ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆ ಅವಧಿ ವಿಸ್ತರಣೆ

Date:

  • ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೊಮ್ಮೆ ಅವಧಿ ವಿಸ್ತರಣೆ
  • ಸೆಪ್ಟೆಂಬರ್ 09 ರಿಂದ 14 ರೊಳಗೆ ರೇಷನ್‌ ಕಾರ್ಡ್‌ ತಿದ್ದುಪಡಿಗೆ ಅವಕಾಶ

ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಲಾಗಿದ್ದ ಅವಧಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೊಮ್ಮೆ ವಿಸ್ತರಿಸಿದ್ದು, ಸೆಪ್ಟೆಂಬರ್ 14ವರೆಗೂ ಅವಕಾಶ ಮಾಡಿಕೊಟ್ಟಿದೆ. ಈ ಮೂಲಕ ಯಜಮಾನರ ಸ್ಥಾನದಲ್ಲಿ ಮಹಿಳೆಯರು ಹೆಸರಿಲ್ಲದ ಕಾರಣ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕದ ಮಹಿಳೆಯರಿಗೆ ಮತ್ತೆ ಅವಕಾಶ ಸಿಕ್ಕಿದೆ.

ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವಿಟ್ ಮಾಡಿದ್ದು, “ಪಡಿತರ ಚೀಟಿಯಲ್ಲಿ ತಿದ್ದುಪಡಿ/ಸೇರ್ಪಡೆಗೆ ಅವಧಿಯನ್ನು ವಿಸ್ತರಿಸಲಾಗಿದ್ದು, ಗೃಹ ಲಕ್ಷ್ಮಿಯೋಜನೆಗೆ ನೋಂದಾಯಿಸಿಕೊಳ್ಳದವರು ಸೆಪ್ಟೆಂಬರ್ 09 ರಿಂದ 14 ರೊಳಗೆ ಯಜಮಾನಿಯ ಸ್ಥಾನದಲ್ಲಿ ತಿದ್ದುಪಡಿ ಮಾಡಿಕೊಂಡು, ಯೋಜನೆಗೆ ನೋಂದಾಯಿಸಿ ಸೌಲಭ್ಯ ಪಡೆಯಬಹುದಾಗಿದೆ’ ಎಂದು ಇಲಾಖೆ ತಿಳಿಸಿದೆ.

“ಗೃಹ ಲಕ್ಷ್ಮಿಯೋಜನೆಯಡಿ ಈಗಾಗಲೇ ನೋಂದಾಯಿಸಿ ರೇಷನ್ ಕಾರ್ಡ್ ನಲ್ಲಿ ಯಜಮಾನಿ ಹೆಸರು ಬದಲಾವಣೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಈ ಅರ್ಜಿ ಇತ್ಯರ್ಥಗೊಳ್ಳುವವರೆಗೂ ಗೃಹಲಕ್ಷ್ಮಿಯೋಜನೆಯ ಲಾಭ ತಡೆಹಿಡಿಯಲಾಗುತ್ತದೆ” ಎಂದು ಇಲಾಖೆ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರೇಷನ್ ಕಾರ್ಡ್ ತಿದ್ದುಪಡಿಗೆ ಸೆಪ್ಟೆಂಬರ್ 1 ರಿಂದ 10ವರೆಗೂ ಮಾತ್ರ ಕಾಲಾವಕಾಶ ನೀಡಲಾಗಿತ್ತು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...