ಪಿರಿಯಾಪಟ್ಟಣ | ಸಾಲಬಾಧೆಗೆ ರೈತ ಅಸಹಜ ಸಾವು

Date:

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬಿಳಗುಂದ ಗ್ರಾಮದ ಶ್ರೀನಿವಾಸ್ (47) ಎಂಬುವರು ಸಾಲಭಾದೆಯಿಂದ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

ಮೃತ ರೈತ ಕುಟುಂಬದವರ ಹೆಸರಿನಲ್ಲಿದ್ದ ಭೂಮಿಯಲ್ಲಿ ಸಹೋದರ ತಿಮ್ಮೇಗೌಡರ ಜೊತೆ ಸೇರಿ ತಂಬಾಕು ಮತ್ತು ಶುಂಠಿ ಬೆಳೆ ಬೆಳೆಯುತ್ತಿದ್ದರು. ವ್ಯವಸಾಯದ ಉದ್ದೇಶದಿಂದ ಮೃತ ರೈತ ಶ್ರೀನಿವಾಸ್ ಖಾಸಗಿ ಫೈನಾನ್ಸ್ ಹಾಗೂ ಮಹಿಳಾ ಸ್ವಸಹಾಯ ಸಂಘ ಸೇರಿದಂತೆ ಕೈಸಾಲವಾಗಿ ಸರಿಸುಮಾರು ₹10 ಲಕ್ಷ ರೂಪಾಯಿ ಸಾಲ ಮಾಡಿದ್ದರು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಒಳಮೀಸಲಾತಿಗೆ ಒತ್ತಾಯಿಸಿ ಡಿ.6ರಂದು ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷ ಅತಿಯಾದ ಮಳೆಯಿಂದ ಬೆಳೆ ಸರಿಯಾಗಿ ಬಾರದೆ ವ್ಯವಸಾಯದ ಉದ್ದೇಶದಿಂದ ಮಾಡಿದ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಈ ಕೊರಗಿನಲ್ಲಿದ್ದ ರೈತ ಶ್ರೀನಿವಾಸ್ ಮನನೊಂದು ಬುಧವಾರ ಬೆಳಗ್ಗೆ ಜಮೀನಿನ ಬಳಿ ಕ್ರಿಮಿನಾಶಕ ಸೇವಿಸಿ ಒದ್ದಾಡುತಿದ್ದನ್ನು ಗಮನಿಸಿದ ಸ್ಥಳೀಯರು, ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೋಯ್ದಿದ್ದಾರೆ. ವೈದ್ಯರು ಪರೀಕ್ಷಿಸಿ ಶ್ರೀನಿವಾಸ್ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಮೃತರ ಪತ್ನಿ ಪ್ರತಿಮಾ ಅವರು ಘಟನೆಗೆ ಸಂಬಂಧಿಸಿದಂತೆ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರುನೀಡಿದ್ದು, ದೂರಿನನ್ವಯ ಬೆಟ್ಟದಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ವಿಡಿಯೋ ವೀಕ್ಷಿಸಿ :https://youtu.be/NbzTpJti_6Y?si=tQPn_gWY2xwL_b5c

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...