ಚಿಕ್ಕಮಗಳೂರು | ಮಗಳ ಸಂಭ್ರಮದ ಮಧ್ಯೆಯೇ ಅಪ್ಪ ಮೃತ್ಯು: ವಿಷಯ ಮುಚ್ಚಿಟ್ಟು ಮದುವೆ ಮಾಡಿಸಿದ ಸಂಬಂಧಿಕರು!

Date:

ಅಪಘಾತದಲ್ಲಿ ತಂದೆ ಮೃತಪಟ್ಟಿದ್ದು, ವಿಷಯವೇ ಗೊತ್ತಿಲ್ಲದ ಮಗಳು ಹಸೆಮಣೆ ಏರಿದ ಮನಕಲಕುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದೆ.

ಭಾನುವಾರ ಹಾಗೂ ಸೋಮವಾರ ತರೀಕೆರೆ ಪಟ್ಟಣದ ನಾಗಪ್ಪ ಕಾಲೋನಿ ನಿವಾಸಿ ಚಂದ್ರು ಅವರ ಮಗಳ ಮದುವೆ ನಿಶ್ಚಯವಾಗಿತ್ತು. ಆದರೆ ಆಪ್ತಮಿತ್ರನಿಗೆ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗಮಧ್ಯೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಂಬಂಧಿಕರು ತಂದೆಯ ಸಾವಿನ ಸುದ್ದಿಯನ್ನು ಮುಚ್ಚಿಟ್ಟು ಮದುವೆ ಕಾರ್ಯ ಮಾಡಿ ಮುಗಿಸಿದ್ದಾರೆ.

ಚಂದ್ರು ಅವರು ತಮ್ಮ ಕೊನೆಯ ಮಗಳ ಮದುವೆ ಎಂದು ಮದುವೆ ಕಾರ್ಯವನ್ನು ಅದ್ಧೂರಿಯಾಗಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಆದರೆ, ಮಗಳ ಮದುವೆ ಆರತಕ್ಷತೆ ದಿನ ಆತ್ಮೀಯ ಸ್ನೇಹಿತನಿಗೆ ಲಗ್ನ ಪತ್ರಿಕೆ ಕೊಟ್ಟಿಲ್ಲವೆಂದು ತರೀಕೆರೆ ತಾಲೂಕು ಹುಲಿ ತಿಮ್ಮಾಪುರಕ್ಕೆ ಹೋಗಿದ್ದರು. ಲಗ್ನಪತ್ರಿಕೆ ನೀಡಿ ಮನೆಗೆ ಬರುವ ವೇಳೆ ಮಾರ್ಗ ಮಧ್ಯೆ ಬೈಕ್ ಅಪಘಾತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
tarikere 1

ಅಪಘಾತದಿಂದ ತೀವ್ರ ಗಾಯಗೊಂಡಿದ್ದ ಚಂದ್ರು ಅವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಚಂದ್ರು ಭಾನುವಾರ ಮಧ್ಯಾಹ್ನವೇ ಮೃತಪಟ್ಟಿದ್ದರು.

ಚಂದ್ರು ಮೃತಪಟ್ಟಿರುವ ವಿಷಯ ಮನೆಯವರಿಗೆ ತಿಳಿಸಿದರೆ ಮದುವೆ ಕಾರ್ಯ ನಿಲ್ಲುತ್ತದೆ ಎಂದು ಕುಟುಂಬಸ್ಥರು ಚಂದ್ರು ಪತ್ನಿ ಮತ್ತು ಮಗಳು ದೀಕ್ಷಾ ಅವರಿಗೆ ತಿಳಿಸಿಲ್ಲ. ‘ಅಪಘಾತವಾಗಿ ಆಸ್ಪತ್ರೆಯಲ್ಲಿದ್ದಾರೆ, ಜೀವಕ್ಕೇನೂ ತೊಂದರೆ ಇಲ್ಲ, ಚೆನ್ನಾಗಿದ್ದಾನೆ’ ಎಂದು ಹೇಳಿ ಭಾನುವಾರ ಆರತಕ್ಷತೆ ಮುಗಿಸಿ, ಸೋಮವಾರ ನಿಗದಿಯಾಗಿದ್ದ ಮುಹೂರ್ತದಲ್ಲಿ ಮದುವೆ ಕಾರ್ಯವನ್ನೂ ಮಾಡಿ ಮುಗಿಸಿದ್ದಾರೆ.

ಮದುವೆ ಕಾರ್ಯ ಮುಗಿಯುತ್ತಿದ್ದಂತೆ ಕುಟುಂಬಸ್ಥರು ಚಂದ್ರು ನಿಧನವಾಗಿರುವ ಸುದ್ದಿಯನ್ನು ಪತ್ನಿ ಹಾಗೂ ಮದುಮಗಳು ದೀಕ್ಷಾಗೆ ತಿಳಿಸಿದ್ದಾರೆ.

nnn

ಈ ವೇಳೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಬೀರೂರು ಪಟ್ಟಣದ ತರಳಬಾಳು ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯ ಮುಗಿಸಿಕೊಂಡು ಮನೆಗೆ ಬರುವ ವೇಳೆಗೆ ತಂದೆಯ ಮೃತದೇಹ ಕೂಡ ಮನೆಗೆ ಬಂದಿತ್ತು. ಈ ದೃಶ್ಯವನ್ನು ಕಂಡ ನೆರೆದಿದ್ದ ಸ್ಥಳೀಯ ಜನರು ಕಣ್ಣೀರು ಹಾಕಿದ್ದಾರೆ. ಇಡೀ ಕುಟುಂಬವೇ ಶೋಕ ಸಾಗರದಲ್ಲಿ ಮುಳುಗಿತ್ತು.

ಇದನ್ನು ಓದಿದ್ದೀರಾ? ಮಂಗಳೂರು | ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮೃತ ಚಂದ್ರು ಅವರಿಗೆ ಮೂರು ಜನ ಹೆಣ್ಣುಮಕ್ಕಳು. ಮೊದಲ ಮಗಳ ಮದುವೆ ವೇಳೆ ಕೋವಿಡ್‌ನಿಂದಾಗಿ ಸರಳವಾಗಿ ಮದುವೆ ಮಾಡಿದ್ದರು. ಹಾಗಾಗಿ ಕೊನೆಯ ಮಗಳ ಮದುವೆಯನ್ನು ಅದ್ಧೂರಿಯಾಗಿ ಮಾಡಬೇಕೆಂದು ಶಕ್ತಿಮೀರಿ ಸಿದ್ಧತೆಗಳನ್ನು ಮಾಡಿ ಕೊಂಡಿದ್ದರು. ಆದರೆ, ವಿಧಿ ಆಟವೇ ಬೇರೆಯಾಗಿತ್ತು. ಮಗಳನ್ನು ಸಂತೋಷವಾಗಿ ಧಾರೆ ಎರೆದುಕೊಡಬೇಕಾದ ಅಪ್ಪ ಮಗಳ ಕೊನೆಯ ಕ್ಷಣದಲ್ಲಿ ಹಾಗೂ ಮದುವೆಗೂ ಮುಂಚೆಯೇ ಸಾವಿನ ಮನೆ ಸೇರುವಂತಾಗಿದ್ದು ವಿಧಿಯಾಟವೇ ಸರಿ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...