ಚಿಕ್ಕಬಳ್ಳಾಪುರ | ಭೂಸುರಕ್ಷಾ ಯೋಜನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ

Date:

ಭೂ ಸುರಕ್ಷಾ ಯೋಜನೆಯಿಂದ ರೈತರು, ಸಾರ್ವಜನಿಕರಿಗೆ ಸುಮಾರು 150 ವರ್ಷದ ಹಳೆಯ ದಾಖಲೆಗಳು ಸ್ಕ್ಯಾನ್ ಆಗಿ ಕಂಪ್ಯೂಟರೀಕರಣಗೊಂಡು ಆನ್ ಲೈನ್ ನಲ್ಲಿ ಲಭ್ಯವಾಗಲಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಬುಧವಾರ ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಭೂ ಸುರಕ್ಷಾ ಯೋಜನೆಯಡಿಯಲ್ಲಿ ಕಂದಾಯ ದಾಖಲೆಗಳ ಗಣಕೀಕರಣ ಕಾರ್ಯಕ್ರಮಕ್ಕೆ ಚಾಲನಾ ನೀಡಿ ಅವರು ಮಾತನಾಡಿದರು.

ಕಳೆದ ಮಾರ್ಚ್ 2024 ರಲ್ಲಿ ರಾಜ್ಯ ಕಂದಾಯ ಇಲಾಖೆ ತಾಲ್ಲೂಕು ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ ಹಾಗೂ ಭೂಮಾಪನ ಇಲಾಖೆಯ ಸುಮಾರು 150 ವರ್ಷಗಳ ಎಲ್ಲಾ ದಾಖಲೆಗಳನ್ನು ಕಂಪ್ಯೂಟರ್ ನಲ್ಲಿ ಸ್ಕ್ಯಾನ್ ಮಾಡಿ ಶಾಶ್ವತವಾಗಿ ಭದ್ರ ಮಾಡುವ ಹಾಗೂ ಆ ಎಲ್ಲಾ ದಾಖಲೆಗಳು ಆನ್ ಲೈನ್ ನಲ್ಲಿ ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಾಗುವಂತೆ ಮಾಡುವ ನಿಟ್ಟಿನಲ್ಲಿ ಭೂ ಸುರಕ್ಷಾ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಆರಂಭದಲ್ಲಿ ಪೈಲಟ್ ಯೋಜನೆಯ ಭಾಗವಾಗಿ ಪ್ರತಿ ಜಿಲ್ಲೆಯಿಂದ ಒಂದು ತಾಲ್ಲೂಕನ್ನು ಆಯ್ಕೆ ಮಾಡಿಕೊಂಡು ಒಟ್ಟು 31 ತಾಲ್ಲೂಕುಗಳಲ್ಲಿ ಯೋಜನೆಯನ್ನು ಜಾರಿ ಮಾಡಲಾಗಿತ್ತು. ಈಗ ಉಳಿದ 209 ತಾಲ್ಲೂಕುಗಳಲ್ಲಿ ಭೂಸುರಕ್ಷಾ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Revenue Minister 10

ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿ, ಭೂ‌ಮಾಪನ‌ ಇಲಾಖೆ ಹಾಗೂ ಕಚೇರಿಯ ಎ ಮತ್ತು ಬಿ ವರ್ಗದ ಕಡತಗಳ ಎಲ್ಲಾ ದಾಖಲೆಗಳನ್ನು ಕಂಪ್ಯೂಟರ್ ನಲ್ಲಿ ಸ್ಕ್ಯಾನ್ ಮಾಡಿ ಆ ಎಲ್ಲಾ ದಾಖಲೆಗಳು ಆನ್ ಲೈನ್ ಮೂಲಕ ಎಲ್ಲಾ ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಾಗುವಂತೆ ಮಾಡಲಾಗಿದೆ. ಈ ದಾಖಲೆಗಳನ್ನು ಸಂಬಂಧಿಸಿದ ಕಚೇರಿಗಳಿಗೆ ಹೋಗದೆ ಇಂದು ಆರ್.ಟಿ.ಸಿ ಪಹಣಿಯನ್ನು ಆನ್ಲೈನ್ ನಲ್ಲಿ ಪಡೆಯುವ ವ್ಯವಸ್ಥೆಯಂತೆ ಮನೆಯಲ್ಲೇ ಕುಳಿತು ನೋಡಲು, ಮುದ್ರಿಸಿಕೊಳ್ಳಲು ಹಾಗೂ ದೃಢೀಕೃತ ಪ್ರತಿಗಳನ್ನು ಪಡೆಯಲು ಅವಕಾಶವಾಗಲಿದೆ. ಇದರಿಂದ ಶಿಥಿಲಾವಸ್ಥೆಯಲ್ಲಿರುವ ಅತ್ಯಂತ ಹಳೆಯ ದಾಖಲೆಗಳೂ ಸೇರಿದಂತೆ ವಿವಿಧ ದಾಖಲೆಗಳು ಆನ್ ಲೈನ್ ನಲ್ಲಿ ಸಾರ್ವಜನಿಕರಿಗೆ ಮುಕ್ತವಾಗಿ ಲಭ್ಯವಾಗಲಿದ್ದು, ದಾಖಲೆಗಳು ಶಾಶ್ವತವಾಗಿ ಬಂದೋ ಬಸ್ತ್ ಆಗಲಿವೆ ಎಂದರು. 

ಭೂ ಸುರಕ್ಷಾ ಯೋಜನೆಯ ಮೂಲಕ ರೈತರಿಗೆ ಜಮೀನಿನ‌ ಮಾಲೀಕತ್ವದ ಗ್ಯಾರಂಟಿಯನ್ನು ನೀಡಲು ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಈಗಾಗಲೇ 31 ತಾಲ್ಲೂಕುಗಳಲ್ಲಿ 08 ತಿಂಗಳ ಹಿಂದೆ ಆರಂಭವಾದ ಪೈಲಟ್ ಕಾರ್ಯಕ್ರಮದಡಿ 14,87000  ಕಡತಗಳನ್ನು ಸ್ಕ್ಯಾನ್ ಮಾಡಿ ಒಟ್ಟು 7 ಕೋಟಿ 95ಲಕ್ಷ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. ಉಳಿದ 209 ತಾಲ್ಲೂಕುಗಳ ಒಟ್ಟು 150 ಕೋಟಿ ಪುಟಗಳ ದಾಖಲೆಗಳನ್ನು ಸ್ಕ್ಯಾನ್ ಮಾಡುವ ಗುರಿ ಹೊಂದಲಾಗಿದೆ. ಈ ಮಹತ್ವದ ಯೋಜನೆಯಿಂದ ತಾಲ್ಲೂಕು ಕಚೇರಿಯ ದಾಖಲೆಗಳ ಕೊಠಡಿಯ ಸಿಬ್ಬಂದಿ ಮೇಲಿನ ಕೆಲಸದ ಒತ್ತಡ ಕಡಿಮೆಯಾಗಲಿದೆ. ರೈತರಿಗೆ ಜಮೀನಿನ‌ ಮಾಲೀಕತ್ವದ ದಾಖಲೆಗಳು ಸುರಕ್ಷಿತವಾಗಿ ಮತ್ತು ಸುಲಭವಾಗಿ ಲಭ್ಯವಾಗುತ್ತವೆ. ಜೊತೆಗೆ ಹಳೆಯ ದಾಖಲೆಗಳು ಶಾಶ್ವತವಾಗಿ ಮತ್ತು ಬಂದೋಬಸ್ತ್ ಆಗಿ ಉಳಿಯುತ್ತವೆ, ಅಲ್ಲದೇ ದಾಖಲೆಗಳ ಕೊಠಡಿಯ ದಾಖಲೆಗಳು ನಕಲಿ ಆಗುವುದು, ಕಳೆದು ಹೋಗುವುದು ತಪ್ಪುತ್ತದೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ತಹಸಿಲ್ದಾರ್ ನ್ಯಾಯಾಲಯದಲ್ಲಿ 3 ತಿಂಗಳಿಗೂ ವಾಯಿದೆ ಮೀರಿದ 10,774 ಪ್ರಕರಣಗಳು ರಾಜ್ಯದಲ್ಲಿ ಬಾಕಿ ಇದ್ದವು, ಪ್ರಸ್ತುತ ಅವುಗಳನ್ನು ವಿಲೆ ಮಾಡಿ 409 ಪ್ರಕರಣಗಳಿಗೆ ಇಳಿಕೆ ಮಾಡಲಾಗಿದೆ, ಅದೇ ರೀತಿ ಉಪವಿಭಾಗಾಧಿಕಾರಿಗಳ ಮಟ್ಟದಲ್ಲಿ 6 ತಿಂಗಳಿಗೂ ಅವಧಿ ಮೀರಿದ 59,339 ಪ್ರಕರಣಗಳು  ಬಾಕಿ  ಇದ್ದವು ವಿಶೇಷ ಉಪವಿಭಾಗಾಧಿಕಾರಿಳನ್ನು ನೇಮಕ ಮಾಡಿ ಆ ಪ್ರಕರಣಗಳನ್ನು 22,400ಕ್ಕೆ ಇಳಿಸಲಾಗಿದೆ. ಮುಂದಿನ ದಿನಗಳಲ್ಲಿ ಆ ಎಲ್ಲ ಪ್ರಕರಣಗಳನ್ನು ಇತ್ಯರ್ಥ ಮಾಡಿ ಶೂನ್ಯಕ್ಕೆ  ತರಲಾಗುವುದು ಎಂದರು.

Revenue Minister 9

2025ಕ್ಕೇ ಚೇಳೂರು ತಾಲ್ಲೂಕು ಕಚೇರಿ ಕಟ್ಟಡ ಮಂಜೂರು

ಜಿಲ್ಲೆಯಲ್ಲಿ ನೂತನವಾಗಿ ರಚನೆಯಾಗಿರುವ ಚೇಳೂರು ತಾಲ್ಲೂಕಿಗೆ ತಾಲ್ಲೂಕು ಕಚೇರಿ ನಿರ್ಮಾಣಕ್ಕೆ ಹಣವನ್ನು ಈ ವರ್ಷ ಮಂಜೂರು ಮಾಡಲಾಗುವುದು. ಮುಂದಿನ ವರ್ಷ ಮಂಚೇನಹಳ್ಳಿ ತಾಲ್ಲೂಕಿನ ಕಚೇರಿಗೆ ಮಂಜೂರು ಮಾಡಲಾಗುವುದು. ಮುಖ್ಯವಾಗಿ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಭಾಗಕ್ಕೆ ಅತ್ಯಗತ್ಯವಾಗಿ ಬೇಕಾಗಿರುವ ಶಾಶ್ವತ ಕುಡಿಯುವ ನೀರಿನ ಯೋಜನೆಯಾದ ಎತ್ತಿನ ಹೋಳೆ ಯೋಜನೆಯ ನೀರನ್ನು ತರುವ ಪ್ರಯತ್ನವನ್ನು ನಾವು ಮಾಡುತ್ತೇವೆ ಎಂದು ಕಂದಾಯ ಸಚಿವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ.ಸಿ ಸುಧಾಕರ್ ಅವರು ಮಾತನಾಡಿ, ಬಹುದಶಕಗಳಿಂದ ಸವಾಲಾಗಿದ್ದ ಜೋಡಿ ಗ್ರಾಮಗಳ ಭೂ ದಾಖಲೆಗಳನ್ನು ಸರಿಪಡಿಸಲು ದಿಟ್ಟ ಕ್ರಮವಹಿಸುವಲ್ಲಿ ಈಗಿನ ಕಂದಾಯ ಸಚಿವರು ಮತ್ತು ನಮ್ಮ ಸರ್ಕಾರದ ಇಚ್ಚಾಶಕ್ತಿಯೇ ಪ್ರಮುಖ ಕಾರಣ, ಅದೇ ರೀತಿ ರೈತರಿಗೆ ಅತ್ಯಗತ್ಯವಾಗಿ ಬೇಕಾಗಿರುವ ಭೂ ದಾಖಲೆಗಳ ಸಮಸ್ಯೆಗಳನ್ನು ಶಾಶ್ವತವಾಗಿ ದೂರವಾಗಿಸಲು ನಮ್ಮ ಸರ್ಕಾರ ರೂಪಿಸಿರುವ “ಭೂ ಸುರಕ್ಷಾ ಯೋಜನೆ” ತುಂಬಾ ಸಹಾಯಕಾರಿಯಾಗಿದೆ. ಬೆಂಗಳೂರಿನ ತ್ಯಾಜ್ಯ ನೀರನ್ನು ಈ ಭಾಗದ ಕೆರೆಗಳಿಗೆ ತುಂಬಿಸುವ ಹೆಚ್.ಎನ್ ಮತ್ತು ಕೆ.ಸಿ ವ್ಯಾಲಿ ಯೋಜನೆಗೆ ಕೃಷ್ಣಭೈರೇಗೌಡರ ದೂರದೃಷ್ಟಿಯೇ  ಮುಖ್ಯ ಕಾರಣ ಎಂದು ಬಣ್ಣಿಸಿದರು.

ಅಮೃತ್ 2 ಯೋಜನೆಯಡಿ 18 ಕೋಟಿ

ಅಮಾನಿ ಭೈರ ಸಾಗರ ಕೆರೆಯಿಂದ ಗುಡಿಬಂಡೆ ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಸುವ ಉದ್ದೇಶಕ್ಕಾಗಿ ಅಮೃತ್ 2 ಯೋಜನೆಯಡಿ 18 ಕೋಟಿ ನಿಗದಿಪಡಿಸಲಾಗಿದೆ. ಸದ್ಯದಲ್ಲೆ ಈ ಕಾಮಗಾರಿಗೆ ಚಾಲನೆ ನೀಡಲು ಯೋಜಿಸಲಾಗಿದೆ. ಅಲ್ಲದೆ ಬಾಗೇಪಲ್ಲಿ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ, ಈ ಭಾಗದ ವಿದ್ಯಾವಂತರಿಗೆ ಉದ್ಯೋಗ ಕೊಡುವ ಉದ್ದೇಶದಿಂದ ಈಗಾಗಲೇ ಬಾಗೇಪಲ್ಲಿ ತಾಲ್ಲೂಕಿನಲ್ಲಿ 600 ಎಕರೆ ಜಮೀನಿಗೆ ಅಧಿಸೂಚನೆ ಹೊರಡಿಸಲಾಗಿದೆ. ಚಿಕ್ಕಬಳ್ಳಾಪುರ ನಗರದಲ್ಲಿ ಅಂತರಾಷ್ಟ್ರೀಯ ಮಟ್ಟದ ಹೂವಿನ ಮಾರುಕಟ್ಟೆಯನ್ನು 140 ಕೋಟಿ ವೆಚ್ಚದಲ್ಲಿ 20 ಎಕರೆ  ಜಾಗದಲ್ಲಿ ನಿರ್ಮಿಸಲು ಗುರಿ ಹೊಂದಲಾಗಿದ್ದು, ಮುಂದಿನ ಆಯವ್ಯಯದಲ್ಲಿ ಈ ಉದ್ದೇಶಕ್ಕೆ ಅನುದಾನದವನ್ನು ಮೀಸಲಿಡಲು ಯೋಜಿಸಲಾಗಿದೆ. ಒಟ್ಟಾರೆ ಚಿಕ್ಕಬಳ್ಳಾಪುರ ಜಿಲ್ಲೆಯ ಸರ್ವಾಂಗಿಣ ಅಭಿವೃದ್ಧಿಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ವಸ್ತುನಿಷ್ಠವಾಗಿ  ಮತ್ತು ಪ್ರಾದೇಶಿಕ ಭೇದರಹಿತವಾಗಿ ಮಾಡಲಾಗುವುದು ಎಂದು ತಿಳಿಸಿದರು.

ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಮಾತನಾಡಿ,ತಾಲ್ಲೂಕು ಕಚೇರಿ ಮತ್ತು ನೋಂದಣಾಧಿಕಾರಿಗಳ ಕಚೇರಿಗಳ ಅಭಿಲೇಖಾಲಯದಲ್ಲಿದ್ದ ಕಡತಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸೇರ್ಪಡೆಯಾಗುವಂತಹ ಕಿಡಿಗೇಡಿ ಪ್ರಕರಣಗಳಿಗೆ ಇಂದು ಜಾರಿಗೆ ತಂದಿರುವ “ಭೂಸುರಕ್ಷಾ” ಯೋಜನೆ ಶಾಶ್ವತ ಮುಕ್ತಿ ನೀಡಲಿದೆ. ಅಂತಹ ನಕಲಿ ಸೃಷ್ಟಿಕರ್ತರಿಗೆ ಈಗಿನ ಕಂದಾಯ ಸಚಿವರು ಸಿಂಹ ಸ್ವಪ್ನರಾಗಿದ್ದಾರೆ. ಸರ್ಕಾರಿ ಜಮೀನುಗಳು, ಸ್ಥಳಗಳನ್ನು ಸಂರಕ್ಷಣೆ ಮಾಡಿಕೊಳ್ಳಲು ನಮ್ಮ ಸರ್ಕಾರ  ವಿನೂತನ ಪ್ರಯೋಗ ಮಾಡಿ “ಲ್ಯಾಂಡ್ ಸೀಲಿಂಗ್” ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಪೋಡಿ ಮುಕ್ತ, ಪೈಕಿ ಮುಕ್ತ  ಅನುಷ್ಠಾನ ಮಾಡುವಲ್ಲಿ ಗುಡಿಬಂಡೆ ತಾಲ್ಲೂಕು ರಾಜ್ಯದಲ್ಲೆ ಪ್ರಥಮ ಸ್ಥಾನದಲ್ಲಿದೆ. ಅದೇ ರೀತಿ ಪಿ-ನಂಬರ್ ನ ಜಮೀನುಗಳನ್ನು ದುರಸ್ತಿ ಮಾಡುವ ಯೋಜನೆಯಲ್ಲಿ ಗುಡಿಬಂಡೆ ಅಗ್ರಸ್ಥಾನ ಉಳಿಸಿಕೊಳ್ಳಲಿದೆ ಎಂದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳಾದ ಮಾಲ, ಗಂಗಾದೇವಿ, ಕೋಮಲ, ನಾರಯಣಮ್ಮ ಶಶಿಕಲ, ಸುಶಿಲಮ್ಮ ರವರಿಗೆ ಪಿಂಚಣಿ ಮಂಜೂರು ಪತ್ರಗಳನ್ನು ವಿತರಿಸಲಾಯಿತು. 

ಇದನ್ನೂ ಓದಿ : ಈ ದಿನ ಸಂಪಾದಕೀಯ | ಮಾವೋವಾದಿಗಳು ಮುಖ್ಯವಾಹಿನಿಗೆ ಮರಳುತ್ತಿರುವುದು ಸ್ವಾಗತಾರ್ಹ

ಕಾರ್ಯಕ್ರಮದಲ್ಲಿ ಕಂದಾಯ ಆಯುಕ್ತರಾದ ಸುನಿಲ್ ಕುಮಾರ್, ಜಿಲ್ಲಾಧಿಕಾರಿ  ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಪೂಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಚಿಕ್ಕಬಳ್ಳಾಪುರ ನಗರಾಭಿವೃದ್ದಿ ಪ್ರಧಿಕಾರದ ಕೆ.ಎನ್, ಕೇಶವರೆಡ್ಡಿ, ಗುಡಿಬಂಡೆ ಪಟ್ಟಣ ಪಂಚಾಯತಿ ಅಧ್ಯಕ್ಷ ವಿಕಾಸ್ .ಎ, ಉಪಾಧ್ಯಕ್ಷ ಗಂಗರಾಜು, ತಹಸಿಲ್ದಾರ್ ಸಿಗ್ಬತ್ ವುಲ್ಲ, ಗುಡಿಬಂಡೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ ನಾಗಮಣಿ ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ರೈತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...