ರೈತರ ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಸರ್ಕಾರದ ಕ್ರೂರತೆಗೆ ಏನು ಹೇಳೋಣ?: ಎಚ್‌ಡಿಕೆ ಕಿಡಿ

Date:

  • ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?
  • ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ?

ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ ‘ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಆರು ತಿಂಗಳಲ್ಲಿ 251 ರೈತರ ಆತ್ಮಹತ್ಯೆ ವಿಚಾರವಾಗಿ ಪ್ರಕಟವಾದ ಪತ್ರಿಕಾ ವರದಿ ಇಟ್ಟುಕೊಂಡು ಸರಣಿ ಟ್ವೀಟ್‌ ಮಾಡಿರುವ ಅವರು, “ರಾಜ್ಯದಲ್ಲಿರುವುದು ಕೃಷಿ ಇಲಾಖೆಯೋ ಅಥವಾ ಕಸಾಯಿಖಾನೆಯೋ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ! ಇದು ನೈಜಸ್ಥಿತಿ” ಎಂದು ಲೇವಡಿ ಮಾಡಿದ್ದಾರೆ.

“ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ ಸರ್ಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ?” ಎಂದು ಪಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಈಗಾಗಲೇ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರ್ಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ?” ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ

“ಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ, ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ. ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ?” ಎಂದು ವಾಗ್ದಾಳಿ ನಡೆಸಿದ್ದಾರೆ.

“ನನ್ನ ಮನವಿ ಇಷ್ಟೇ; ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ. ಸರ್ಕಾರ ಇಂತಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ” ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...