ರಾಹುಲ್ ವಿರುದ್ಧ ಸುಳ್ಳು ವಿಡಿಯೋ ಸೃಷ್ಟಿ | ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಎಫ್‌ಐಆರ್‌

Date:

  • ರಾಹುಲ್ ಗಾಂಧಿಯವರ ಕುರಿತು ಸುಳ್ಳು ವಿಡಿಯೋ ಸೃಷ್ಟಿಸಿ ಹರಿಬಿಟ್ಟ ಆರೋಪ
  • ಕಾಂಗ್ರೆಸ್‌ ನಾಯಕರ ದೂರಿನ ಮೇಲೆ ಹೈಗ್ರೌಂಡ್ಸ್ ಠಾಣೆ ಪೊಲೀಸರಿಂದ ಎಫ್‌ಐಆರ್‌

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಕಾಂಗ್ರೆಸ್‌ ನಾಯಕರು ನೀಡಿದ್ದ ದೂರಿನ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

“ರಾಹುಲ್ ಗಾಂಧಿಯವರ ಕುರಿತು ಸುಳ್ಳು ಜನಾಭಿಪ್ರಾಯ ಸೃಷ್ಟಿಸಲು ನೆಲದ ಕಾನೂನಿನ ಬಗ್ಗೆ ಗೌರವವೇ ಇಲ್ಲದಂತೆ ಟ್ವಿಟರ್‌ನಲ್ಲಿ ಸುಳ್ಳು ವಿಡಿಯೋ ಹರಿಬಿಟ್ಟಿದ್ದಾರೆ ಎಂದು ಆರೋಪಿಸಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ ವಿರುದ್ದ 17 ಜೂನ್ 2023ರಂದು ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಏನಿದು ಘಟನೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕರ ವಿರುದ್ಧ ಅವಹೇಳನಕಾರಿ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು.

ದೇಶದ್ರೋಹ ಚಟುವಟಿಕೆಯಲ್ಲಿ ಕಾಂಗ್ರೆಸ್‌ ಭಾಗಿಯಾಗುತ್ತಿದೆ ಎಂಬ ದೃಷ್ಟಿಯಲ್ಲಿ ಅನಿಮೇಷನ್‌ ಬಳಸಿ ವಿಡಿಯೋ ತಯಾರಿಸಿ ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿ ಅವಹೇಳನ ಮಾಡಲಾಗಿತ್ತು. ಆ ವಿಡಿಯೋವನ್ನು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್‌ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದೂರು ದಾಖಲಿಸಿದ್ದರು.

ದೂರು ನೀಡಿದ ಬಳಿಕ ಪ್ರತಿಕ್ರಿಯಿಸಿದ್ದ ಪ್ರಿಯಾಂಕ್‌ ಖರ್ಗೆ, “ಬಿಜೆಪಿಯ ಸುಳ್ಳು ಫ್ಯಾಕ್ಟರಿಯನ್ನು ನಾವು ಬಂದ್ ಮಾಡುತ್ತೇವೆ. ಹೋದ ಸಲ ಅವರ ಸರ್ಕಾರದಲ್ಲಿ ಅವರ ಆಟ ನಡೆದಿತ್ತು. ಯಾರು ಶಾಂತಿ ಕದಡುವ ಪ್ರಯತ್ನ ಮಾಡುತ್ತಾರೆ, ಅವರ ವಿರುದ್ಧ ಕಾನೂನು ಚೌಕಟ್ಟಿನ ಅಡಿ ಕ್ರಮ ಕೈಗೊಳ್ಳುತ್ತೇವೆ” ಎಂದು ಎಚ್ಚರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...