ಬೀದರ್‌ | ಉಸ್ತುವಾರಿ ಸಚಿವರಿಗೆ ರೈತ ಸಂಘ ಮನವಿ

Date:

ಜಿಲ್ಲೆಯಲ್ಲಿ ಕಬ್ಬಿಗೆ ಬೆಲೆ ನಿಗದಿಪಡಿಸುವುದು, ಅತಿವೃಷ್ಟಿ, ರೋಗ ಬಾಧೆಯಿಂದ ಹಾನಿಗೀಡಾದ ತೊಗರಿ ಬೆಳೆಗೆ ವಿಶೆಷ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಮನವಿ ಸಲ್ಲಿಸಿತು.

ನಗರದ ಜಿಲ್ಲಾ ಪಂಚಾಯತ್‌ ಕಚೇರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳು ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿ, ಜಿಲ್ಲೆಯ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಲು ಕೋರಿದರು.

ʼರಾಜ್ಯದಲ್ಲಿ ಕೃಷಿ ಪ್ರಧಾನ ಜಿಲ್ಲೆ ಬೀದರ್ ಆಗಿದ್ದು, ಜಿಲ್ಲೆಯ ರೈತರು ಪ್ರತಿವರ್ಷ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸದೇ ಇರುವುದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಜಿಲ್ಲೆಯ ಎಲ್ಲಾ ಪಿಕೆಪಿಎಸ್ ಕೇಂದ್ರಗಳಲ್ಲಿ ಸೋಯಾಬಿನ್‌, ತೊಗರಿ ಮತ್ತು ಕಡಲೆ ಧಾನ್ಯಗಳನ್ನು ಖರೀದಿಸಿ ಸಕಾಲದಲ್ಲಿ ರೈತರ ಖಾತೆಗೆ ಹಣ ಪಾವತಿಸಬೇಕು. ಬಿಎಸ್‌ಎಸ್‌ಕೆ ಕಾರ್ಖಾನೆಯನ್ನು ಒನ್ ಟೈಮ್‌ ಸೆಟಲ್‌ಮೆಂಟ್ ಮಾಡಿ ಕಾರ್ಖಾನೆ ಪುನಾರಂಭಿಸಲು ಕ್ರಮ ಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬೆಳೆ ವಿಮೆ ಪಾವತಿಸಿದ ರೈತರಿಗೆ ಪರಿಹಾರ ಪಾವತಿಸಲು ವಿಮಾ ಕಂಪನಿಗಳಿಗೆ ನಿರ್ದೇಶಿಸಬೇಕು. ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಪರಿಹಾರ ಧನ ತ್ವರಿತವಾಗಿ ಪಾವತಿಸಬೇಕು. ಕಾಡು ಪ್ರಾಣಿಗಳ ದಾಳಿಯಿಂದ ಹಲವೆಡೆ ಬೆಳೆ ಹಾನಿಯಾಗಿದೆ, ಅಂತಹ ರೈತರಿಗೆ ಪರಿಹಾರ ಒದಗಿಸಲು ಕ್ರಮಕೈಗೊಳ್ಳಬೇಕು. ಕಾಡು ಪ್ರಾಣಿಗಳಿಂದ ರೈತರ ಬೆಳೆ ರಕ್ಷಣೆಗೆ ಮುಂದಾಗುವುದು ಸೇರಿದಂತೆ ಇತರೆ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ನಾಲ್ವರ ಬಂಧನ

ಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ಖಾಸಿಂ ಅಲಿ, ಶಾಂತಮ್ಮಾ ಮೂಲಗೆ, ಕಾಶಿನಾಥ ಭೂರೆ, ವಿಠ್ಠಲರಾವ್‌ ಮೇತ್ರೆ, ಸಂಗಶೆಟ್ಟಿ ದಾನಾ, ವಿಠ್ಠಲ ರೆಡ್ಡಿ, ಮುಖಿಮೊದೀನ್ ಪಟೇಲ್‌, ಬಸವರಾಜ ಅಷ್ಟೂರ್‌, ರುದ್ರಯ್ಯ ಸ್ವಾಮಿ, ವಿಜಯಕುಮಾರ್‌ ಬಾವಗೆ, ನಾಗೇಂದ್ರ ತರನಳ್ಳಿ, ಖಾನ್‌ ಸಾಬ್‌, ವಿನೊದ ಚಿಂತಾಮಣಿ, ಭವರಾವ ನೆಲವಾಡೆ, ಗುಂಡೆರಾವ ಕುಲಕರ್ಣಿ, ಶಿವಕಾಂತ ಖಂಡೆ, ಭದ್ರಪ್ಪ ಬಾವಗಿ ಸೇರಿದಂತೆ ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...