ವಂದೇ ಭಾರತ್ ರೈಲಿನಲ್ಲಿ 5 ಕಿ.ಮೀ ಪ್ರಯಾಣಕ್ಕೆ 410 ರೂ.

Date:

  • ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಗಂಟೆಗೆ ಸರಾಸರಿ 70.54 ಕಿಮೀ ವೇಗದಲ್ಲಿ ಚಲಿಸುತ್ತದೆ
  • ಸಧ್ಯ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಚರಿಸುವ ರಾಜ್ಯದ ವೇಗ ರೈಲು ಜನಶತಾಬ್ದಿ ಎಕ್ಸ್‌ಪ್ರೆಸ್‌

ಬೆಂಗಳೂರು-ಧಾರವಾಡ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ತನ್ನ ಸಂಚಾರವನ್ನು ಆರಂಭಿಸಿದೆ. ಪ್ರಧಾನಿ ಮೋದಿ ರೈಲಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಈ ರೈಲಿನ ಪ್ರಯಾಣ ಭಾರೀ ದುಬಾರಿ ಎಂಬುದು ಈಗಷ್ಟೇ ತಿಳಿದುಬಂದಿದೆ. ಈ ರೈಲಿನಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಯಶವಂತಪುರ ರೈಲು ನಿಲ್ದಾಣಕ್ಕೆ 5 ಕಿ.ಮೀ ಪ್ರಯಾಣ ಮಾಡಲು ಎಸಿ ಚೇರ್‌ಕಾರ್ ಸೀಟಿನ ಟಿಕೆಟ್ ದರ ಬರೋಬ್ಬರಿ ₹410 ಹಾಗೂ ಎಕ್ಸಿಕ್ಯುಟಿವ್ ಕ್ಲಾಸ್‌ನಲ್ಲಿ ₹545 ಇದೆ.

ಇನ್ನೂ ಬೆಂಗಳೂರಿನಿಂದ ದಾವಣಗೆರೆಗೆ ₹915 ದರವಿದ್ದರೆ, ಎಕ್ಸಿಕ್ಯುಟಿವ್ ಕ್ಲಾಸ್ ₹1,740 ಇದೆ. ಅದೇ ರೀತಿ ಹುಬ್ಬಳ್ಳಿ ಜಂಕ್ಷನ್‌ಗೆ ₹1,135 ಹಾಗೂ ಎಕ್ಸಿಕ್ಯೂಟಿವ್ ಕ್ಲಾಸ್ ಬೆಲೆ ₹2180 ಇದೆ.

ಬೆಂಗಳೂರು-ಹುಬ್ಬಳ್ಳಿ ವಂದೇ ಭಾರತ್ ಪ್ರಯಾಣದ ದರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಆಗಿದ್ದರೂ ಕೂಡ ಈ ರೈಲು ಗಂಟೆಗೆ ಸರಾಸರಿ 70.54 ಕಿಮೀ ವೇಗದಲ್ಲಿ ಮಾತ್ರವೇ ಚಲಿಸುತ್ತದೆ. ಬೆಂಗಳೂರು-ಹುಬ್ಬಳ್ಳಿ ನಡುವೆ 487.47 ಕಿಮೀ ಅಂತರ ಕ್ರಮಿಸಲು 7 ಗಂಟೆ ಸಮಯ ತೆಗೆದುಕೊಳ್ಳುತ್ತದೆ.

ಬೆಂಗಳೂರು-ಧಾರವಾಡ ನಡುವೆ ಸಂಚಾರ ನಡೆಸುವ ವಂದೇ ಭಾರತ್ ರೈಲಿನಲ್ಲಿ ಸಧ್ಯ 8 ಬೋಗಿಗಳಿದ್ದು, 530 ಆಸನಗಳಿವೆ. ಮೂರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ವಂದೇ ಭಾರತ್‌ಗಿಂತ ಜನಶತಾಬ್ದಿಯೇ ‘ಬೆಟರ್’

ಸಧ್ಯ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಚರಿಸುವ ರಾಜ್ಯದ ವೇಗ ರೈಲು ಜನಶತಾಬ್ದಿ ಎಕ್ಸ್‌ಪ್ರೆಸ್‌. ಈ ರೈಲಿನಲ್ಲಿ ಬೆಂಗಳೂರು-ಹುಬ್ಬಳ್ಳಿ ನಡುವಿನ ಪ್ರಯಾಣ ದರ ₹700 ಮಾತ್ರ. ಅಲ್ಲದೆ, ಈ ರೈಲು ಉಭಯ ನಗರಗಳನ್ನು 7 ಗಂಟೆ ಅವಧಿಯಲ್ಲಿ ತಲುಪುತ್ತದೆ. ಮಾತ್ರವಲ್ಲದೆ, ಈ ರೈಲು 10 ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಅಂದರೆ, ಜನಶತಾಬ್ದಿ ಎಕ್ಸ್‌ಪ್ರೆಸ್ ಹೆಚ್ಚು ನಿಲುಗಡೆಯ ಜೊತೆಗೆ, ವಂದೇ ಭಾರತ್ ರೈಲು ಕ್ರಮಿಸುವ ದೂರವನ್ನು ಅದೇ ಅವಧಿಯಲ್ಲಿ ಕ್ರಮಿಸುತ್ತದೆ. ಇದರ ಅರ್ಥ, ವಂದೇ ಭಾರತ್‌ಗಿಂತ ಜನಶತಾಬ್ದಿಯೇ ವೇಗವಾಗಿ ಚಲುಸುತ್ತದೆ. ಆದರೆ, ಚೇರ್ ಕಾರ್ ಸೀಟುಗಳಿರುವ ಏಕೈಕ ಕಾರಣಕ್ಕೆ ₹500 ರಿಂದ ₹1,500 ಅಧಿಕ ಮೊತ್ತವನ್ನು ವಂದೇ ಭಾರತ್ ರೈಲಿಗೆ ಪ್ರಯಾಣಿಕರು ಪಾವತಿಸಬೇಕಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರ್ತವ್ಯಲೋಪ ಆರೋಪದಡಿ ಅಶೋಕನಗರ ಇನ್ಸ್‌ಪೆಕ್ಟರ್ ಅಮಾನತು

ವಂದೇ ಭಾರತ್‌ಗೆ ಜಾಗ ಬಿಡಲು 48 ನಿಷಯ ಕಾಯುವ ಮತ್ತೊಂದು ರೈಲು

ವಂದೇ ಭಾರತ್ ರೈಲಿಗೆ ಆದ್ಯತೆ ನೀಡುವ ಸಲುವಾಗಿ ಹೊಸಪೇಟೆ-ಕೆಎಸ್ಆರ್ ಬೆಂಗಳೂರು ರೈಲು ಅರಸೀಕೆರೆಯಲ್ಲಿ 48 ನಿಮಿಷಗಳ ಕಾಲ ನಿಲ್ಲಲಿದೆ ಎಂಬುದು ರೈಲಿನ ಸಮಯ ಪಟ್ಟಿಯಲ್ಲಿ ಕಂಡುಬಂದಿದೆ. ವಂದೇ ಭಾರತ್ ರೈಲಿಗೆ ಕ್ರಾಸಿಂಗ್ ನೀಡಲು ಹೊಸಪೇಟೆ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬರೋಬ್ಬರಿ 48 ನಿಮಿಷ ಒಂದೇ ನಿಲ್ದಾಣದಲ್ಲಿ ನಿಲ್ಲಬೇಕಾದ ಅನಿವಾರ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...