ಬರದ ಭೀತಿಯಲ್ಲಿದ್ದ ರೈತರಿಗೆ ಮಳೆ ಸೂಚನೆ

Date:

ಜೂನ್‌ ಮೂರನೇ ವಾರ ಕಳೆದರೂ ರಾಜ್ಯಕ್ಕೆ ಮುಂಗಾರು ಮಾರುತಗಳು ರಾಜ್ಯವನ್ನು ಪ್ರವೇಶಿಸಿಲ್ಲ. ರಾಜ್ಯದ ನಾನಾ ನದಿಗಳು ಬತ್ತಿಹೋಗಿವೆ. ಕಡಿಯುವ ನೀರಿಗೂ ಹಲವೆಡೆ ಹಾಹಾಕಾರ ಆರಂಭವಾಗಿದೆ. ರೈತರು ಮುಂಗಾರು ಬಿತ್ತನೆ ಮಾಡಲಾಗದೆ ಬರದ ಆತಂಕದಲ್ಲಿ ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯೂ ಇನ್ನೆರಡು ದಿನಗಳಲ್ಲಿ ಅಬ್ಬರದ ಮಳೆಯ ನಿರೀಕ್ಷೆಯನ್ನು ಹೆಚ್ಚಿಸಿವೆ.

ರಾಜ್ಯದ ನಾನಾ ಭಾಗಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...