ಕಾರ ಹುಣ್ಣಿಮೆ‌ ಸಂಭ್ರಮ : ಎತ್ತಿನ ಮೈಮೇಲೆ ʼಜೈ ಆರ್‌ಸಿಬಿʼ ಬಣ್ಣ ಬರೆದು ಅಭಿಮಾನ ತೋರಿದ ರೈತ

Date:

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಬುಧವಾರ ಮುಂಗಾರು ಹಂಗಾಮಿನ ಮೊದಲ ಹಬ್ಬ ಕಾರ ಹುಣ್ಣಿಮೆ ಸಂಭ್ರಮದಿಂದ ಆಚರಿಸಲಾಯಿತು.

ಜೇವರ್ಗಿಯಲ್ಲಿ ರೈತರು ಪಟ್ಟಣದ ಷಣ್ಮುಖ ಶಿವಯೋಗಿ ವಿರಕ್ತ ಮಠದ ಆವರಣ ಸೇರಿದಂತೆ ವಿವಿಧೆಡೆ ಎತ್ತುಗಳ ಮೈತೊಳೆದು ಕೋಡುಗಳಿಗೆ ಕೆಂಪು, ನೀಲಿ, ಹಸಿರು ಬಣ್ಣ ಹಚ್ಚಿದರು. ಅಲಂಕಾರಿಕ ವಸ್ತುಗಳಾದ ಗೆಜ್ಜೆಸರ, ಹಣೆಕಟ್ಟು, ರಿಬ್ಬನ್‌, ಬಲೂನ್‌ ಕಟ್ಟಿ ಶೃಂಗರಿಸಿ ಪೂಜೆ ಸಲ್ಲಿಸಿದರು.

ಕೆಲವರ ರೈತರು ತಮ್ಮ ನೆಚ್ಚಿನ ನಾಯಕರು ಹೋರಾಟಗಾರ, ಚಲನಚಿತ್ರ ನಟರ ಭಾವಚಿತ್ರ ಹೆಸರನ್ನು ಎತ್ತುಗಳ ಮೇಲೆ ಬರೆಸಿ ಅಭಿಮಾನ ತೋರಿದರು. ಕೆಲ ಯುವ ರೈತರು ಜೈ ಆರ್‌ಸಿಬಿ ಎಂದು ಬರೆಸಿ ಅಭಿಮಾನ ತೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್‌, ಭಾಲ್ಕಿಯಲ್ಲಿ ಕಾರ ಹುಣ್ಣಿಮೆ :

ಈ ವರ್ಷದ ಮುಂಗಾರಿನ ಹಂಗಾಮಿನಲ್ಲಿ ಉತ್ತಮಜ ಮಳೆಯಾಗಿ ರೈತರು ಸಮೃದ್ಧ ಬೆಳೆ ಬೆಳೆಯುವಂತಾಗಲಿ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಆಶಿಸಿದರು.

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದ ಆವರಣದಲ್ಲಿ ಕಾರ ಹುಣ್ಣಿಮೆ ನಿಮಿತ್ತ ಬುಧವಾರ ಎತ್ತುಗಳಿಗೆ ಪೂಜೆ ಸಲ್ಲಿಸಿ
ಅವರು ಮಾತನಾಡಿ, ʼಮುಂಗಾರಿನ ಮೊದಲ ಹಬ್ಬ ಕಾರ ಹುಣ್ಣಿಮೆ ರೈತರು ಸಂಭ್ರಮದಿಂದ ಆಚರಿಸುತ್ತಾರೆ. ವರ್ಷಪೂರ್ತಿ ರೈತರೊಂದಿಗೆ ದುಡಿಯುವ ಎತ್ತುಗಳು, ರಾಸುಗಳಿಗೆ ಅಲಂಕರಿಸಿ ಪೂಜೆ ಸಲ್ಲಿಸುವುದು ಕಾರ ಹುಣ್ಣಿಮೆ ವಿಶೇಷ. ಆದರೆ
ಇಂದಿನ ಯಾಂತ್ರೀಕರಣದ ಪ್ರಭಾವದಿಂದ ರಾಸುಗಳ ಸಂಖ್ಯೆ ಕಡಿಮೆಗೊಳ್ಳುತ್ತಿದೆ. ಹಬ್ಬದ ಸಂಭ್ರಮ ಮರೆಯಾಗುತ್ತಿದೆ ಎಂದು
ಕಳವಳ ವ್ಯಕ್ತಪಡಿಸಿದರು.

WhatsApp Image 2025 06 12 at 7.34.03 AM
ಭಾಲ್ಕಿ ಹಿರೇಮಠ ಸಂಸ್ಥಾನದ ಆವರಣದಲ್ಲಿ ಕಾರ ಹುಣ್ಣಿಮೆ ನಿಮಿತ್ತ ಎತ್ತುಗಳಿಗೆ ಪೂಜೆ ಸಲ್ಲಿಸಿದರು.

ಪ್ರತಿವರ್ಷ ಸಕಾಲಕ್ಕೆ ಮಳೆಯಾಗದೇ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಆದರೆ ಈ ಬಾರಿ ಮುಂಗಾರಿನ ಆರಂಭದಿಂದಲೇ ಉತ್ತಮ ಮಳೆಯಾಗುತ್ತಿದೆ. ಇದು ರೈತರಲ್ಲಿ ಮೊಗದಲ್ಲಿ ಸಂತಸ ತರಿಸಿದೆ. ಈ ಬಾರಿ ಉತ್ತಮ ಮಳೆಯಾಗಿ ರೈತರು ಉತ್ತಮ ಬೆಳೆ ಬೆಳೆದು ಎಲ್ಲ ಸಂಕಷ್ಟದಿಂದ ಹೊರ ಬರುವಂತಾಗಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಸವಲಿಂಗ ಸ್ವಾಮೀಜಿ, ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಕಾಶಿನಾಥ ಭೂರೆ, ಪ್ರಮುಖರಾದ ಬಸವರಾಜ ಮರೆ, ಜಗನ್ನಾಥ ಜಮಾದಾರ, ಅಶೋಕ ಅಂಬಿಗಾರ, ಮಲ್ಲಮ್ಮ ನಾಗನಕೇರೆ ಸೇರಿದಂತೆ ಮುಂತಾದವರು ಇದ್ದರು.

ಮುಂಗಾರು ಆರಂಭದ ಮೊದಲ ಹಬ್ಬವಾದ ಕಾರ ಹುಣ್ಣಿಮೆ, ಬೇಸಿಗೆ ಕಳೆದು ಮುಂಗಾರು ಹೊಸ್ತಿಲಿಗೆ ರೈತನೊಂದಿಗೆ ದುಡಿಯುವ ಎತ್ತುಗಳಿಗೆ ಪೂಜೆ ಸಲ್ಲಿಸುವ ಸಂಭ್ರಮದ ಹಬ್ಬ ಕಾರ ಹುಣ್ಣಿಮೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸ ಡಾ.ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು. 

WhatsApp Image 2025 06 12 at 7.30.19 AM
ಬೀದರ್‌ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಎತ್ತುಗಳಿಗೆ ಪೂಜೆ ಸಲ್ಲಿಸಿದರು.

ಕಾರ ಹುಣ್ಣಿಮೆ ನಿಮಿತ್ತ ಇಂದು ಬೀದರ ದಕ್ಷಿಣ ಕ್ಷೇತ್ರದ ಬಕ್ಕಚೌಡಿ ಗ್ರಾಮದದಲ್ಲಿ  ಅದ್ಭುತವಾಗಿ  ಅಲಂಕಾರಗೊಂಡ  ಎತ್ತುಗಳ, ಗೋವುಗಳ ಮೆರವಣಿಗೆ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು. 

ರೈತಾಪಿ ಜನರಿಗೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಹಬ್ಬ. ಈ ಹಬ್ಬವು ಎತ್ತುಗಳ ಪ್ರಾಮುಖ್ಯತೆಯನ್ನು ಗೌರವಿಸಿ, ಮಳೆಗಾಲದ ಆರಂಭವನ್ನು ಸೂಚಿಸುತ್ತದೆ. ದೇಶದ ಬೆನ್ನೆಲುಬಾಗಿರುವ ರೈತರಿಗೆ ಕಾರ ಹುಣ್ಣಿಮೆ ಶುಭಾಶಯ ಕೋರಿದರು. 

WhatsApp Image 2025 06 12 at 7.28.26 AM
ಚಿಟಗುಪ್ಪಾ ತಾಲ್ಲೂಕಿನ ಚಾಂಗಲೇರಾ ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳಿಗೆ ಶೃಂಗರಿಸಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದರು.

ಮುಖಂಡರಾದ ನಾಗಭೂಷಣ ಕಮಠಾಣಾ, ಸುರೇಶ ಮಾಶೆಟ್ಟಿ, ಚಂದ್ರಯ್ಯ ಸ್ವಾಮಿ, ವಿಜಯಕುಮಾರ ಬಕ್ಕಚೌಡಿ, ಅನೀಲ ಗುನ್ನಳ್ಳಿ, ನಾಗಶೆಟ್ಟಿ ಚಟ್ನಳ್ಳಿ, ಸಂಗಮೇಶ ಉದಗೀರೆ ಮತ್ತಿತರರು ಉಪಸ್ಥಿತರಿದ್ದರು. 

ಇದನ್ನೂ ಓದಿ : ಬೀದರ್‌ | ಕಳೆದ ಮೂರು ವರ್ಷದಲ್ಲಿ 39 ಬಾಲ ಕಾರ್ಮಿಕರ ರಕ್ಷಣೆ : ಬೇಕಿದೆ ಇನ್ನಷ್ಟು ಬಿಗಿ ಕ್ರಮ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...