ಬೆಳ್ತಂಗಡಿ | ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ ದಾಖಲು

Date:

ಖಾಸಗಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸಾಮಾಜಿಕ ಹೋರಾಟಗಾರ ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಯೂಟ್ಯೂಬರ್‌ ಸಮೀರ್‌ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಧರ್ಮಸ್ಥಳದಲ್ಲಿ ನಿನ್ನೆ ಕುಡ್ಲ ರ‍್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್, ಯುನೈಟೆಡ್‌ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರಾಂಪೇಜ್‌ನ ಕ್ಯಾಮೆರಾ ಪರ್ಸನ್ ಮೇಲೆ ದಾಳಿ ಮಾಡಲಾಗಿದೆ. ಕ್ಯಾಮೆರಾವನ್ನು ಪುಡಿ ಮಾಡಿದ್ದಾರೆ ಮತ್ತು ಎಲ್ಲರೂ ಈ ಸದ್ಯ ಆಸ್ಪತ್ರೆಗೆ ದಾಖಲಾಗಿದ್ದು ಒಬ್ಬರಿಗೆ ತೀವ್ರ ಗಾಯಗಳಾಗಿವೆ.

ಇದನ್ನು ಓದಿದ್ದೀರಾ? ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ: ತಕ್ಷಣದ ಕ್ರಮಕ್ಕೆ ಡಿಜಿಟಲ್ ಮೀಡಿಯಾ ಫಾರ್ ಡೆಮಾಕ್ರಸಿ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಯ ಬಗ್ಗೆ ಸಾಮಾಜಿಕ ಹೋರಾಟಗಾರ ಗಿರೀಶ್‌ ಮಟ್ಟಣನವರ್‌ ಅವರ ಬಳಿಕ ಬೈಟ್ ಕೇಳಲು ಹೋದಾಗ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವರದಿಗಾರ ಹರೀಶ್‌ ದೂರು ನೀಡಿದ್ದಾರೆ. ಈ ವೇಳೆ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಅವರ ಗ್ಯಾಂಗ್‌ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂದೂ ಆರೋಪಿಸಿದ್ದಾರೆ.

“ಈ ವೇಳೆ ಸ್ಥಳಕ್ಕೆ ಬಂದ ಸಮೀರ್‌ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಪೊಲೀಸರು ರಕ್ಷಿಸಿ ಒಳಗೆ ಕೂರಿಸಿದ್ದರು. ಆಗ ಸ್ಥಳಕ್ಕೆ ಬಂದ ಜಯಂತ್‌ ಟಿ ನನ್ನ ವಿಡಿಯೋ ಮಾಡಿ ಹಲ್ಲೆ ಮಾಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ತಿಳಿಸಿದ್ದಾರೆ. ಬಿಎನ್‌ಎಸ್‌ ಸೆಕ್ಷನ್‌ 115(2), 189(2), 191(2), 351(2), 352, 190 ಅಡಿ ಎಫ್‌ಐಆರ್‌ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...