ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣ: ಮೈಸೂರಿನಲ್ಲಿ 7 ಮಂದಿ ಬಂಧನ

Date:

ಡೆಕಾಯ್ ಕಾರ್ಯಾಚರಣೆ ಮೂಲಕ ಮಂಡ್ಯ ಡಿಎಚ್‌ಒ ಡಾ ಕೆ ಮೋಹನ್ ನೇತೃತ್ವದ ತಂಡ ಜಾಲವನ್ನು ಬಯಲಿಗಳೆದಿದೆ.

ರಾಜ್ಯದಲ್ಲಿ ಮತ್ತೆ ಭ್ರೂಣ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸದ್ದು ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರೂರಾದ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಡೆಕಾಯ್ ಕಾರ್ಯಾಚರಣೆ ನಡೆಸಿ ಈ ದಂಧೆಯನ್ನು ಬಯಲಿಗೆಳೆಯಲಾಗಿದೆ. ವರುಣಾ ಕ್ಷೇತ್ರದ ತಿ. ನರಸೀಪುರ ತಾಲೂಕಿನ ಹುನಗನಹಳ್ಳಿ ಗ್ರಾಮದ ಫಾರಂ ಹೌಸ್‌ವೊಂದರಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ.

ಈ ಹಿಂದೆ ಮಂಡ್ಯದಲ್ಲಿ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಜಾಲವು ಭಾರಿ ಸದ್ದು ಮಾಡಿತ್ತು. ಇದಾದ ಬಳಿಕ ಹಲವು ಜಿಲ್ಲೆಗಳಲ್ಲಿ ಭ್ರೂಣ ಲಿಂಗ ಪತ್ತೆ ಮೇಲೆ ನಿಗಾ ಇಡಲಾಗಿದೆ. ಮೈಸೂರಿನಲ್ಲೂ ಇದೇ ರೀತಿ ಸರ್ಕಾರಿ ಆಸ್ಪತ್ರೆಯಲ್ಲಿ ನೋಂದಣಿ ಮಾಡಿಸಿ ‘ತಾಯಿ ಕಾರ್ಡ್’ ಪಡೆಯುತ್ತಿದ್ದವರ ಮೇಲೆ ಗಮನ ಇಡಲಾಗಿತ್ತು. ಕೊನೆಗೆ ಡೆಕಾಯ್ ಕಾರ್ಯಾಚರಣೆ ಮೂಲಕ ಈ ಜಾಲವನ್ನು ಪತ್ತೆ ಹಚ್ಚಲಾಗಿದೆ.

ಇದನ್ನು ಓದಿದ್ದೀರಾ? ಮೈಸೂರು | ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ; ಮಾತಾ ಆಸ್ಪತ್ರೆಯ ವಿದ್ಯುತ್​ ಸಂಪರ್ಕ ಕಡಿತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಡೆಕಾಯ್ ಕಾರ್ಯಾಚರಣೆ?

ಹೆಣ್ಣು ಭ್ರೂಣ ಲಿಂಗ ಪತ್ತೆ ಜಾಲ ಪತ್ತೆಗಾಗಿ ಆರೋಗ್ಯ ಇಲಾಖೆಯೇ ಗರ್ಭಿಣಿಯನ್ನು ಕಳುಹಿಸಿ ‘ರೆಡ್ ಹ್ಯಾಂಡ್’ ಆಗಿ ಆರೋಪಿಗಳನ್ನು ಹಿಡಿಯುವುದೇ ಡೆಕಾಯ್ ಕಾರ್ಯಾಚರಣೆ. ಮೈಸೂರಿನಲ್ಲಿಯೂ ಇದೇ ರೀತಿ ಮಾಡಲಾಗಿದೆ. ಮಂಡ್ಯ ಡಿಎಚ್‌ಒ ಡಾ ಕೆ ಮೋಹನ್ ನೇತೃತ್ವದ ತಂಡ ಮಾಹಿತಿ ಮೇರೆಗೆ ಕಳೆದ ಎರಡು ತಿಂಗಳಿನಿಂದ ನಿಗಾ ಇಟ್ಟಿತ್ತು. ಬಳಿಕ ಗರ್ಭಿಣಿಯೊಬ್ಬರನ್ನು ಕಳುಹಿಸಿ ಡೆಕಾಯ್ ಕಾರ್ಯಾಚರಣೆ ನಡೆಸಲಾಗಿದೆ.

ಈ ತಂಡವು ಮೂರನೇ ಬಾರಿಗೆ ಡೆಕಾಯ್ ಕಾರ್ಯಾಚರಣೆ ನಡೆಸಿದೆ. ಈ ಹಿಂದೆ 2024ರ ಆಗಸ್ಟ್‌ನಲ್ಲಿ ನಾಗಮಂಗಲದಲ್ಲಿಯೂ ಇದೇ ರೀತಿ ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿತ್ತು. ಅದಾದ ಬಳಿಕ ಬಳ್ಳಾರಿ ಜಿಲ್ಲೆಯಲ್ಲಿಯೂ ಭ್ರೂಣ ಲಿಂಗ ಪತ್ತೆ, ಭ್ರೂಣ ಹತ್ಯೆ ಜಾಲವನ್ನು ಬಯಲಿಗೆಳೆಯಲಾಗಿತ್ತು.

ಇನ್ನು ಮಂಡ್ಯ ಜಿಲ್ಲೆಯ ಜಾಲವೇ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಈ ದಂಧೆಯನ್ನು ನಡೆಸುತ್ತಿದೆ ಎನ್ನಲಾಗಿದೆ. ಹುಣಗನಹಳ್ಳಿಯಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ನಡೆಸುತ್ತಿದ್ದ ತಂಡವು ದಿನಕ್ಕೆ ಒಂದರಿಂದ ಎರಡು ಲಕ್ಷ ರೂಪಾಯಿ ಆಸುಪಾಸಿನಲ್ಲಿ ವಹಿವಾಟು ನಡೆಸುತ್ತಿತ್ತು ಎನ್ನಲಾಗಿದೆ.

ಮಂಡ್ಯ ಭ್ರೂಣ ಲಿಂಗ ಪತ್ತೆ ಪ್ರಕರಣ

ಮಂಡ್ಯದಲ್ಲಿ ಅಕ್ರಮ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ನಡೆಸುತ್ತಿದ್ದ ಜಾಲವನ್ನು ಆರೋಗ್ಯ ಇಲಾಖೆ ಹಾಗೂ ಪೊಲೀಸರು ನಡೆಸಿದ ಕಾರ್ಯಾಚರಣೆಗಳ ಮೂಲಕ ಬಯಲಿಗೆಳೆಯಲಾಗಿತ್ತು. ಇದಾದ ಬಳಿಕ ಹಲವು ತಿಂಗಳುಗಳಿಂದ ನಿರಂತರವಾಗಿ ರಾಜ್ಯದಾದ್ಯಂತ ಅಲ್ಲಲ್ಲಿ ಕಾರ್ಯಾಚರಣೆ, ತನಿಖೆ ನಡೆಸಲಾಗುತ್ತಿದೆ. ಮಂಡ್ಯದ ಜಾಲವು ಆಂಧ್ರಪ್ರದೇಶದೊಂದಿಗೆ ನಂಟು ಹೊಂದಿದೆ ಎಂಬುದು ತನಿಖೆ ವೇಳೆ ತಿಳಿದುಬಂದಿದ್ದು, ಆಂಧ್ರ ಪೊಲೀಸರ ಸಹಾಯದೊಂದಿಗೆ ಅಲ್ಲಿಯೂ ಕಾರ್ಯಾಚರಣೆ ನಡೆಸಲಾಗಿದೆ.

ಇದನ್ನು ಓದಿದ್ದೀರಾ? ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಪತ್ತೆ, ತೋಟದ ಮನೆಗಳಲ್ಲೂ ವಿಸ್ತರಣೆ

ಈ ಜಾಲದಲ್ಲಿ ವೈದ್ಯರು, ನರ್ಸ್‌ಗಳು, ಮಧ್ಯವರ್ತಿಗಳು ಸೇರಿದಂತೆ ಹಲವು ಜನರು ಭಾಗಿಯಾಗಿದ್ದು ಈಗಾಗಲೇ ಹಲವು ಮಂದಿಯನ್ನು ಬಂಧಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ಅಕ್ರಮ ಭ್ರೂಣ ಲಿಂಗ ಪತ್ತೆ ಪರೀಕ್ಷೆಗಳನ್ನು ಆಸ್ಪತ್ರೆಗಳು, ನರ್ಸಿಂಗ್ ಹೋಮ್‌ಗಳಲ್ಲಿ ನಡೆಸಿದ್ದರೆ, ಇನ್ನು ಕೆಲವು ಪ್ರಕರಣಗಳಲ್ಲಿ ದೂರದ ಫಾರ್ಮ್‌ಹೌಸ್‌ಗಳಲ್ಲಿ ಅಕ್ರಮ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು.

ರಾಜ್ಯದಲ್ಲಿ ಲಿಂಗಾನುಪಾತ ಕುಸಿತ

2021ರಲ್ಲಿ ರಾಜ್ಯದಲ್ಲಿ ಪ್ರತಿ 1,000 ಪುರುಷರಿಗೆ 929 ಮಹಿಳೆಯರ ಲಿಂಗಾನುಪಾತವಿತ್ತು. ಆದರೆ 2022ರಲ್ಲಿ ಲಿಂಗಾನುಪಾತವು 929ಕ್ಕೆ ಇಳಿಕೆಯಾಗಿದೆ. ಇನ್ನು 2011ರಲ್ಲಿ ರಾಜ್ಯದಲ್ಲಿ ಲಿಂಗಾನುಪಾತ 1,000 ಪುರುಷರಿಗೆ 973 ಮಹಿಳೆಯರು ಆಗಿತ್ತು. ರಾಷ್ಟ್ರೀಯ ಸರಾಸರಿ 943ಕ್ಕಿಂತ ಹೆಚ್ಚಾಗಿತ್ತು. ಆದರೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಲಿಂಗಾನುಪಾತದಲ್ಲೂ ವ್ಯತ್ಯಾಸ ಕಂಡುಬಂದಿದೆ. 2024ರ ಅಂತಿಮ ಮತದಾರರ ಪಟ್ಟಿಯ ಪ್ರಕಾರ ರಾಜ್ಯದಲ್ಲಿ ಮತದಾರರ ಲಿಂಗಾನುಪಾತ 997(ಮಹಿಳೆಯರು) ಏರಿಕೆಯಾಗಿದೆ. ಆದರೆ ಇದು ಒಟ್ಟಾರೆ ಲಿಂಗಾನುಪಾತವಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...