ಬೀದರ್‌ | ಕಾಂಗ್ರೆಸ್ ಅಭ್ಯರ್ಥಿಯಿಂದ ಸುಳ್ಳು ಮಾಹಿತಿ : ಭಗವಂತ ಖೂಬಾ ಆಕ್ಷೇಪಣೆ ಸಲ್ಲಿಕೆ

Date:

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆಯವರು, ತನ್ನ ಚುನಾವಣೆ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಭಗವಂತ ಖೂಬಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಇನ್ನು ವಕೀವ ವೃತ್ತಿ ಪೂರ್ಣಗೊಳಿಸಿಲ್ಲ, ಆದರೆ ನಾನೊಬ್ಬ ವಕೀಲನಿದ್ದೇನೆ, ಸುಪ್ರೀಂ ಕೊರ್ಟ್ ಜಡ್ಜ್ ಕೆಳಗಡೆ ಕೆಲಸ ಮಾಡುತ್ತಿರುವೆ ಎಂದೆಲ್ಲಾ ಸುಳ್ಳು ಹೇಳಿಕೊಂಡಿದ್ದಾರೆ. ಹೀಗಾಗಿ ಸಾಗರ ಖಂಡ್ರೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

“ಸಾಗರ ಖಂಡ್ರೆ ಕೇವಲ ಎಲ್‌ಎಲ್‌ಬಿ ಪಾಸ್ ಮಾಡಿದ್ದಾರೆ, ಆದರೆ ವಕೀಲ ವೃತ್ತಿ ಪ್ರಾರಂಭಿಸಬೇಕೆಂದರೆ, ಅಖಿಲ ಭಾರತ ಬಾರ್ ಅಸೋಶಿಯೇಷನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ, ಸರ್ಟಿಫಿಕೇಟ್ ಆಫ್ ಪ್ರಾಕ್ಟೀಸ್ ಸರ್ಟಿಫಿಕೇಟ್ ಪಡೆದ ಮೇಲೆ ಇವರು ವಕೀಲರಾಗಬಹುದು. ಆದರೆ ಸಾಗರ್ ಖಂಡ್ರೆ ಇನ್ನು ಸದರಿ ಪರೀಕ್ಷೆ ಪಾಸಾಗಿರುವುದಿಲ್ಲ. ಹಾಗಾಗಿ ಇವರು ವಕೀಲರಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ತನ್ನ ಅಫೀಡಾವಿಟ್‌ನಲ್ಲಿ ಆದಾಯದ ಮೂಲ ವಕೀಲ ವೃತ್ತಿಯಿಂದ ಬಂದಿರುವುದು ಎಂದು ಹೇಳಿಕೊಂಡಿದ್ದಾರೆ, ಇದು ಸಂಪೂರ್ಣ ಸುಳ್ಳು ಹಾಗೂ ತಪ್ಪು ಮಾಹಿತಿ ನೀಡಿದ್ದಾರೆ” ಎಂದು ಪ್ರತಿಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಗರ್‌ ಖಂಡ್ರೆ ಕೇವಲ 26 ವರ್ಷದವರಾಗಿದ್ದು, ಇವರಿಗೆ ಮೂವರು 1.50 ಕೋಟಿ ರೂ. ಕೈ ಸಾಲ ನೀಡಿದ್ದಾರೆ. ಸದರಿ ಮಾಹಿತಿಯೂ ಶುದ್ಧ ಸುಳ್ಳಾಗಿದ್ದು, ರಾಜಕೀಯಕ್ಕೆ ಬರುವ ಮುನ್ನವೆ ಇಷ್ಟೊಂದು ಸುಳ್ಳು ಹೇಳುವ ಸಾಗರ್ ಖಂಡ್ರೆ, ಜನರಿಗೆ ದಾರಿ ತಪ್ಪಿಸುವುದರಲ್ಲಿ ತಂದೆಗಿಂತ ಒಂದು ಹೆಜ್ಜೆ ಮುಂದೆ ಇದ್ದಾರೆ. ಆದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅಪ್ಪ ಮಕ್ಕಳ ಜೊತೆ ಯಾವುದೇ ರೀತಿ ವ್ಯವಹಾರ ಮಾಡುವ ಮುನ್ನ ಹತ್ತಾರು ಬಾರಿ ಯೋಚಿಸಿ ಎಂದು ಜನತೆಯಲ್ಲಿ ಭಗವಂತ ಖೂಬಾ ಮನವಿ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲೆಯ ರೈತರಿಗೆ 1,200 ಕೋಟಿ ರೂ. ಬೆಳೆ ವಿಮೆ ಪರಿಹಾರ ನೀಡಲಾಗಿದೆ ಎಂದು ಖೂಬಾ ಹೇಳಿದ್ದು ಸುಳ್ಳು : ಖಂಡ್ರೆ

ಪರಿಪೂರ್ಣ ವಕೀಲ ಆಗದೆ ಇದ್ದರೂ, ನಾನೊಬ್ಬ ವಕೀಲ ಇದ್ದೇನೆ ಎಂದು ಸುಳ್ಳು ಹೇಳಿಕೊಂಡು ತಿರುಗಾಡುತ್ತಿರುವ ಸಾಗರ ಖಂಡ್ರೆ ಮೊದಲು ಕಾನೂನಿಗೆ ಗೌರವಿಸುವುದು ಕಲಿಯಲಿ, ಸರಿಯಾದ ಮಾಹಿತಿ
ನೀಡುವುದು ಕಲಿತುಕೊಳ್ಳಲಿ ಆಮೇಲೆ ನನ್ನ ಜೊತೆಗೆ ಚರ್ಚೆಗೆ ಬರಲಿ ಎಂದು ಭಗವಂತ ಖೂಬಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...