ಬೀದರ್‌ | ಎರಡು ವರ್ಷ ಗತಿಸಿದರೂ ಬದಲಾಗದ ʼಬಸ್‌ ನಿಲ್ದಾಣʼ ನಾಮಫಲಕ

Date:

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಾಗಿದ್ದ ಹೆಸರನ್ನು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಾಗಿ ಬದಲಾಗಿ ಎರಡು ವರ್ಷ ಕಳೆದರೂ ಬಸ್‌ ನಿಲ್ದಾಣಗಳಲ್ಲಿ ಮಾತ್ರ ಇನ್ನೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರು ರಾರಾಜಿಸುತ್ತಿದೆ.

ಬೀದರ್‌ ನಗರದ ಕೇಂದ್ರ ಬಸ್‌ ನಿಲ್ದಾಣದ ಎರಡೂ ಕಡೆಯ ಪ್ರವೇಶ ದ್ವಾರಗಳ ಮೇಲೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಲೋಗೊ ಹಾಗೂ ನಾಮಫಲಕ ಇನ್ನೂ ರಾರಾಜಿಸುತ್ತಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಎಂದು ಮರುನಾಮಕರಣವಾಗಿ ಎರಡು ವರ್ಷ ಕಳೆದರೂ, ಬಸ್ ನಿಲ್ದಾಣದ ದ್ವಾರ ಸೇರಿದಂತೆ ನಿಲ್ದಾಣದ ಆವರಣದ ಅಲ್ಲಲ್ಲಿ ಈ.ಕ.ರ.ಸಾ.ಸಂಸ್ಥೆಯ ನಾಮಫಲಕ ಬದಲಾಗದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಬೋರ್ಡ್‌ ಬಸ್
ಬಸ್‌ ನಿಲ್ದಾಣದಲ್ಲಿ ಈಶಾನ್ಯ ಕರ್ನಾಟಕ ಹೆಸರಿನ ಹಳೆ ನಾಮಫಲಕ

ಹೈದರಾಬಾದ್‌-ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾದ ಬಳಿಕ ಸಾರಿಗೆ ಸಂಸ್ಥೆಯ ಹೆಸರೂ ಬದಲಾಯಿಸಬೇಕೆಂಬ ಈ ಭಾಗದ ಬೇಡಿಕೆಗೆ ಸ್ಫಂದಿಸಿದ ಕಳೆದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ, 2021ರ ಜುಲೈ 6ರಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೆಸರನ್ನು ʼಕಲ್ಯಾಣ ಕರ್ನಾಟಕ ಸಾರಿಗೆ ನಿಗಮ’ ಎಂದು ಸಂಸ್ಥೆಯಾಗಿ ಮರುನಾಮಕರಣ ಮಾಡಿ ಆದೇಶಿಸಲಾಗಿದೆ. ಇನ್ಮುಂದೆ ‘ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಕೆಕೆಆರ್‌ಟಿಸಿ)’ ಎಂದು ಜಾರಿಗೆ ಬರಲಿದೆ ಎಂದು ತಿಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರು ಕಲ್ಯಾಣ ಕರ್ನಾಟಕ ರಸ್ತೆ ಸಂಸ್ಥೆ (ಕೆಕೆಆರ್‌ಟಿಸಿ) ಎಂದು ಬದಲಾಗಿ ಎರಡು ವರ್ಷಗಳೇ ಕಳೆದಿವೆ. ಆದರೂ ಬೀದರ್ ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಈಶಾನ್ಯ ಕರ್ನಾಟಕ ಎಂದು ಈ ಹಿಂದೆ ಬರೆಯಲಾದ ನಾಮಫಲಕ ಹಾಗೇ ಇದೆ. ಕೂಡಲೇ ಸಂಸ್ಥೆಯ ಅಧಿಕಾರಿಗಳು ಈಶಾನ್ಯ ಕರ್ನಾಟಕ ಹೆಸರಿನ ನಾಮಫಲಕ ತೆರವುಗೊಳಿಸಿ ಕಲ್ಯಾಣ ಕರ್ನಾಟಕ ಎಂದು ಬದಲಾಯಿಸಬೇಕು. ಇಲ್ಲವಾದಲ್ಲಿ ಬಸ್‌ ನಿಲ್ದಾಣ ಎದುರು ಪ್ರತಿಭಟನೆ ನಡೆಸಲಾಗುವುದು” ಎಂದು ಕರ್ನಾಟಕ ಯುವ ರಕ್ಷಣೆ ವೇದಿಕೆ ಯುವ ಘಟಕ ಜಿಲ್ಲಾಧ್ಯಕ್ಷ ಗುರುದಾಸ ಅಮದಲಪಾಡ ಈದಿನ.ಕಾಮ್‌ ಜೊತೆಗೆ ಮಾತನಾಡುತ್ತಾ, ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೆಣ್ಣು ಮಕ್ಕಳ ಸುರಕ್ಷತೆಗೆ ಗ್ಯಾರಂಟಿ ಇಲ್ಲದಾಗ, ನಿಮ್ಮ ಗ್ಯಾರಂಟಿಗಳು ಇನ್ನೆಷ್ಟು ಯೋಗ್ಯ: ಬಿಜೆಪಿ ಪ್ರಶ್ನೆ

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...