ಮೈಸೂರು| ಇಮ್ಮಾವು ಗೇಣಿದಾರರಿಗೆ ಪರಿಹಾರ ಕಲ್ಪಿಸುವಂತೆ ರೈತ ಸಂಘದಿಂದ ಅನಿರ್ಧಿಷ್ಟಾವಧಿ ಧರಣಿ

Date:

ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕು ಇಮ್ಮಾವು ಗ್ರಾಮದ ಸರ್ವೇ ನಂ.390 ರಿಂದ 430ರ ವರೆಗಿನ ಜಮೀನಿನ ಮೂಲ ಗೇಣಿದಾರರಿಗೆ ಪರಿಹಾರ ಪಾವತಿಸುವಂತೆ ಹಾಗೂ ಕಾನೂನು ಬಾಹಿರವಾಗಿ ಪರಿಹಾರ ಪಡೆದಿರುವ ಅರ್ಹರಲ್ಲದವರ ವಿರುದ್ಧ ಕಾನೂನು ರೀತ್ಯಾ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ಧಿಷ್ಟಾವಧಿ ಧರಣಿ ಕೈಗೊಂಡಿದೆ.

ಇಮ್ಮಾವು ಗ್ರಾಮದ ಸರಿ ಸುಮಾರು 500 ಎಕರೆಯಷ್ಟು ಸರ್ಕಾರಿ ಭೂಮಿಯಲ್ಲಿ 80-90 ವರ್ಷಗಳಿಂದ ಗೇಣಿದಾರರಾಗಿ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿರುವವರು ಸ್ಥಳೀಯ ರೈತರು. ಈ ಸಂಬಂಧಿತವಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿ ವ್ಯವಸಾಯ ಮಾಡಿಕೊಂಡು ಬಂದಿದ್ದಾರೆ. 2008ರಲ್ಲಿ ಸರ್ಕಾರ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಸ್ವಾಧೀನ ಪಡಿಸಿಕೊಂಡು ಖಾತೆದಾರರಿಗೆ ಎಕರೆಗೆ ತಲಾ ₹21 ಲಕ್ಷ ರೂಪಾಯಿ ಪರಿಹಾರ ನೀಡಿದೆ.

ಸರ್ಕಾರಿ ಕರಾಬಿನಲ್ಲಿರುವ ಸಾಗುವಳಿ ರೈತರಿಗೆ ಸರ್ಕಾರ ₹18 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಅರ್ಹ ರೈತರಿಗೆ ಹಂಚಿಕೆ ಮಾಡದೆ ಅರ್ಹರಲ್ಲದವರಿಗೆ ನೀಡಿರುವುದು ಕಂಡುಬಂದಿದೆ ಎಂದು ಆರೋಪಿಸಿದರು. ಈ ಸಂಬಂಧ ಕೆಐಎಡಿಬಿ ಎದುರು ಫೆಬ್ರವರಿ.2ರಂದು ಪ್ರತಿಭಟನೆ ನಡೆಸಿ ಸಮಸ್ಯೆ ಪರಿಹರಿಸುವಂತೆ 15 ದಿನಗಳ ಗಡುವು ನೀಡಲಾಗಿತ್ತು. ಆದರೆ, ಇದುವರೆಗೆ ಯಾವುದೇ ರೀತಿಯ ಕ್ರಮಕೈಗೊಂಡಿಲ್ಲ ಎಂದು ಪ್ರತಿಭಟನೆ ನಿರತರು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಮಾರ್ಚ್.4ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ: ದೇವಗಳ್ಳಿ ಸೋಮಶೇಖರ್

ಪ್ರತಿಭಟನೆಯಲ್ಲಿ ರಾಜ್ಯ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ, ಯುವ ಘಟಕದ ಪ್ರೇಮ್ ರಾಜ್, ಮೈದನಹಳ್ಳಿ ಮಹೇಶ್, ಸಂತೋಷ್, ರಾಜಣ್ಣ, ಬಸವರಾಜು, ಪ್ರಕಾಶ್, ರಂಗಸ್ವಾಮಿ, ಕಾಳೆಗೌಡ, ರಂಗಪ್ಪ, ಬಸಪ್ಪ, ಮಂಜಮ್ಮ, ಕಳಸಮ್ಮ, ಲಕ್ಷ್ಮಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...