ಉಡುಪಿ | ಸಾಸ್ತಾನ ಟೋಲ್‌ನಲ್ಲಿ ವೀರ ಸೈನಿಕನಿಗೆ ಅವಮಾನ ! ವೀಡಿಯೋ ವೈರಲ್

Date:

ಗಣರಾಜ್ಯೋತ್ಸವದ ಪವಿತ್ರ ದಿನವೇ ಯುದ್ಧದಲ್ಲಿ ಗಾಯಗೊಂಡ ನಿವೃತ್ತ ಸೈನಿಕನಿಗೆ ಟೋಲ್ ವಿನಾಯಿತಿ ನಿರಾಕರಿಸಿದ ಘಟನೆ ಸಾಸ್ತಾನದ ಟೋಲ್ ಪ್ಲಾಜಾದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸಾಸ್ತಾನ ಟೋಲ್ ಮೂಲಕ ಪ್ರಯಾಣಿಸುತ್ತಿದ್ದ ನಿವೃತ್ತ ಸೈನಿಕ ಶ್ಯಾಮರಾಜ್ ಅವರಿಗೆ ಅಧಿಕೃತ ಟೋಲ್ ವಿನಾಯಿತಿ ಪತ್ರವಿದ್ದರೂ ಟೋಲ್ ಸಿಬ್ಬಂದಿ ವಿನಾಯಿತಿ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ದೇಶದ ಅನೇಕ ಟೋಲ್ ಪ್ಲಾಜಾಗಳಲ್ಲಿ ಈ ವಿನಾಯಿತಿ ನೀಡಲಾಗುತ್ತಿದ್ದರೂ, ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಮಾತ್ರ ಸಮಸ್ಯೆ ಎದುರಾಯಿತು ಎಂದು ಶ್ಯಾಮರಾಜ್ ದೂರಿದ್ದಾರೆ.

ಶ್ಯಾಮರಾಜ್ ಅವರು 21ನೇ ಪ್ಯಾರಾ ಸ್ಪೆಷಲ್ ಫೋರ್ಸ್‌ನ ಪ್ಯಾರಾಟೂಪರ್ ಆಗಿದ್ದು, ಕಾಸರಗೋಡು ಜಿಲ್ಲೆಯವರು. ಅವರ ಪತ್ನಿ ಮಿಲಿಟರಿ ನರ್ಸಿಂಗ್ ವಿಭಾಗದಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದು, ಪೋಸ್ಟಿಂಗ್ ಸಂಬಂಧಿತ ಪ್ರಯಾಣದ ವೇಳೆ ಆರ್‌ಎಂಎ (RMA) ನೀಡಿದ ಟೋಲ್ ವಿನಾಯಿತಿ ಪತ್ರವನ್ನು ತೋರಿಸಿದರೂ ಸಿಬ್ಬಂದಿ ನಿರಾಕರಿಸಿದ್ದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಪರೇಶನ್ ಪರಾಕ್ರಮ್ ವೇಳೆ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಗಿಸಿ ವಾಪಸ್ಸು ಬರುತ್ತಿದ್ದ ಸಂದರ್ಭದಲ್ಲಿ ಶ್ಯಾಮರಾಜ್ ಅವರ ವಾಹನ ಲ್ಯಾಂಡ್‌ಮೈನ್ ಸ್ಫೋಟಕ್ಕೆ ಒಳಗಾಗಿದ್ದು, ಈ ದುರ್ಘಟನೆಯಲ್ಲಿ 15 ಸೈನಿಕರು ಹುತಾತ್ಮರಾಗಿದ್ದರು. ಬದುಕುಳಿದ ಇಬ್ಬರಲ್ಲಿ ಶ್ಯಾಮರಾಜ್ ಒಬ್ಬರಾಗಿದ್ದು, ಗಂಭೀರ ಗಾಯಗಳಿಂದಾಗಿ ಅವರು ಸಂಪೂರ್ಣ ವಿಕಲಾಂಗರಾಗಿದ್ದಾರೆ.

ಘಟನೆ ಕುರಿತ ವಿಡಿಯೋ ವೈರಲ್ ಆದ ಬಳಿಕ ಟೋಲ್ ಸಿಬ್ಬಂದಿ ತಮ್ಮ ತಪ್ಪನ್ನು ಅರಿತು ಕ್ಷಮೆ ಯಾಚಿಸಿದ್ದಾರೆ ಎನ್ನಲಾಗಿದೆ. ಆದರೂ ಗಣರಾಜ್ಯೋತ್ಸವದ ದಿನವೇ ವೀರ ಸೈನಿಕನಿಗೆ ನಡೆದ ಈ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಅಸಮಾಧಾನ ವ್ಯಕ್ತವಾಗುತ್ತಿದ್ದು, ಟೋಲ್ ವ್ಯವಸ್ಥೆಯ ಮೇಲ್ವಿಚಾರಣೆಗೆ ಆಗ್ರಹ ಕೇಳಿಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...