ಉಡುಪಿಯಲ್ಲಿ ಅಬಕಾರಿ ಪೊಲೀಸರ ದಾಳಿ: ಅಕ್ರಮವಾಗಿ ದಾಸ್ತಾನಿರಿಸಿದ್ದ ಭಾರೀ ಮೌಲ್ಯದ ಮದ್ಯ ವಶಕ್ಕೆ

Date:

ಉಡುಪಿ ಜಿಲ್ಲೆಯ ಗ್ರಾಮವೊಂದಕ್ಕೆ ಗುರುವಾರ ದಾಳಿ ನಡೆಸಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು, ಅಕ್ರಮವಾಗಿ ದಾಸ್ತಾನಿರಿಸಿದ್ದ ಭಾರೀ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಬೋಳ ಗ್ರಾಮದ ಎರಡು ಮನೆಗಳಲ್ಲಿ ಗೋವಾ ರಾಜ್ಯದ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ 15 ಲಕ್ಷ ರೂ.ಮೌಲ್ಯದ ಮದ್ಯದ ಬಾಕ್ಸ್ ಗಳನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದೆ.

ಅಬಕಾರಿ ಉಪ ಆಯುಕ್ತ ಬಿಂದು ಅವರ ನೇತೃತ್ವದಲ್ಲಿ ಬೋಳದ ಅವಿನಾಶ್ ಮಲ್ಲಿ ಎಂಬವರ ಮನೆಗೆ ದಾಳಿ ನಡೆಸಿದ್ದು, ದುಬಾರಿ ಮೌಲ್ಯದ ಮದ್ಯದ ಬಾಟಲಿಗಳು ಬಾಕ್ಸ್‌ಗಳು ಕೂಡ ಪತ್ತೆಯಾಗಿದೆ. 200ಕ್ಕೂ ಅಧಿಕ ಬಾಕ್ಸ್‌ಗಳನ್ನು ವಶಕ್ಕೆ ಪಡೆದಿದ್ದು, ಇವು ನಕಲಿ ಮದ್ಯವೋ, ಅಸಲಿ ಮದ್ಯವೋ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 11 14 at 3.57.34 PM

ಗ್ರಾಮೀಣ ಭಾಗದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮದ್ಯ ದಾಸ್ತಾನು ಮಾಡಿರುವ ಬಗ್ಗೆ ಅಧಿಕಾರಿಗಳು ದಂಗಾಗಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪರಿಶೀಲನೆ ನಡೆಯುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಶೀಘ್ರ ವಿವರವಾದ ಮಾಹಿತಿ ನೀಡಲಾಗುವುದು ಎಂದು ಅಬಕಾರಿ ಡಿಸಿ ಬಿಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ಮುಖಂಡನಿಗೆ ಸೇರಿದ್ದು ಎಂದು ಬಿಜೆಪಿ ಟ್ವೀಟ್

ಈ ಬೆಳವಣಿಗೆಯ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ ಐಟಿ ಸೆಲ್, “ಉಡುಪಿಯ ಕಾಂಗ್ರೆಸ್ ಮುಖಂಡರೊಬ್ಬರ ಮನೆಯಲ್ಲಿ 70 ಲಕ್ಷ ಮೌಲ್ಯದ ವಿಸ್ಕಿ ಪತ್ತೆಯಾಗಿದೆ. ಇದು ಕೇವಲ ಒಬ್ಬ ಕಾಂಗ್ರೆಸ್ ನಾಯಕನಾಗಿದ್ದರೆ, ಇತರರು ಎಷ್ಟು ಮರೆಮಾಚುತ್ತಿದ್ದಾರೆ? ಅಬಕಾರಿ ಹಗರಣವು 700 ಕೋಟಿ ರೂ.ಗಳನ್ನು ಮೀರಿದೆ. ಮಹಾರಾಷ್ಟ್ರ ಚುನಾವಣೆಗೆ ಕರ್ನಾಟಕಕ್ಕೆ ಇನ್ನೂ ಎಷ್ಟು ಹಣ ಬೇಕು? ರಾಹುಲ್ ಗಾಂಧಿಯವರು ಈ ಬಗ್ಗೆ ಉತ್ತರಿಸಬೇಕು” ಎಂದು ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...