ಧರ್ಮಸ್ಥಳ | ತಮ್ಮ ಮೇಲೆಯೇ ಹಲ್ಲೆಯಾಗಿದೆ ಎಂದು ಸುಳ್ಳು ವರದಿ: ಅಜಿತ್ ಹನುಮಕ್ಕನವರ್ ಸೇರಿ ‘ಸುವರ್ಣ ನ್ಯೂಸ್’ನ ಮೂವರ ವಿರುದ್ಧ ಎಫ್‌ಐಆರ್

Date:

ಧರ್ಮಸ್ಥಳ ಪ್ರಕರಣದಲ್ಲಿ ಬೈಟ್‌ ಕೇಳಲು ಹೋದಾಗ ತಮ್ಮ ಸಿಬ್ಬಂದಿಗಳ ಮೇಲೆ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಇತರರು ಹಲ್ಲೆ ನಡೆಸಿದ್ದಾರೆ ಎಂದು ವರದಿ ಮಾಡಿದ್ದ ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ಅಜಿತ್ ಹನುಮಕ್ಕನವರ್ ಸೇರಿ ಮೂವರ ವಿರುದ್ಧ ದೂರು ದಾಖಲಿಸಲಾಗಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಬುಧವಾರ, ನಾಲ್ವರು ಯೂಟ್ಯೂಬರ್‌ಗಳ ಮೇಲೆ ಧರ್ಮಸ್ಥಳದ ಗೂಂಡಾಗಳು ಹಲ್ಲೆ ನಡೆಸಿದ್ದರು. ಹಲ್ಲೆಗೊಳಗಾದ ಯೂಟ್ಯೂಬರ್‌ಗಳನ್ನು ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುಗಳನ್ನು ನೋಡಲು ಬಂದಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್ ಅವರನ್ನು ಸುವರ್ಣ ನ್ಯೂಸ್‌ನ ವರದಿಗಾರ ಮತ್ತು ಕ್ಯಾಮೆರಾಮನ್‌ ತಡೆದು, ಬೈಟ್‌ ನೀಡುವಂತೆ ಒತ್ತಾಯಿಸಿದ್ದರು. ಆದರೆ, ತಿಮರೋಡಿ ಮತ್ತು ಗಿರೀಶ್ ಅವರು ಬೈಟ್‌ ನೀಡಲು ನಿರಾಕರಿಸಿದ್ದರು ಎಂದು ವರದಿಯಾಗಿದೆ.

ಬೈಟ್‌ ನೀಡಲು ನಿರಾಕರಿಸಿದ ಬಗ್ಗೆ ಸುದ್ದಿ ಮಾಡಿದ್ದ ಸುವರ್ಣ ನ್ಯೂಸ್‌, ಬೈಟ್ ಕೇಳಿದ್ದಕ್ಕೆ ತಮ್ಮ ವರದಿಗಾರ ಮತ್ತು ಕ್ಯಾಮೆರಾಮನ್ ಮೇಲೆ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಗಿರೀಶ್‌ ಮಟ್ಟಣ್ಣನವರ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿತ್ತು. ಮಾತ್ರವಲ್ಲದೆ, ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಸುವರ್ಣ ನ್ಯೂಸ್‌ ಸಿಬ್ಬಂದಿಗಳು ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುವರ್ಣ ನ್ಯೂಸ್‌ ಮಾಡಿರುವ ಆರೋಪ ಮತ್ತು ಪ್ರಕಟಿಸಿರುವ ಸುದ್ದಿ ಸುಳ್ಳು ಎಂದು ತಿಮರೋಡಿ ಬೆಂಬಲಿಗರು ಸ್ಪಷ್ಟನೆ ನೀಡಿದ್ದಾರೆ. ಮಾತ್ರವಲ್ಲದೆ, ತಿಮರೋಡಿ ಅವರ ಬೆಂಬಲಿಗ ಗಣೇಶ್‌ ಶೆಟ್ಟಿ ಎಂಬವರು ಅಜಿತ್ ಹನುಮಕ್ಕನವರ್, ವರದಿಗಾರ ಮತ್ತು ಕ್ಯಾಮೆರಾಮನ್ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಮಾಲೆಗಾಂವ್ ಸ್ಫೋಟ | ಪ್ರಮುಖ ಸಾಕ್ಷಿಗಳನ್ನೇ ಕೈಬಿಟ್ಟಿದ್ದ ಪ್ರಾಸಿಕ್ಯೂಷನ್; ಅನುಮಾನಗಳಿದ್ದರೂ ಮುಗಿದು ಹೋದ ಪ್ರಕರಣ

“ಸುವರ್ಣ ನ್ಯೂಸ್‌ನ ವರದಿಗಾರ ಮತ್ತು ಕ್ಯಾಮೆರಾಮನ್ ಉದ್ದೇಶಪೂರ್ವಕವಾಗಿ ಸುಳ್ಳು ಆರೋಪ ಮಾಡಿದ್ದಾರೆ. ತಿಮರೋಡಿ ಮತ್ತು ಗಿರೀಶ್‌ ಅವರನ್ನು ಬೈಟ್ ನೀಡುವಂತೆ ವರದಿಗಾರ ಮತ್ತು ಕ್ಯಾಮೆರಾಮನ್ ಒತ್ತಾಯಿಸಿದರು. ಬೈಟ್ ನೀಡಲು ನಿರಾಕರಿಸಿದ್ದಕ್ಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿ, ತಳ್ಳಾಟ ನಡೆಸಿದರು. ದಾಂಧಲೆ ನಡೆಸಿದವರೇ, ‘ಸುವರ್ಣ ನ್ಯೂಸ್‌ ವರದಿಗಾರರ ಮೇಲೆ ತಿಮರೋಡಿಯಿಂದ ಹಲ್ಲೆ’ ಎಂಬುದಾಗಿ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಾರೆ” ಎಂದು ಗಣೇಶ್‌ ಶೆಟ್ಟಿ ಆರೋಪಿಸಿದ್ದಾರೆ.

ಅವರ ದೂರಿನ ಆಧಾರದ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 126(2), 296, 351 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...