ಮತ್ತೆ ‘ಭ್ರೂಣಹತ್ಯೆ’ ಸದ್ದು; ರಾಮನಗರ ಪೊಲೀಸರ ವಿರುದ್ಧ ಮೋದಿಗೆ ಪತ್ರ ಬರೆದ ಯುವತಿ

Date:

ಭ್ರೂಣ ಹತ್ಯೆ ಮಾಡಿಸಿ ತನ್ನ ಪ್ರಿಯಕರ ಪರಾರಿಯಾಗಿದ್ದಾನೆ. ಆತನ ವಿರುದ್ಧ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿ ದಯಾನಂದ (ಯುವತಿಯ ಪ್ರಿಯಕರ)ನಿಂದ ಪೊಲೀಸರು ಲಂಚ ಪಡೆದು, ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿದ್ದಾರೆ. ದಯಾನಂದ ಮತ್ತು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಮನಗರ ಜಿಲ್ಲೆಯ ಯುವತಿಯೊಬ್ಬರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ತನಗೆ ನ್ಯಾಯ ದೊರೆಯದಿದ್ದಾರೆ, ಜಿಲ್ಲಾ ವರಿಷ್ಠಾಧಿಕಾರಿ ಕಚೇರಿ ಎದುರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರದಲ್ಲಿ ಯುವತಿ ಎಚ್ಚರಿಕೆ ನೀಡಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ಮೂಲದ ಯುವತಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಆರೋಪಿ ದಯಾನಂದ ತನ್ನನ್ನು ಪ್ರೀತಿಸಿ, ವಂಚಿಸಿದ್ದಾನೆ. ನಾನು ಗರ್ಭಿಣಿಯಾದ ಬಳಿಕ ಗರ್ಭಪಾತ ಮಾಡಿಸಿ ಪರಾರಿಯಾಗಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳದೆ, ನನಗೆ ನ್ಯಾಯ ಕೊಡಿಸದೆ ಪೊಲೀಸರು ವಂಚಿಸಿದ್ದಾರೆ. ಆರೋಪಿ ದಯಾನಂದ ಮತ್ತು ಪೊಲೀಸರು – ಇಬ್ಬರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

“ಆರೋಪಿ ವಿರುದ್ಧ ರಾಮನಗರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದರೂ, ಪೊಲೀಸರು ದೂರು ಸ್ವೀಕರಿಸಿಲ್ಲ. ದಯಾನಂದನ ಸ್ನೇಹಿತ ದೂರು ಕೊಡಿಸುತ್ತೇನೆಂದು ಹೇಳಿ ನನ್ನಿಂದ 1.4 ಲಕ್ಷ ರೂ. ಲಂಚ ಕೊಡಿಸಿದ್ದಾನೆ. ಲಂಚ ಪಡೆದ ಮೇಲೂ ಪೊಲೀಸರು ಕ್ರಮ ಕೈಗೊಂಡಿಲ್ಲ. ನಾಲ್ಕು ತಿಂಗಳುಗಳಿಂದ ಪೊಲೀಸ್‌ ಠಾಣೆಗೆ ಅಲೆದು ಬೇಸತ್ತಿದ್ದೇನೆ” ಎಂದು ಯುವತಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ವರ್ಷ ಹೆಣ್ಣು ಭ್ರೂಣ ಹತ್ಯೆಯ ಜಾಲವನ್ನು ಪೊಲೀಸರು ಬೇಧಿಸಿದ್ದರು. ಮಂಡ್ಯ ಬಳಿಯ ಆಲೆ ಮನೆಯಲ್ಲಿ ಭ್ರೂಣ ಹತ್ಯೆ ನಡೆಸುತ್ತಿದ್ದ ಆರೋಪಿಗಳ ತಂಡವನ್ನು ಬೆಂಗಳೂರು, ಮೈಸೂರು ಹಾಗೂ ಮಂಡ್ಯದಲ್ಲಿ 2023ರ ಅಕ್ಟೋಬರ್‌ನಲ್ಲಿ ಪೊಲೀಸರು ಬಂಧಿಸಿದ್ದರು. ಬೆಂಗಳೂರು-ಮೈಸೂರಿನಲ್ಲಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಕೆಲವು ವೈದ್ಯರೂ ಸೇರಿದಂತೆ ಹಲವು ಆರೋಪಿಗಳು 2023ರ ಆಗಸ್ಟ್‌, ಸೆಪ್ಟೆಂಬರ್, ಅಕ್ಟೋಬರ್ – ಮೂರು ತಿಂಗಳಲ್ಲಿಯೇ 242 ಹೆಣ್ಣು ಭ್ರೂಣಹತ್ಯೆ ಮಾಡಿದ್ದಾರೆ. ಪ್ರತಿ ವರ್ಷ ಕನಿಷ್ಟ 1,000 ಭ್ರೂಣಹತ್ಯೆ ಮಾಡಿದ್ದಾರೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದರು.

ಮೈಸೂರು ಮತ್ತು ಬೆಂಗಳೂರಿನಲ್ಲಿ ಅಕ್ರಮವಾಗಿ ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದ ಪೊಲೀಸರು, ಆಸ್ಪತ್ರೆಗಳಿಗೆ ಬೀಗ ಜಡಿದಿದ್ದರು. ಹಲವು ವೈದ್ಯರು, ದಾದಿಯನ್ನು ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...