ಬೆಳಗಾವಿ | ಮೀನು ಹಿಡಿಯಲು ಹೋಗಿದ್ದ ತಂದೆ ಮಕ್ಕಳು ನೀರುಪಾಲು: ಮೂವರ ಪೈಕಿ ಇಬ್ಬರ ಶವ ಪತ್ತೆ

Date:

ಬೆಳಗಾವಿ ಜಿಲ್ಲೆಯ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ತಂದೆಯೊಂದಿಗೆ ಮೀನುಗಾರಿಕೆಗೆ ಹೋದಾಗ ನೀರುಪಾಲಾಗಿದ್ದ ಇಬ್ಬರು ಮಕ್ಕಳ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿವೆ.

ಬೆನಕನಹೊಳಿಯ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ನೀರುಪಾಲಾಗಿದ್ದ ತಂದೆ ಮತ್ತು ಇಬ್ಬರು ಮಕ್ಕಳ ಪೈಕಿ ಮಕ್ಕಳಾದ ರಮೇಶ ಅಂಬಲಿ(15), ಯಲ್ಲಪ್ಪ ಅಂಬಲಿ(13) ಮೃತ ದೇಹಗಳು ಪತ್ತೆಯಾಗಿವೆ. ಅವರ ತಂದೆ ಲಕ್ಷ್ಮಣ ಅಂಬಲಿ(45) ಪತ್ತೆಗಾಗಿ ಅಗ್ನಿಶಾಮಕ ದಳ ತಂಡ ಹಾಗೂ ಪೊಲೀಸರಿಂದ ಕಾರ್ಯಾಚರಣೆಯನ್ನು ಮಂಗಳವಾರವೂ ಮುಂದುವರಿಸಲಾಗಿದೆ.

mmm 1
ಲಕ್ಷ್ಮಣ ಅಂಬಲಿ(45)

‘ಲಕ್ಷ್ಮಣ ಅವರು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ರಾತ್ರಿ ಬೈಕ್‌ ನಿಲ್ಲಿಸಿ ತಮ್ಮ ಇಬ್ಬರು ಮಕ್ಕಳೊಂದಿಗೆ ಮೀನುಗಾರಿಕೆಗಾಗಿ ನದಿಗೆ ಇಳಿದಿದ್ದರು. ಆದರೆ, ಸೋಮವಾರ ಬೆಳಿಗ್ಗೆಯವರೆಗೂ ಮನೆಗೆ ಬಂದಿರಲಿಲ್ಲ. ಊರಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿರಬಹುದು ಎಂದು ಕುಟುಂಬಸ್ಥರು ತಿಳಿಸಿದ್ದರು. ಅಲ್ಲಿ ವಿಚಾರಿಸಿದಾಗ ಸುಳಿವು ಸಿಗಲಿಲ್ಲ. ಆಗ ಈ ಅವಘಡ ನಡೆದಿರುವುದು ಗೊತ್ತಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬೆಳಗಾವಿ | ನ.20ರಂದು ಲಿಂಗತ್ವ ಅಲ್ಪಸಂಖ್ಯಾತರಿಂದ ಸ್ವಾಭಿಮಾನದ ನಡಿಗೆ

‘ಕುಟುಂಬದ ಸದಸ್ಯರಿಗೆ ಸೂಕ್ತ ಪರಿಹಾರ ನೀಡಲಾಗುವುದು’ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...