ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಜನ್ಮದಿನದ ಅಂಗವಾಗಿ ರೈತರ ರಥಯಾತ್ರೆ; 170ಕ್ಕೂ ಹೆಚ್ಚು ಸಾಧಕರಿಗೆ ರಾಜ್ಯ ಪ್ರಶಸ್ತಿ

Date:

ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಜನ್ಮದಿನದ ಅಂಗವಾಗಿ ಬೆಂಗಳೂರಿನ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದಿಂದ ಅದ್ದೂರಿಯಾಗಿ ರೈತರ ರಥಯಾತ್ರೆಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನ್ಯಾ. ಸಂತೋಷ್ ಹೆಗಡೆ ನೆರವೇರಿಸಿದರು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 170ಕ್ಕೂ ಹೆಚ್ಚು ರೈತರು, ಹಾಲು ಉತ್ಪಾದಕರು, ರೈತ ಮಹಿಳೆಯರು ಹಾಗೂ ಕಲಾವಿದರಿಗೆ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಪ್ರದಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಶಿವಮೊಗ್ಗದ ಶ್ರೀ ಪಲ್ಲಕ್ಕಿ ನಾರಾಯಣ ಸ್ವಾಮೀಜಿ ಹಾಗೂ ತಳ್ಳಿಹಾಳ ಸಂಸ್ಥಾನ, ಕೋಡಿಮಠ ಕಾಲಜ್ಞಾನ ಬ್ರಹ್ಮ ಸದ್ಗುರು ಶ್ರೀ ಶರಣಬಸವ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಬೆಂಗಳೂರಿನ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಮಂಜುನಾಥ ಬಾಬು, ಸಮಾಜ ಸೇವಕಿ ಅನು ಅಮ್ಮ, ಉಷಾ ಜಮದಗ್ಮಿ, ಶಾಸಕರಾದ ಕೆಂಚನೂರ್‌ ಶಂಕರ್‌, ರಾಜಣ್ಣ, ಬಾಗಲಕೋಟೆ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಮಹಾಂತೇಶ ಹಟ್ಟಿ, ಜೇನು ಕೃಷಿಕ ಶಿರಸಿಯ ಮಧುಕೇಶ್ವರ ಹೆಗ್ಡೆ, ಕುಂದಾಪುರ ದಿನಕರ ಶೆಟ್ಟಿ, ಸಮಾಜ ಸೇವಕಿ ಡಾ. ಪುಷ್ಪ ಹಿರೇಮಠ್‌, ಶೈಲೇಂದ್ರ ನಾಜರೆ, ಅಶೋಕ್‌, ಮಹೇಂದ್ರ ಜೈನ್‌, ಸಂಘದ ಅಧ್ಯಕ್ಷ ಎಂ ಪ್ರಕಾಶ್‌ ತಿಮ್ಲಾಪುರ, ರಾಜ್ಯ, ಜಿಲ್ಲೆ, ಹೋಬಳಿ ಮಟ್ಟದ ಪದಾಧಿಕಾರಿಗಳು, ಮಹಿಳಾ ಘಟಕದ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಂಗಳೂರು | ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಿ : ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ರಾಜ್ಯ ಕಾರ್ಯಾಧ್ಯಕ್ಷ ಎಂ. ಬಸವರಾಜ್ ಪ್ರಾಸ್ತಾವಿಕ ಭಾಷಣ ಮಾಡಿದರು. ಚಲನಚಿತ್ರ ನಿರ್ದೇಶಕ ಸುನಿಲ್ ಕುಂಬಾರ್ ಮತ್ತು ರೂಪ ಅವರ ಪೂರ್ವ ಯೋಜನೆಯಂತೆ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಅನು ಅಮ್ಮ ತಮ್ಮ ಭಾಷಣದಲ್ಲಿ “ರೈತ ಬೆಳೆದರೆ ಮಾತ್ರ ದೇಶ ಬೆಳೆಯುತ್ತದೆ. ರೈತನನ್ನು ಕಡೆಗಣಿಸಿದರೆ ಬಡತನ ನಿಶ್ಚಿತ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...