ಚಿಕ್ಕಮಗಳೂರು | ಬಿಜೆಪಿಯಿಂದ ನನ್ನ ಹೊರ ಹಾಕಿದ ಸಿ.ಟಿ ರವಿಯೇ ಕ್ಷೇತ್ರ ಖಾಲಿ ಮಾಡ್ಬೇಕಾಯ್ತು: ಎಂಪಿಕೆ

Date:

  • ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲುವು
  • ಚಿಕ್ಕಮಗಳೂರು ಇನ್ನು ಮುಂದೆ ವೀರಶೈವ ಲಿಂಗಾಯುತರ ಕ್ಷೇತ್ರ

ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೋಲು ಅನುಭವಿಸಿದ್ದಾರೆ. ಈ ಸೋಲನ್ನು ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಪರೋಕ್ಷವಾಗಿ ಸಂಭ್ರಮಿಸಿ ವ್ಯಂಗ್ಯವಾಡಿದ್ದಾರೆ.

“ಸಿ.ಟಿ ರವಿ ನನ್ನನ್ನು ಬಿಜೆಪಿಯಿಂದ ಹೊರಗೆ ಕಳಿಸಿದ್ರು. ಆದರೆ, ಅವರೇ ಕ್ಷೇತ್ರವನ್ನು ಖಾಲಿ ಮಾಡಬೇಕಾಯ್ತು. ಚಿಕ್ಕಮಗಳೂರು ಇನ್ಮುಂದೆ ವೀರಶೈವ ಲಿಂಗಾಯುತರ ಕ್ಷೇತ್ರ. ಸಿ.ಟಿ ರವಿ ದತ್ತಮಾಲೆ, ಅಹಿತಕರ ಘಟನೆ ಇಟ್ಕೊಂಡು ಹೋದ್ರು ಇನ್ಮುಂದೆ ಆಗಲ್ಲ. ನಿನ್ನೆಯಿಂದ ಅದು ವೀರಶೈವ ಲಿಂಗಾಯುತರ ಕ್ಷೇತ್ರ” ಎಂದು ಎಂ.ಪಿ ಕುಮಾರಸ್ವಾಮಿ ಹೇಳಿದ್ದಾರೆ.

“ಚಿಕ್ಕಮಗಳೂರಲ್ಲಿ ಒಕ್ಕಲಿಗರು ಇರೋದು ಆರೇ ಸಾವಿರ ಮತದಾರರು ಅಷ್ಟೆ. ಯಡಿಯೂರಪ್ಪ ಸ್ವಿಚ್ ಆಫ್ ಮಾಡಲಿಲ್ಲ. ಮಾಡಿದ್ರೆ ಬಿಜೆಪಿ 50 ಸೀಟ್ ಅಷ್ಟೆ ಬರ್ತಿತ್ತು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿ.ಟಿ ರವಿ ನನ್ನನ್ನು ಬಿಟ್ಟಿದ್ದಕ್ಕೆ ಐದು ಕ್ಷೇತ್ರ ಹೋಗುತ್ತೆ ಅಂತ ಸಾಮಾನ್ಯ ಜನ ಹೇಳ್ತಾರೆ. ಜೆಡಿಎಸ್‌ನಲ್ಲಿ ಬೂತ್ ಕಮಿಟಿ, ಪಕ್ಷ ಸಂಘಟನೆ ಇರಲಿಲ್ಲ. ಹಾಗಾಗಿ ಸೋತೆ. ಎಲ್ಲ ಸರಿ ಮಾಡಿಕೊಂಡು ಚುನಾವಣೆ ಮಾಡೋದು ಆಗ್ತಿರಲಿಲ್ಲ, ಕಷ್ಟವಾಗಿತ್ತು. ಮುಂದೆ ಎಲ್ಲ ಸರಿ ಮಾಡಿಕೊಂಡು ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮಾಡುತ್ತೇವೆ” ಎಂದ್ದಿದ್ದಾರೆ.

“ಮೂಡಿಗೆರೆಯಲ್ಲಿ ಬಿಜೆಪಿಗೆ ಜೀವ ತುಂಬಿದವನೇ ನಾನು” ಎಂದು ಎಂ.ಪಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಪ್ರಬುದ್ಧ ಮತದಾರರಿಂದ ದೇಶಕ್ಕೆ ಬಲವಾದ ಸಂದೇಶ : ದಸಂಸ

ಎಂ ಪಿ ಕುಮಾರಸ್ವಾಮಿ ಅವರು ಕಳೆದ ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಡಾನೆ ಸಮಸ್ಯೆ ಕಾರಣಕ್ಕೆ ಕ್ಷೇತ್ರದ ಜನರಿಂದ ತೀವ್ರ ವಿರೋಧ ಎದುರಿಸಿದ ಅವರಿಗೆ ಕೊನೆ ಕ್ಷಣದಲ್ಲಿ ಬಿಜೆಪಿ ಟಿಕೆಟ್‌ ನೀಡಲಿಲ್ಲ. ಬಳಿಕ ಬಿಜೆಪಿ ರಾಜೀನಾಮೆ ನೀಡಿ ಜೆಡಿಎಸ್‌ ಅಭ್ಯರ್ಥಿಯಾಗಿ ಮೂಡಿಗೆರೆ ಕ್ಷೇತ್ರದಿಂದ ಕಣಕ್ಕಿಳಿದರು. ಆದರೆ, ಮತದಾರರು ಅವರು ಕೈ ಹಿಡಿಯಲಿಲ್ಲ.

ಕಳೆದ ಚುನಾವಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಬಿಜೆಪಿ, ಒಂದು ಕ್ಷೇತ್ರದಲ್ಲಿ ಮಾತ್ರವೇ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿಯ ಚುನಾವಣೆಯಲ್ಲಿ ಐದಕ್ಕೆ ಐದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇದು ಸಿ ಟಿ ರವಿ ಅವರಿಗೆ ಭಾರಿ ಮುಖ ಭಂಗ ಉಂಟುಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...