ಫೆ.26ರಂದು ರಾಜಧಾನಿಯಲ್ಲಿ ಸಂಭ್ರಮದಿಂದ ನಡೆಯಲಿದೆ ಬೆಂಗಳೂರು ಬ್ಯಾರಿಗಳ ‘ಬ್ಯಾರಿ ಕೂಟ’

Date:

ಬೆಂಗಳೂರಿನಲ್ಲಿ ನಾನಾ ಕಾರಣಗಳಿಗಾಗಿ ನೆಲೆಸಿರುವ ಕರಾವಳಿಯ ಮುಸ್ಲಿಂ ಸಮುದಾಯವಾಗಿರುವ ‘ಬ್ಯಾರಿ’ಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಎಂಬ ಯುವಕರ ಸಂಘಟನೆಯು ಇದೀಗ ದೊಡ್ಡ ಸಮ್ಮೇಳನವೊಂದಕ್ಕೆ ಕೈ ಹಾಕಿದ್ದು, ಪ್ಯಾಲೇಸ್‌ ಗ್ರೌಂಡ್‌ನಲ್ಲಿ ಫೆಬ್ರವರಿ 26ರಂದು ‘ಬ್ಯಾರಿ ಕೂಟ’ವನ್ನು ಆಯೋಜಿಸಿದ್ದು, ಒಂದು ದಿನವನ್ನು ಅದಕ್ಕಾಗಿಯೇ ಮೀಸಲಿಟ್ಟು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

“ಇದ್ ಬೆಂಗಳೂರ್ ಬ್ಯಾರಿಙಲೋ ಗಮ್ಮತ್ತ್ …” ಎಂಬ ಧ್ಯೇಯವಾಕ್ಯವನ್ನಿಟ್ಟುಕೊಂಡು ಬ್ಯಾರಿ ಸಮುದಾಯದ ಯುವಕರೇ ಕಟ್ಟಿಕೊಂಡಿರುವ ಬ್ಯಾರೀಸ್ ಸೆಂಟ್ರಲ್ ಕಮಿಟಿಯವರು ಬುಧವಾರದಂದು ರಾಜಧಾನಿಯ ಪ್ಯಾಲೇಸ್‌ ಗ್ರೌಂಡ್‌ನಲ್ಲಿರುವ ಶೃಂಗಾರ್ ಪ್ಯಾಲೇಸ್ ಮೈದಾನದಲ್ಲಿ ಈ ಕೂಟವನ್ನು ಹಮ್ಮಿಕೊಂಡಿದ್ದಾರೆ.

ಬ್ಯಾರಿ ಕೂಟದ ಭಾಗವಾಗಿ ರಕ್ತದಾನ ಶಿಬಿರ, ಬಿಝ್‌ಟೆಕ್ ಮೀಟ್, ಯಾಸಿರ್ ಕಲ್ಲಡ್ಕರವರು ಸಂಗ್ರಹಿಸಿದ ಹಳೆಯ ವಸ್ತುಗಳ ವಿಶೇಷ ಪ್ರದರ್ಶನ, ಕುಕ್ಕಿಂಗ್ ವಿದೌಟ್ ಫೈರ್, ಮಕ್ಕಳಿಗಾಗಿ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ಕವಿಗೋಷ್ಠಿಯನ್ನು ಕೂಡ ಹಮ್ಮಿಕೊಳ್ಳಲಾಗಿದೆ. ಈ ಎಲ್ಲ ಕಾರ್ಯಕ್ರಮದಲ್ಲಿ ಆಯಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಬ್ಯಾರಿ ಸಮುದಾಯದ ಸಾಧಕರು ಭಾಗವಹಿಸಲಿದ್ದಾರೆ. ಅಲ್ಲದೇ, ವಿಶೇಷ ಆಕರ್ಷಣೆಯಾಗಿ ಕರಾವಳಿಯ ತಿಂಡಿ ತಿನಿಸುಗಳು ಇರಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಾಂಗ್ಲಾದೇಶದ ಖ್ಯಾತ ಚಿತ್ರ ನಿರ್ದೇಶಕ ಝಾಹಿದುರ್ ರಹೀಮ್ ಅಂಜನ್ ಬೆಂಗಳೂರಿನಲ್ಲಿ ನಿಧನ

ಬೆಂಗಳೂರಿನಲ್ಲಿ ನಾನಾ ಕಾರಣಗಳಿಗಾಗಿ ನೆಲೆಸಿರುವ ಎಲ್ಲರನ್ನೂ ಒಂದುಗೂಡಿಸುವ ನಿಟ್ಟಿನಲ್ಲಿ ಆರಂಭಿಸಿದ ಯುವಕರ ಸಂಘಟನೆಯೇ ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು. ಇದು ಬೆಂಗಳೂರಿನಲ್ಲಿ ವಾಸಿಸುವ ಬ್ಯಾರಿಗಳ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನ ಇಟ್ಟು ಸ್ಥಾಪಿಸಲ್ಪಟ್ಟ ಒಂದು ಚಳುವಳಿಯಾಗಿದೆ. ಇಲ್ಲಿ ಪಕ್ಷ, ಸಂಘಟನಾ, ಮತ್ತು ಆಶಯ ಭೇದಭಾವಗಳಿಲ್ಲ ಎಂದು ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ಅಧ್ಯಕ್ಷರಾದ ಶಬೀರ್ ಬ್ರಿಗೇಡ್ ತಿಳಿಸಿದ್ದಾರೆ.

ಬ್ಯಾರಿ ಕೂಟಕ್ಕೆ ಸ್ಪೀಕರ್ ಯು ಟಿ ಖಾದರ್ ಸಹಿತ ಹಲವು ಮಂದಿ ಗಣ್ಯರು ಭಾಗವಹಿಸಲಿದ್ದಾರೆ. ಬ್ಯಾರಿ ಕೂಟದಲ್ಲಿ ಸಾಧ್ಯವಿರುವ ಎಲ್ಲ ಬೆಂಗಳೂರಿನ ಬ್ಯಾರಿಗಳು ತಮ್ಮ ಕೆಲಸ ಕಾರ್ಯಗಳನ್ನು ಒಂದು ದಿನ ಬದಿಗಿಟ್ಟು ಭಾಗವಹಿಸಬೇಕು. ಒಂದೇ ಸಮುದಾಯದ ಜನರನ್ನು ಒಟ್ಟು ಸೇರಿಸಲು ನಮ್ಮ ಪ್ರಯತ್ನಕ್ಕೆ ಸಾಥ್ ನೀಡಬೇಕು. ಎಂದು ಶಬೀರ್ ಬ್ರಿಗೇಡ್ ವಿನಂತಿಸಿಕೊಂಡಿದ್ದಾರೆ.

WhatsApp Image 2025 02 25 at 1.52.32 AM
WhatsApp Image 2025 02 25 at 8.21.19 AM 1

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...