಲ್ಲಿ 1.32 ಎಕರೆ ಭೂಮಿಯನ್ನು ಎತ್ತಿನಹೊಳೆ ಯೋಜನೆಗೆ ಕಳೆದುಕೊಂಡು ಇದುವರೆಗೂ ಪರಿಹಾರ ಸಿಗದ ಕಾರಣ ಬೇಸತ್ತು ವಡ್ಡರಹಳ್ಳಿ ಗ್ರಾಮದ ನಿವಾಸಿ 55 ವರ್ಷದ ರಂಗಸ್ವಾಮಿ ಬಿನ್ ಮೂಡಯ್ಯ ಎಂಬುವವರು 11 ಡಿಸೆಂಬರ್ 2024ರಂದು ಇದೇ ಎತ್ತಿನ ಹೊಳೆ ಕಾಲುವೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಭೂಮಿ ಕಳೆದುಕೊಂಡು 5 ವರ್ಷಗಳಾದರೂ ಇದುವರೆಗೂ ಭೂ ಪರಿಹಾರ ಸಿಗದ ಕಾರಣ ರೈತರು ಅತ್ಯಂತ ಸಂಕಷ್ಟದಲ್ಲಿದ್ದಾರೆ ಎಂದು ರೈತ ಮುಖಂಡ ತಿಳಿಸಿದರು.

ಹಕ್ಕೊತ್ತಾಯಗಳು:

1. ಎತ್ತಿನಹೊಳೆ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ  ಪರಿಹಾರ ನೀಡಬೇಕು.

2. 06.12.2022 ರಂದು ಪರಿಹಾರದ ಆವಾರ್ಡ್ ನೋಟಿಸ್ ನೀಡಿದ್ದು, ಪರಿಹಾರದ ಹಣ ಬಡ್ಡಿ ಸಮೇತ ಮರು ಪಾವತಿಯಗಬೇಕು. 

3. ರೈತರ ಪರಿಹಾರಕ್ಕೆ ಅರಣ್ಯ ಇಲಾಖೆ ತಂದಿರುವ ತಡೆಯಾಜ್ಞೆಯನ್ನು ರದ್ದುಪಡಿಸಬೇಕು.

4. ಭೂಸ್ವಾಧೀನ ಮಾಡಿಕೊಳ್ಳದೇ ಕಳೆದ 4 ವರ್ಷಗಳಿಂದ ಉಳಿಕೆ ಕೃಷಿ ಭೂಮಿಯ ಮೇಲೆ ಕಾಲುವೆಯ ಮಣ್ಣು ಮತ್ತು ಕಲ್ಲಿನ ರಾಶಿ ಹಾಕಿ ವ್ಯವಸಾಯಕ್ಕೆ ಅಡ್ಡಿ ಪಡಿಸಲಾಗಿದೆ. ಇದಕ್ಕೆ ಸೂಕ್ತ ರೀತಿಯ ಬೆಳೆ ಪರಿಹಾರ ನೀಡಬೇಕು. ಮತ್ತು ಮಣ್ಣಿನ ಗುಡ್ಡೆಯನ್ನು ತೆರವುಗೊಳಿಸಬೇಕು.

ಇದನ್ನೂ ಓದಿದ್ದೀರಾ?ಹಾಸನ ವಿಶ್ವವಿದ್ಯಾಲಯದ ಉಳಿವಿಗೆ ಎಸ್‌ಎಫ್‌ಐ, ಡಿವೈಎಫ್‌ಐ ಹೋರಾಟ

ಹೋರಾಟದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಆರ್. ನವೀನ್ ಕುಮಾರ್, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ.ಪೃಥ್ವಿ, ವಿವೇಕ ಬಂಟೇನಹಳ್ಳಿ‌ ಗ್ರಾಮದ ವಿರುಪಾಕ್ಷ, ಜಯಣ್ಣ, ಮುತ್ತಣ್ಣ, ಶಿವೇಗೌಡ, ಗಂಗಾಧರ, ಶಿವಪುರ ಕಾವಲಿನ ಸಿದ್ದರಾಜು, ಗಂಗಾಧರ, ಉದಯ್ ಕುಮಾರ್, ಗೋವಿಂದರಾಜು, ರಂಗಸ್ವಾಮಿ, ಪುಟ್ಟರಾಜು, ರಾಜಾನಾಯಕ್ ಇನ್ನಿತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...