ಯಾವೆಲ್ಲ ವಿಚಾರ ಪಠ್ಯದಲ್ಲಿ ತಿರುಚಿದ್ದಾರೋ ಅದನ್ನೆಲ್ಲ ಕಿತ್ತು ಎಸೆಯಬೇಕು: ದೇವನೂರ ಮಹಾದೇವ

Date:

  • ಹಿಜಾಬ್‌ ವಿಚಾರದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಕಸಿಯಬಾರದು
  • ಸರ್ವಜನಾಂಗದ ಶಾಂತಿಯ ತೋಟ ಎಂಬಂತೆ ಪಠ್ಯ ಇರಲಿ

ಬಿಜೆಪಿ ಅವಧಿಯಲ್ಲಿ ನಡೆಸಲಾದ ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ಯಾವೆಲ್ಲ ವಿಚಾರಗಳನ್ನು ಪಠ್ಯದಲ್ಲಿ ತಿರುಚಿದ್ದಾರೆ, ಅದನ್ನೆಲ್ಲ ಕಿತ್ತು ಎಸೆಯಬೇಕು ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಇಡೀ ಪಠ್ಯ ಪುಸ್ತಕ ಪರಿಷ್ಕರಣೆಯ ಯಡವಟ್ಟುಗಳನ್ನು ಸರಿಪಡಿಸಬೇಕು. ಆರ್‌ಎಸ್‌ಎಸ್‌ ಸಂಸ್ಥಾಪಕ ಕೇಶವ ಬಲಿರಾಂ ಹೆಡ್ಗೆವಾರ್‌ ಕುರಿತ ಪಠ್ಯ ಕೈಬಿಡಬೇಕು” ಎಂದು ಒತ್ತಾಯಿಸಿದ್ದಾರೆ.

“ಈಗ ಮಕ್ಕಳಿಗೆ ಪಾಠ ನಡೆಯಲಿ. ಆರು ತಿಂಗಳು ಆದ್ರೂ ಪರವಾಗಿಲ್ಲ ಹೊಸ ಪಠ್ಯ ರಚನೆಯಾಗಬೇಕು. ಈ ಬಗ್ಗೆ ಶಿಕ್ಷಣ ತಜ್ಞರ ಜೊತೆ ಸಮಾಲೋಚಿಸಿ ಹೆಜ್ಜೆ ಇಡಬೇಕು. ಹಿಂದಿನ ಸರ್ಕಾರ ತಮಗೆ ಹೇಗೆ ಬೇಕು ಹಾಗೇ ಪಠ್ಯ ಪರಿಷ್ಕರಣೆ ಮಾಡಿದೆ” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ವಜನಾಂಗದ ಶಾಂತಿಯ ತೋಟ ಎಂಬಂತೆ ಪಠ್ಯ ಇರಲಿ. ವಿಜ್ಞಾನದ ಪಠ್ಯವೂ ಹಾಗೇ ಇರಲಿ. ಒಂದು ವರ್ಷದಲ್ಲಿ ಹಿಂದಿನ ಸರ್ಕಾರ ಪಠ್ಯದೊಳಗೆ ತುಂಬಿರುವ ವಿಷ ಹೊರತಗೆಯಬೇಕು” ಎಂದು ಹೇಳಿದ್ದಾರೆ.

ಹಿಜಾಬ್‌ ವಿಚಾರಕ್ಕೆ ಪ್ರತಿಕ್ರಿಯಿಸಿ, “ಅದು ಅವರ ಹಕ್ಕು. ನಾನೇ ಬೆಂಬಲ ನೀಡಿದ್ದೆ. ಆ ಮಹಿಳೆಯ ಹಕ್ಕನ್ನು ನಾವು ಯಾರು ಕಿತ್ತುಕೊಳ್ಳಲು? ಹಿಜಾಬ್‌ ವಿಚಾರದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಕಸಿದುಕೊಳ್ಳಬಾರದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...