ಉಡುಪಿ | ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

Date:

ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ದಿ ಪಡಿಸಲಾಗಿದ್ದು, ಇಲಾಖೆಯ ಪ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್‌ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2025” ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಂಡು, ನಂತರ “ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ” ಆಯ್ಕೆಯನ್ನು ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ, ಜನರೇಟ್ ಓ.ಟಿ.ಪಿ ಆಯ್ಕೆಯನ್ನು ಮಾಡಬೇಕು. ನಂತರದಲ್ಲಿ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಓ.ಟಿ.ಪಿ ಯನ್ನು ದಾಖಲಿಸಬೇಕು. ರೈತರ ಎಫ್.ಐ.ಡಿ ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜಮೀನುಗಳ ಮಾಹಿತಿಯು ಡೌನ್‌ಲೋಡ್ ಆಗುತ್ತದೆ. ಮುಂದಿನ ಹಂತದಲ್ಲಿ ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಬೇಕು. ಸರ್ವೆ ನಂಬರ್‌ಗಳ ಗಡಿ ರೇಖೆಯೊಳಗೆ ನಿಂತು ಬೆಳೆ ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು. ಒಂದು ವೇಳೆ ರೈತರು ಎಫ್.ಐ.ಡಿ ಸಂಖ್ಯೆಯನ್ನು ಹೊಂದಿಲ್ಲದಿದ್ದಲ್ಲಿ ಹತ್ತಿರದ ಕೃಷಿ ಅಥವಾ ತೋಟಗಾರಿಕ ಇಲಾಖೆಗಳ ಕಛೇರಿಗಳನ್ನು ಸಂಪರ್ಕಿಸಿ, ಎಫ್.ಐ.ಡಿ ಸಂಖ್ಯೆಯನ್ನು ಮಾಡಿಸಿಕೊಳ್ಳಬೇಕು.

ಬೆಳೆ ಸಮೀಕ್ಷೆ ಮಾಹಿತಿಯನ್ನು ಪೃಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು.

ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರ್ಕಾರದಿಂದ ಸುವರ್ಣಾವಕಾಶವನ್ನು ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಹಾಗೂ ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್‌ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು –2025 ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...