ಮೈಸೂರು | ತಂಬಾಕು ಬೆಳೆಗಾರರ ಮೇಲಿನ ದಂಡ ಮನ್ನಾ ಮಾಡುವಂತೆ ರೈತ ಸಂಘದಿಂದ ಮನವಿ

Date:

ಮೈಸೂರಿನ ಪ್ರಾದೇಶಿಕ ತಂಬಾಕು ಮಂಡಳಿ ವಲಯ ಕಚೇರಿಯಲ್ಲಿ ಭಾರತ ಸರ್ಕಾರದ ತಂಬಾಕು ಮಂಡಳಿ ಕಾರ್ಯಕಾರಿ ನಿರ್ದೇಶಕರಾದ ವಿಶ್ವಶ್ರೀಯವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಹೊಸೂರು ಕುಮಾರ್ ನೇತೃತ್ವದ ನಿಯೋಗ ಭೇಟಿ ಮಾಡಿ ರೈತರ ಮೇಲಿನ ದಂಡದ ಶುಲ್ಕವನ್ನು ಮನ್ನಾ ಮಾಡಬೇಕೆಂದು ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾಧ್ಯಕ್ಷರಾದ ಹೊಸೂರ್ ಕುಮಾರ್ ಮಾತನಾಡಿ, ಈಗಾಗಲೇ ಶೇ% 25 ಮತ್ತು 50 ರಷ್ಟು ಪ್ರತಿಶತ ತಂಬಾಕು ಮಾರಾಟ ಮಾಡಿದ ರೈತರ ದಂಡದ ಹಣವನ್ನು ಮನ್ನಾ ಮಾಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಜೊತೆಗೆ, ಕರ್ನಾಟಕದಲ್ಲಿ ಶೇ% 70 ರಷ್ಟು ತಂಬಾಕು ರೈತರು ಸಣ್ಣ ಹಿಡಿವಳಿದಾರರಾಗಿದ್ದು ಕಳೆದ ವರ್ಷ ಅತಿಯಾದ ಮಳೆಯಿಂದಾಗಿ ಬೆಳೆ ನಷ್ಟ ಉಂಟಾಗಿ ರೈತರು ತಂಬಾಕು ಮಾರಾಟ ಮಾಡಲು ಸಾಧ್ಯವಾಗಿರುವುದಿಲ್ಲ. ಇದರೊಂದಿಗೆ ಕೆಳದರ್ಜೆ ತಂಬಾಕು ಉತ್ಪಾದನೆ ಆಗಿರುವ ಕಾರಣ, ಸದರಿ ತಂಬಾಕು ಮಾರಾಟ ಮಾಡಲಾಗುತ್ತಿಲ್ಲ. ಹಾಗೂ ಖರೀದಿದರಾರು ಸಹ ಮುಂದೆ ಬರುತ್ತಿಲ್ಲ.

ಈ ಕಾರಣದಿಂದ ತಂಬಾಕು ಮಾರಾಟ ಮಾಡಲಾಗದೆ, ರೈತರಿಗೆ ದಂಡದ ಶುಲ್ಕವನ್ನು ಕಟ್ಟಲು ಸಾಧ್ಯವಾಗುತ್ತಿಲ್ಲ. ಹಾಲಿ ವ್ಯವಸಾಯದ ಸಮಯವಾದ್ದರಿಂದ ದುಬಾರಿ ದಂಡದ ಶುಲ್ಕ ಹೊಂದಿಸಲು ರೈತರು ಅಸಮರ್ಥರಾಗಿದ್ದಾರೆ. ಆದ್ದರಿಂದ, ಈ ಬಾರಿಯ ದಂಡದ ಶುಲ್ಕವನ್ನು ಮನ್ನಾ ಮಾಡಿ ರೈತರ ಪರವಾನಿಗೆ ನವೀಕರಿಸಲು ಅನುಕೂಲ ಮಾಡಿಕೊಡಬೇಕು. ಈ ಹಿಂದಿನ ಮೂರು ವರ್ಷಗಳಿಂದ ಡ್ರಾಪ್ ಆಗಿರುವ ಲೈಸೆನ್ಸ್ ಗಳನ್ನು ನವೀಕರಿಸಿ ಕೊಡಬೇಕೆಂದು ಮನವಿ ಸಲ್ಲಿಸಿರುವುದಾಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಶೇಷ ಸುದ್ದಿ ಓದಿದ್ದೀರಾ?ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ನಿಶ್ಚಿತ ಗೌರವಧನದ ಆಶ್ವಾಸನೆ; ಕೊಟ್ಟ ಮಾತು ಮರೆತ ಆಡಳಿತ ಸರ್ಕಾರ

ಕರ್ನಾಟಕ ತಂಬಾಕು ಮಂಡಳಿ ಹರಾಜು ನಿರ್ದೇಶಕ ಶ್ರೀನಿವಾಸ್, ತಂಬಾಕು ಮಂಡಳಿ ನಿರ್ದೇಶಕ ವಿಕ್ರಂ ರಾಜೇಗೌಡ , ಆರ್‌ಎಂಒ ವೇಣುಗೋಪಾಲ್, ತಂಬಾಕು ಬೆಳೆಗಾರರ ಹಿತರಕ್ಷಣ ಸಮಿತಿಯ ಅಧ್ಯಕ್ಷ ಮೋದೂರು ಶಿವಣ್ಣ, ಗೌರವಾಧ್ಯಕ್ಷ ಉಂಡವಾಡಿ ಚಂದ್ರೇಗೌಡ, ರೈತ ಸಂಘದ ಮುಖಂಡ ಸತೀಶ್ ನಿಯೋಗದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...