ಮಂಡ್ಯ | ರೈತರಿಗೆ ಬಿತ್ತನೆ ಬೀಜ ಹಂಚಿಕೆ, ರೈತರತ್ನ ಪ್ರಶಸ್ತಿ ವಿತರಣೆ

Date:

ಜಿಎಸ್‌ಎಫ್ ಫೌಂಡೇಶನ್, ಭೂ ಸಿರಿ ರೈತ ಉತ್ಪಾದಕರ ಕಂಪನಿ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ಹಂಚಿಕೆ ಹಾಗೂ ರೈತರತ್ನ ಪ್ರಶಸ್ತಿ ವಿತರಣಾ ಸಮಾರಂಭ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಎಪಿಎಂಸಿ ಅಂಗಳದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಧಾನ್ಯಕ್ಕೆ ಪೂಜೆ ಸಲ್ಲಿಸಿ, ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, “ಪ್ರತಿ ವರ್ಷದಂತೆ ಈ ವರ್ಷವೂ ಸಹ ರೈತರಿಗೆ ಬಿತ್ತನೆ ಬೀಜವನ್ನು ಹಂಚಿಕೆ ಕೆಲಸವನ್ನು ಮಾಡಲಾಗುತ್ತಿದೆ. ಕಡಿಮೆ ಇಳುವರಿ ಹೊಂದಿರುವ ಪ್ರದೇಶದಲ್ಲಿ ಸುಮಾರು 4 ಸಾವಿರ ರೈತರನ್ನು ಆಯ್ಕೆ ಮಾಡಿದ್ದು, ಅವರನ್ನು ಪ್ರೋತ್ಸಾಹಿಸಲು ಪ್ರತಿ ಹೆಕ್ಟೇರ್ ಜಮೀನಿಗೆ 6 ಸಾವಿರ ರೂಪಾಯಿ ಪ್ರೋತ್ಸಾಹ ಹಣವನ್ನು ನೀಡಲಾಗುತ್ತಿದೆ. ಅದರಲ್ಲಿ 4.5 ಸಾವಿರ ಪರಿಕರ ಹಾಗೂ 1.5 ಸಾವಿರ ಹಣ ನೇರವಾಗಿ ರೈತರ ಖಾತೆಗೆ ಹಣ ಹಾಕಲಾಗುತ್ತಿದೆ. ಸರಕಾರದ ಯೋಜನೆಗಳನ್ನು ರೈತರು ಉಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001192138

ಕೊಂಡ ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರಗಳಿಗೆ ಮಾರಾಟಗಾರರಿಂದ ರೈತರು ಅಧಿಕೃತ ರಶೀದಿ ಪಡೆದುಕೊಳ್ಳಬೇಕು. ಯಾವುದಾರರೂ ತೊಡಕು ಇದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದರು.

ಇದೇ ಸಂದರ್ಭದಲ್ಲಿ ರೈತರಿಗೆ ರಾಗಿ ಬಿತ್ತನೆ ಬೀಜಗಳನ್ನು ಹಂಚಿಕೆ ಮಾಡಿ ಪ್ರಗತಿಪರ ರೈತರಿಗೆ ಸನ್ಮಾನಿಸಲಾಯಿತು.

1001192218

ನಂತರ ಮೃತ ರೈತರ ಕುಟುಂಬಕ್ಕೆ ಸರಕಾರದ ವತಿಯಿಂದ 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ಸ್ಟಾರ್ ಚಂದ್ರು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ್. ಸೇರಿದಂತೆ ಪ್ರಗತಿಪರ ರೈತರು ಹಾಗೂ ಕೃಷಿ, ಅರಣ್ಯ, ತೋಟಗಾರಿಕೆ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...