ಬೀದರ್‌ | ಸಚಿನ್‌ ಪಾಂಚಾಳ್ ಸಾವಿನಲ್ಲೂ ಬಿಜೆಪಿ ರಾಜಕೀಯ : ಅರವಿಂದಕಮಾರ್‌ ಅರಳಿ

Date:

ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರ ಸಾವಿನಲ್ಲೂ ಬಿಜೆಪಿಯವರು ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಟೀಕಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿಯವರು ನಿರುದ್ಯೋಗಿಗಳಾಗಿದ್ದಾರೆ. ಅವರಿಗೆ ಕೆಲಸವಿಲ್ಲ. ಸಚಿನ್‌ ಪಾಂಚಾಳ್ ಸಾವಿನ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವವರಿಗೆ ಮಾನ, ಮರ್ಯಾದೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ʼಸಚಿವ ಪ್ರಿಯಾಂಕ್ ಖರ್ಗೆಯವರು ಬಿಜೆಪಿಯವರ ಮನೆಯ ದೇವರು ಇದ್ದ ಹಾಗೆ. ಅವರನ್ನು ನೆನೆಯದಿದ್ದರೆ ಅವರಿಗೆ ಬದುಕಲು ಆಗಲ್ಲ ಮತ್ತು ಅನ್ನ ಜೀರ್ಣವಾಗಲ್ಲ. ಇವರಿಗೆ ಕನಸು ಮನಸಿನಲ್ಲೂ ಪ್ರಿಯಾಂಕ್ ಖರ್ಗೆಯವರೇ ಕಾಣುತ್ತಾರೆ. ಏಕೆಂದರೆ ರಾಷ್ಟ್ರೀಯ ಮಟ್ಟದಲ್ಲಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಬಿಜೆಪಿ ಮುಖಂಡರ ನಿದ್ದೆ ಗೆಡಿಸುವ ಕೆಲಸ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಯವರ ಬಣ್ಣ ಬಯಲು ಮಾಡುತ್ತಿದ್ದಾರೆ. ಹೀಗಾಗಿಯೇ ಬಿಜೆಪಿಯವರು ಖರ್ಗೆಯವರ ಹೆಸರು ಜಪಿಸುತ್ತಿದ್ದಾರೆʼ ಎಂದು ಅರಳಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಖರ್ಗೆಯವರು ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಗುತ್ತಿಗೆದಾರ ಸಂತೋಷ ಪಾಟೀಲ ಅವರು ಆತ್ಮಹತ್ಯೆ ಮಾಡಿಕೊಂಡಾಗ ಅವರು ಬರೆದಿದ್ದ ಡೆತನೋಟ್‌ನಲ್ಲಿ ಕೆ.ಎಸ್.ಈಶ್ವರಪ್ಪನವರ ಹೆಸರು ಉಲ್ಲೇಖಿಸಿದ್ದರು. ಅವರೇ ನಂಬರ್‌ ಒನ್ ಆರೋಪಿಯಾಗಿದ್ದರು. ಆದರೆ, ಈ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅವರ ಹೆಸರಿಲ್ಲ. ವಿನಾಕಾರಣ ಅವರ ಹೆಸರು ತಂದು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆʼ ಎಂದಿದ್ದಾರೆ.

ರಾಜು ಕಪನೂರ ಅವರು ಪ್ರಿಯಾಂಕ್ ಖರ್ಗೆ ಅವರ ಫಾಲೋವರ್ ಇದ್ದಾರೆ. ಆದರೆ, ಅಷ್ಟಕ್ಕೆ ರಾಜೀನಾಮೆ ಕೊಡಬೇಕಾ?. ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಹೆಸರು ಇದೆ. ಅವರ ಸ್ವಂತ ಮಗ ವಿಜಯೇಂದ್ರ ರಾಜೀನಾಮೆ ಕೊಟ್ಟಿದ್ದಾರೆಯೇ? ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಸಹೋದರ ಟಿಕೆಟ್ ಕೊಡಿಸುತ್ತೇನೆಂದು ಮೋಸದ ಪ್ರಕರಣದಲ್ಲಿ ಜೋಶಿಯವರು ರಾಜೀನಾಮೆ ಕೊಟ್ಟಿದ್ದಾರೆಯೇ? ಅಮೆರಿಕದಲ್ಲಿ ಗೌತಮ್ ಅದಾನಿ ವಿರುದ್ಧ ಪ್ರಕರಣ ದಾಖಲಾದಾಗ ಅವರ ಆಪ್ತ ಪ್ರಧಾನಿ ನರೇಂದ್ರ ಮೋದಿಯವರು ರಾಜೀನಾಮೆ ಕೊಟ್ಟರೆ ಎಂದು‌ ಪ್ರಶ್ನಿಸಿದರು.

ಗುತ್ತಿಗೆದಾರ ಸಚಿನ್ ಪಾಂಚಾಳ್ ಅತ್ಮಹತ್ಯೆ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆ ಅವರಿಗೂ ಸಂಬಂಧವಿಲ್ಲ. ಎಫ್‌ಐಆರ್‌ನಲ್ಲಿ ಅವರ ಹೆಸರಿಲ್ಲ. ಅದರೂ, ಅವರ ವಿರುದ್ಧ ಬಿಜೆಪಿಯವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ರಾಜ್ಯದ ಅನೇಕ ಕಡೆಗಳಲ್ಲಿ ಆತ್ಮಹತ್ಯೆ ಪ್ರಕರಣಗಳಲ್ಲೇ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್‌ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ, ಸುಪಾರಿ ನೀಡಿದ್ದಾರೆ ಎಂದು ಹೇಳುವ ಮೂಲಕ ಪೊಲೀಸ್‌ ಇಲಾಖೆಗೆ ಅಪಮಾನ ಮಾಡಿದ ಬಿಜೆಪಿರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್.ರವಿಕುಮಾರ್‌ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಸತ್ಯ ಬಹಿರಂಗಪಡಿಸಿ, ಮೃತ ಸಚಿನ್‌ ಕುಟುಂಬಕ್ಕೆ ನ್ಯಾಯ ಒದಗಿಸಬೇಕುʼ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಗುತ್ತಿಗೆದಾರರ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳುವುದೇ ರಾಜ್ಯ ಸರ್ಕಾರ?

ಸ್ವತಃ ಪ್ರಿಯಾಂಕ್ ಅವರೇ ತನಿಖೆಗೆ ಆಗ್ರಹಿಸಿದ್ದಾರೆ. ಹೀಗಿರುವಾಗಲೂ ರಾಜಕೀಯ ಮಾಡುತ್ತಿರುವುದು ಸಲ್ಲದು. ಇನ್ನು, ಮಲ್ಲಿಕಾರ್ಜುನ ಖರ್ಗೆ ಅವರಿಂದಲೇ ಹಲವು ರಾಜಕೀಯ ಹುದ್ದೆಗಳನ್ನು ಅನುಭವಿಸಿದ ಛಲವಾದಿ ನಾರಾಯಣಸ್ವಾಮಿ ಅವರು ಇಲ್ಲ-ಸಲ್ಲದ ಮಾತುಗಳನ್ನಾಡುತ್ತಿದ್ದಾರೆ. ಅವರು ಸುಮ್ಮನಿರಬೇಕು. ಇಲ್ಲವಾದಲ್ಲಿ ಅವರ ಬಣ್ಣ ಬಯಲು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...