ಸಿಂದಗಿಯಲ್ಲಿ ರೈತ ಸಂಘ ಪ್ರತಿಭಟನೆ; ಸರ್ಕಾರಿ ಭೂಮಿ ಫಾರೆಸ್ಟಿಗೆ ಹಸ್ತಾಂತರಿಸದಂತೆ ಮನವಿ

Date:

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸಾಸಭಾಳ ಗ್ರಾಮದ ಸರ್ವೆ ನಂಬರ್ 14,18 ಸರ್ಕಾರಿ ಭೂಮಿಯನ್ನು ಫಾರೆಸ್ಟಿಗೆ ಹಸ್ತಾಂತರಿಸಲು ಯೋಜಿಸಿರುವುದನ್ನು ಕೈಬಿಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಸಿಂದಗಿ ಘಟಕ ಪ್ರತಿಭಟಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದೆ.

ಸಾಸಭಾಳ ಗ್ರಾಮದ ಸರ್ವೆ ನಂಬರ್ 14ರಲ್ಲಿ ಬಡ ಬಗರ್ ಹುಕುಂ ಸಾಗುವಳಿದಾರರು ನಮೂನೆ 57 ಅರ್ಜಿ ಹಾಕಿಕೊಂಡು ಸಕ್ರಮಕ್ಕಾಗಿ ಕಾಯುತ್ತಿದ್ದಾರೆ. ಡೀಮ್ಡ್ ಅರಣ್ಯ ಹಸ್ತಾಂತರವನ್ನು ಪುನ‌ರ್ ಪರಿಶೀಲಿಸಿ ಬಡವರಿಗೆ ನ್ಯಾಯ ಒದಗಿಸಬೇಕಾಗಿ ಪ್ರತಿಭಟನಾಕಾರರು ಮನವಿ ಮಾಡಿಕೊಂಡಿದ್ದಾರೆ.

ಅಕ್ರಮ ಸಕ್ರಮ ಕಮಿಟಿಯಲ್ಲಿ ನಮೂನೆ-57 ಅರ್ಜಿಗಳನ್ನು ಪರಿಗಣಿಸಬೇಕು. ಢವಳಾರ, ಗೋಲಗೇರಿ, ಸಾಸಭಾಳ ಗ್ರಾಮಗಳ ಸಾಗುವಳಿದಾರರ ಭೂಮಿಯನ್ನು ಸಕ್ರಮಗೊಳಿಸಬೇಕು. ಅರಣ್ಯ ಇಲಾಖೆಯ ಅಧಿಕಾರಿಗಳು ರೈತರಿಗೆ ತೊಂದರೆ ಕೊಡಬಾರದು. ಸಾಗುವಳಿದಾರರಿಗೆ ಹೊಸ ಅರ್ಜಿ ಹಾಕಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಪಂಚ ಗ್ಯಾರಂಟಿಗಳ ಕುರಿತು ಜನಜಾಗೃತಿ; ಎಲ್‌ಇಡಿ ಪ್ರದರ್ಶನ ವಾಹನಕ್ಕೆ ಚಾಲನೆ

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಅಣ್ಣಾರಾಯ ಇಳಗೆರಾ, ಡಿವೈಎಫ್ಐ ಜಿಲ್ಲಾಧ್ಯಕ್ಷ ರಮೇಶ ತಳವಾರ, ಬಗರ್ ಹುಕುಂ ಸಾಗುವಳಿದಾರರಾದ ಬಾಬು ರಾಠೋಡ,‌ ಯಲ್ಲಪ್ಪ ತಳವಾರ, ಮನೋಹರ ಜಾಧವ, ಅಶೋಕ ಹಡಪದ, ಕುಪ್ಪಣ್ಣ ತಳವಾರ, ಭೀಮಶಿ ಪವರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...