ಬಸವಕಲ್ಯಾಣ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಮನವಿ

Date:

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಾದ್ಯಂತ ರೈತರು ಬಿತ್ತಿದ ಹೆಸರು, ಉದ್ದು ಕಟಾವಿಗೆ ಬಂದಿದೆ. ಆದರೆ ಖರೀದಿ ಕೇಂದ್ರ ಇನ್ನೂ ಸ್ಥಾಪನೆಯಾಗಿಲ್ಲ. ಹೀಗಾಗಿ ಕೂಡಲೇ ಸರ್ಕಾರ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಶುಕ್ರವಾರ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಬಸವಕಲ್ಯಾಣ ನಗರದ ಎಪಿಎಂಸಿ ಕಚೇರಿಯ ಕಾರ್ಯದರ್ಶಿ ಸಂತೋಷಕುಮಾರ ಮುದ್ದಾ ಅವರಿಗೆ ಸಲ್ಲಿಸಿದರು.

‘ಎಪಿಎಂಸಿ ಮಾರುಕಟ್ಟೆಯಲ್ಲಿ ಮಧ್ಯ ವರ್ತಿಗಳ ಹಾವಳಿ ಹೆಚ್ಚಾಗಿದೆ. ಕ್ವಿಂಟಲ್‌ಗೆ 3ಕೆ.ಜಿ. ದವಸ ಧಾನ್ಯಗಳು ಕಡಿತಗೊಳಿಸುತ್ತಿದ್ದು ಹಾಗೂ ಶೇ.100ಕ್ಕೆ 2 ಪ್ರತಿಶತ ಹಣ ಕಡಿತಗೊಳಿಸುತ್ತಿದ್ದಾರೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿ ಮೋಸ ಹೋಗುತ್ತಿದ್ದಾರೆ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001138106
ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು.

‘ರೈತರ ಮಕ್ಕಳಿಗೆ ವಿದ್ಯಾಸಿರಿ ಯೋಜನೆ ಪುನರ್ ಆರಂಭಿಸಬೇಕು. ಬೆಳೆ ಪರಿಹಾರ ಸಿಗದ ರೈತರಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಬೆಳೆ ವಿಮೆ, ಬರಪೀಡಿತ ಪರಿಹಾರ ಸಿಗದಿರುವ ರೈತರಿಗೆ ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳಬೇಕು. ಒಂದು ವಾರದಲ್ಲಿ ಬೇಡಿಕೆ ಬಗೆಹರಿಸಬೇಕು. ಇಲ್ಲದಿದ್ದರೆ ರಸ್ತೆ ತಡೆದು ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷಕುಮಾರ ಗುದಗೆ, ತಾಲೂಕಾಧ್ಯಕ್ಷ ರುದ್ರಯ್ಯ ಸ್ವಾಮಿ, ಗೌರವಾಧ್ಯಕ್ಷ ಖಾನ್ ಸಾಬ್, ಕಾರ್ಯಾಧ್ಯಕ್ಷ ಕಾಶಿನಾಥ ಬಿರಾದಾರ ಸೇರಿದಂತೆ ಪ್ರಮುಖರಾದ ಕಲ್ಲಪ್ಪಾ ಗೌಡೆ, ಜಯಪ್ರಕಾಶ ಸದಾನಂದೆ, ವೀರೇಶ ಬೋರಗೆ, ಬಾಬು ಗೌರ ಹಾಗೂ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...