ಬೀದರ್‌ | ಕೈ ಬೆರಳು ಶಸ್ತ್ರಚಿಕಿತ್ಸೆ ವಿಫಲ : ಬ್ರಿಮ್ಸ್ ವೈದ್ಯರ ಅಮಾನತಿಗೆ ಆಗ್ರಹ

Date:

ಬ್ರಿಮ್ಸ್‌ ವೈದ್ಯರ ಎಡವಟ್ಟಿನಿಂದ ನನ್ನ ಬಲಗೈ ಬೆರಳಿನ ಶಸ್ತ್ರಚಿಕಿತ್ಸೆ ವಿಫಲವಾಗಿದ್ದು, ನಿರ್ಲಕ್ಷ್ಯ ತೋರಿದ ಸಂಬಂಧಪಟ್ಟ ವೈದ್ಯರ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವೆಚ್ಚ ಭರಿಸಬೇಕೆಂದು ನರಸಿಂಗ್ ಎಂಬುವರು ಆಗ್ರಹಿಸಿದ್ದಾರೆ.

ಈ ಕುರಿತು ಸೋಮವಾರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಶಿವಕುಮಾರ್‌ ಶೀಲವಂತ ಅವರಿಗೆ ಸಲ್ಲಿಸಿದರು.

ʼಹುಮನಾಬಾದ್ ತಾಲ್ಲೂಕಿನ ಸಿಂದಬಂದಗಿ ಗ್ರಾಮದ ನಿವಾಸಿಯಾಗಿದ್ದು, ನನ್ನ ಬಲಗೈ ಬೆರಳಿನ ಮೂಳೆ ಮುರಿದ ಕಾರಣ 2024ರ ನ.21 ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದೆ. ನ.26 ರಂದು ಕೈ ಬೆರಳಿನ ಶಸ್ತ್ರಚಿಕಿತ್ಸೆ ನಡೆಸಿ ನ.30 ರಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದ್ದರು. ವೈದ್ಯರ ಸಲಹೆಯಂತೆ ಮನೆಯಲ್ಲಿ ವಿಶ್ರಾಂತಿ ಪಡೆದಿದ್ದೇನೆ. ಬಳಿಕ 2025ರ ಜ.4 ರಂದು ಮತ್ತೊಮ್ಮೆ ಕೈ ಬೆರಳಿನ ಎಕ್ಸ್-ರೇ ತೆಗೆದರೆ ಮತ್ತೆ ನನ್ನ ಕೈ ಬೆರಳಿನ ಮೂಳೆ ಮೊದಲಿನಂತೆ ತುಂಡಾಗಿದ್ದು ಕಂಡು ಬಂದಿದೆʼ ಎಂದು ನರಸಿಂಗ್‌ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼವೈದ್ಯರ ನಿರ್ಲಕ್ಷತನದಿಂದಲೇ ನನ್ನ ಕೈಬೆರಳಿನ ಶಸ್ತ್ರಚಿಕಿತ್ಸೆ ಫಲಕಾರಿಯಾಗಿಲ್ಲ. ಇದಕ್ಕೆ ಕಾರಣರಾದ ವೈದ್ಯರನ್ನು ಕೂಡಲೇ ಅಮಾನತುಗೊಳಿಸಿ ಅವರ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕುʼ ಎಂದು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಯುವ ರಕ್ಷಣಾ ವೇದಿಕೆಯ ಗುರುದಾಸ್ ಅಮದಾಲಪಾಡ್, ಆನಂದ್ ರೆಡ್ಡಿ, ಗಣೇಶ್, ರವಿ, ನಿತೀನ್‌, ಸುನಿಲ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...